ಐಪಿಎಲ್ ಬೆಟ್ಟಿಂಗ್‌ಗಾಗಿ ವಿವಿಧ ತಾಲೂಕುಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದವನ ಬಂಧನ

Date:

Advertisements

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್‌ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ ಗ್ರಾಮದವನು. ಹೆಸರಿಗೆ ವ್ಯವಸಾಯ ವೃತ್ತಿಯಾದರೂ, ಮೂಲ ಕಾಯಕ ಮನೆಗಳ್ಳತನ ಮಾಡುವುದಾಗಿತ್ತು. ಆ ಬಳಿಕ ಅದರಿಂದ ಬಂದ ಹಣದಲ್ಲಿ ಐಪಿಎಲ್‌ ಬೆಟ್ಟಿಂಗ್ ಆಡುವುದನ್ನು ಅಭ್ಯಾಸ ಮಾಡಿಕೊಂಡಿದ್ದ.

ಐಪಿಎಲ್ ಬೆಟ್ಟಿಂಗ್ ಅತಿಯಾಗಿ ಆಡುತ್ತಿದ್ದರಿಂದ ಈತನನ್ನು ಐಪಿಎಲ್ ಸಂತೋಷ್ ಎಂದು ಕರೆಯಲಾಗುತ್ತಿತ್ತು. ಈ ವ್ಯಕ್ತಿ ಬಿಂಡಗನವಿಲೆ, ಬೆಳ್ಳೂರು, ನಾಗಮಂಗಲ, ತುರುವೆಕೆರೆ, ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಮನೆಗಳ್ಳತನವನ್ನು ಮಾಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ: ಬಲಾಢ್ಯ ಸಮುದಾಯಗಳಿಗೆ ಶರಣಾಯಿತೇ ಸರ್ಕಾರ?

ಪದೇ ಪದೇ ಈ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾದ್ದರಿಂದ ನಾಗಮಂಗಲ ಸಿಪಿಐ ನಿರಂಜನ್ ನೇತೃತ್ವದಲ್ಲಿ ಪಿಎಸ್‌ಐ ರವಿಕುಮಾರ್, ಮಾರುತಿ ಒಳಗೊಂಡ 10 ಜನರ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಬಳಿಕ ಈ ತಂಡ ತಾಂತ್ರಿಕ ಪುರಾವೆಗಳನ್ನು ಆಧರಿಸಿ ಆರೋಪಿ ಸಂತೋಷ್‌ನನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದೆ. ಬಂಧಿತನಿಂದ 40 ಲಕ್ಷ ಮೌಲ್ಯದ 490 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

ತುಮಕೂರು | ದೆಹಲಿಯಲ್ಲಿ ನನ್ನ ವಿರುದ್ಧ ಮೂರು ಜನರಿಂದ ಪಿತೂರಿ : ಮಾಜಿ ಸಚಿವ ಕೆ ಎನ್ ರಾಜಣ್ಣ

"ಕಳೆದ ಬುಧವಾರ ಸಚಿವನಾಗಿದ್ದೆ, ಇಂದು ಮಾಜಿ ಸಚಿವನಾಗಿದ್ದೇನೆ, ಆದರೆ ನನಗೆ ಯಾವುದೂ...

Download Eedina App Android / iOS

X