ಕುಣಿಗಲ್ | ಕಲ್ಲು ಕ್ವಾರಿಗೆ ಉರುಳಿ ಬಿದ್ದ ಲಾರಿ : ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು

Date:

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗ್ರಾಮದ ಸಮೀಪದ ಮಧು ಕ್ರಷರ್‌ನಲ್ಲಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ನೂರು ಅಡಿ ಆಳದ ಕಲ್ಲು ಕ್ವಾರಿಗೆ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಮೃತರನ್ನು ಮಧ್ಯಪ್ರದೇಶ ಮೂಲದ ಅಕ್ಷಯ್ (32) ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತ ಮೂಲದ ಸಹದೇವ್ (35) ಎಂದು ಗುರುತಿಸಲಾಗಿದೆ. ಇಬ್ಬರೂ ಸಂತೋಷ್ ಎಂಬ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸೋಮವಾರ ಎಂದಿನಂತೆ ಕ್ರಷರ್‌ನಿಂದ ಕಲ್ಲು ತುಂಬಿಕೊಂಡು ಲಾರಿ ಹೊರಟಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೇರವಾಗಿ ಸುಮಾರು ನೂರು ಅಡಿ ಆಳದ ಕಲ್ಲು ಕ್ವಾರಿಗೆ ಉರುಳಿ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...