ಗುಬ್ಬಿ | ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

 ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಯಶಸ್ವಿಗೊಳಿಸಲು ಗುಬ್ಬಿ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

- Advertisement -

ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸೆ.5ರಂದು ನಡೆಯಲಿರುವ ಪ್ರಜಾ ಸೇವಾ ಆಂದೋಲನದ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್‌ಗಳಲ್ಲಿ ಅರ್ಜಿ ಹಾಗೂ ಅಹವಾಲು ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ತಾಲ್ಲೂಕಿನಾದ್ಯಂತ ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ನಡೆಸಲಾಗಿದೆ. ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಉಪಸ್ಥಿತರಿದ್ದು, ಸಾರ್ವಜನಿಕರ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗುವುದು. ಸ್ಥಳದಲ್ಲೇ ಇತ್ಯರ್ಥ ಸಾಧ್ಯವಾಗದ ಅರ್ಜಿಗಳನ್ನು ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹಂತದಲ್ಲಿ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿ ಸಂಬಂಧಪಟ್ಟ ಇಲಾಖೆಯ ಕೌಂಟರ್‌ನಲ್ಲಿ ಅರ್ಜಿ ಸಲ್ಲಿಸಿ ಟೋಕನ್ ಪಡೆಯಬೇಕು. ಬಳಿಕ ಉಪ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅರ್ಜಿಗಳ ಕುರಿತು ಚರ್ಚೆ ನಡೆಸಲಾಗುವುದು. ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದವರು ಸಮೀಪದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಮೂರು ದಿನಗಳಲ್ಲಿ ಉತ್ತರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಜಾ ಸೇವಾ ಆಂದೋಲನದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವುದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದು. ಜಿಲ್ಲೆಯಾದ್ಯಂತ ಪ್ರತಿ ಶನಿವಾರ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಈ ಆಂದೋಲನ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳುವುದು ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯಕ್ರಮದಲ್ಲಿ ವಿಶೇಷ ಮೊಬೈಲ್ ಆಧಾರ್ ಕೌಂಟರ್ ಕೂಡ ತೆರೆಯಲಾಗುವುದು. ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ ಬಿ., ತಾಪಂ ಇಒ ರಂಗನಾಥ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಬಿಇಒ ನಟರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪವಿತ್ರಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಗನ್ನಾಥ್ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...