ಮಧುಗಿರಿ | ಸರಣಿ ಬೋರ್‌ವೆಲ್ ಸ್ಟಾರ್ಟರ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಇಬ್ಬರು ಆರೋಪಿಗಳ ಬಂಧನ

Date:

 ರೈತರ ಜಮೀನುಗಳನ್ನು ಗುರಿಯಾಗಿಸಿಕೊಂಡು ಬೋರ್‌ವೆಲ್ ಸ್ಟಾರ್ಟರ್‌ಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ರಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಬೋರ್‌ವೆಲ್ ಸ್ಟಾರ್ಟರ್‌ಗಳ ಕಳ್ಳತನದ ಘಟನೆಗಳು ಹೆಚ್ಚಾಗಿದ್ದವು. ಈ ಸಂಬಂಧ ರಂಗನಹಳ್ಳಿ ಗ್ರಾಮದ ಹನುಮಂತಪ್ಪ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಹನುಮಂತಪ್ಪ ಅವರ ಸರ್ವೆ ನಂ. 59ರಲ್ಲಿ ಇರುವ ಮೂರು ಎಕರೆ ಅಡಿಕೆ ತೋಟದ ಬೋರ್‌ವೆಲ್‌ಗೆ ಅಳವಡಿಸಿದ್ದ ಸ್ಟಾರ್ಟರ್ ಅನ್ನು ಮೇ 10ರಂದು ಸಂಜೆ ನೀರು ಹಾಯಿಸಿದ ಬಳಿಕ ಬಾಕ್ಸ್‌ಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಆದರೆ ಮೇ 11ರಂದು ಬೆಳಿಗ್ಗೆ ತೋಟಕ್ಕೆ ಬಂದಾಗ ಸ್ಟಾರ್ಟರ್ ಬಾಕ್ಸ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿದ ವೇಳೆ, ಹನುಮಂತಪ್ಪ ಅವರ ಜಮೀನಷ್ಟೇ ಅಲ್ಲದೆ ರಂಗನಹಳ್ಳಿ ಗ್ರಾಮದ ರಂಗಣ್ಣ ಹಾಗೂ ರಾಮಲಿಂಗಪ್ಪ, ಬಡಚೌಡನಹಳ್ಳಿ ಗ್ರಾಮದ ಲಿಂಗಪ್ಪ ಮತ್ತು ಚಿಕ್ಕಮಾಲೂರು ಗ್ರಾಮದ ಚಿಕ್ಕಲಿಂಗಪ್ಪ ಅವರ ಜಮೀನುಗಳಲ್ಲಿದ್ದ ಬೋರ್‌ವೆಲ್ ಸ್ಟಾರ್ಟರ್‌ಗಳೂ ಕಳ್ಳತನವಾಗಿರುವುದು ಪತ್ತೆಯಾಯಿತು.

ತಾಂತ್ರಿಕ ಮಾಹಿತಿ ಹಾಗೂ ತನಿಖೆಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪುರವರ ಹೋಬಳಿಯ ಬ್ಯಾಲ್ಯ ಗ್ರಾಮದ ವಡ್ಡರಹಟ್ಟಿಯ ನಿವಾಸಿಗಳಾದ ಶ್ರೀನಿವಾಸ್ ಮತ್ತು ತಿರುಮಲೇಶ್ ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣವನ್ನು ಭೇದಿಸಿದ ಕೊಡಿಗೇನಹಳ್ಳಿ ಪೊಲೀಸರ ಕಾರ್ಯಾಚರಣೆಗೆ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಳುವಾದ ವಸ್ತುಗಳ ಪತ್ತೆ ಹಾಗೂ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...