ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ : ಅಪಾಯದಿಂದ ಪಾರಾದ ಪ್ರಯಾಣಿಕರು

Date:

ಗುಬ್ಬಿ ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

- Advertisement -

ತಿಪಟೂರು ಡಿಪೋದಿಂದ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್‌ನ ಅಕ್ಸೆಲ್ ಭಾಗದಲ್ಲಿ ತಾಂತ್ರಿಕ ದೋಷ ಉಂಟಾಗಿ, ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದೇ ನಿಟ್ಟುಸಿರು ಬಿಡುವ ಸಂಗತಿ.

ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ನಂತರ ಪೊಲೀಸರು ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು.

ಈ ಘಟನೆ ಹಿನ್ನೆಲೆಯಲ್ಲಿ ವಾಹನಗಳ ನಿರ್ವಹಣೆ ಮತ್ತು ತಾಂತ್ರಿಕ ಪರಿಶೀಲನೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...