ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ-ರಸಗೊಬ್ಬರ ದಾಸ್ತಾನು : ಕೃಷಿ ಇಲಾಖೆಯ ಮಿಂಚಿನ ದಾಳಿ

Date:

ರಾಜ್ಯದಲ್ಲಿ ಅನಧಿಕೃತವಾಗಿ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ದಾಸ್ತಾನು ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿದೆ.

- Advertisement -

ಕೃಷಿ ಇಲಾಖೆ ಆಯುಕ್ತ ಡಾ. ಬಿ.ಸಿ. ಸತೀಶ್ ಅವರ ಸೂಚನೆಯಂತೆ ಅಧಿಕಾರಿಗಳ ವಿಶೇಷ ತಂಡಗಳು ವಿವಿಧ ಜಿಲ್ಲೆಗಳ ರಸಗೊಬ್ಬರ ಮತ್ತು ಬೀಜ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿ, ನಿಯಮ ಉಲ್ಲಂಘಿಸಿ ಸಂಗ್ರಹಿಸಲಾಗಿದ್ದ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ಜಪ್ತಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲಿನ ಕಾರ್ತಿಕ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ-1966 ಉಲ್ಲಂಘಿಸಿ ಅನುಮತಿ ಇಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು ₹85 ಸಾವಿರ ಮೌಲ್ಯದ 180 ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಬೀಜವನ್ನು ವಶಪಡಿಸಿಕೊಳ್ಳಲಾಗಿದೆ. ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಪುಷ್ಪಗಿರಿ ಅಗ್ರೋ ಕೇಂದ್ರದಲ್ಲಿ ಸುಮಾರು ₹12 ಸಾವಿರ ಮೌಲ್ಯದ 30 ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಬೀಜ ಜಪ್ತಿ ಮಾಡಲಾಗಿದೆ. ಇದೇ ವೇಳೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಮದಿಹಳ್ಳಿಯ ಶ್ರೀ ವೆಂಕಟೇಶ್ವರ ಟ್ರೇಡರ್ಸ್‌ನಲ್ಲಿ ಸುಮಾರು ₹1.77 ಲಕ್ಷ ಮೌಲ್ಯದ 88 ಚೀಲ ಯೂರಿಯಾ ಹಾಗೂ ಫಾಸ್ಫೋ ಜಿಪ್ಸಮ್ ಗ್ರ್ಯಾನ್ಯುಲ್ಸ್ ವಶಪಡಿಸಿಕೊಳ್ಳಲಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನುಮತಿ ಇಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು ₹86 ಸಾವಿರ ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇನ್ನೊಂದೆಡೆ ಮಂಡ್ಯ ತಾಲೂಕಿನ ಇಂದುವಾಳದಲ್ಲಿ ಅನಧಿಕೃತವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 300 ಚೀಲ ಎನ್‌ಎಫ್‌ಎಲ್ ಯೂರಿಯಾವನ್ನು ಕೃಷಿ ಇಲಾಖೆ ಅಧಿಕಾರಿಗಳು ಜುಲೈ 4ರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಬೀಜ, ರಸಗೊಬ್ಬರ ಹಾಗೂ ಕೃಷಿ ಸಂಬಂಧಿತ ವಸ್ತುಗಳ ದಾಸ್ತಾನು ಮತ್ತು ಮಾರಾಟದಲ್ಲಿ ನಿಯಮ ಉಲ್ಲಂಘನೆ ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...