ಪಾವಗಡ | ಪಡಿತರ ಅಕ್ಕಿ ಅಕ್ರಮ ಸಾಗಣೆ ಶಂಕೆ : ಪ್ರಕರಣ ದಾಖಲು

Date:

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿದ್ದ ಶಂಕೆ ಮೇರೆಗೆ ಪಾವಗಡ ಪೊಲೀಸರು 30.75 ಕ್ವಿಂಟಲ್ ಸಾರವರ್ಧಿತ (ಫೋರ್ಟಿಫೈಡ್) ಅಕ್ಕಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

- Advertisement -

ಪಡಿತರ ಚೀಟಿ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪತ್ರಕರ್ತರಿಂದ ಪಾವಗಡ ತಹಶೀಲ್ದಾರ್ ವೈ. ರವಿ ಅವರಿಗೆ ತಲುಪಿದ ಹಿನ್ನೆಲೆಯಲ್ಲಿ, ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 60 ಚೀಲ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಲಾಗಿದ್ದ ಅಶೋಕ್ ಲೇಲ್ಯಾಂಡ್ ಲಾರಿಯನ್ನು ವಶಪಡಿಸಿಕೊಂಡರು. ಬಳಿಕ ವಶಪಡಿಸಿಕೊಂಡ ಅಕ್ಕಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಆಹಾರ ಇಲಾಖೆಗೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಹಾರ ನಿರೀಕ್ಷಕ ರಾಹುಲ್ ಎ.ಸಿ. ಅವರು ಅಕ್ಕಿಯನ್ನು ಪರಿಶೀಲಿಸಿ ನೀಡಿದ ವರದಿಯ ಆಧಾರದ ಮೇಲೆ ಜುಲೈ 14ರಂದು ಪ್ರಕರಣ ದಾಖಲಾಗಿದೆ. ಜುಲೈ 7ರಂದು ಪಾವಗಡ–ತುಮಕೂರು ರಸ್ತೆಯ ರಾಯಲ್ ಹೆರಿಟೇಜ್ ಸಮೀಪ ಕೆ.ಎ-06-ಎಬಿ-6339 ಸಂಖ್ಯೆಯ ಲಾರಿಯಲ್ಲಿ ಅಕ್ಕಿ ಹಾಗೂ ನುಚ್ಚು ಅಕ್ಕಿ ಸಾಗಾಟವಾಗುತ್ತಿರುವ ಮಾಹಿತಿ ದೊರೆತಿದ್ದು, ಸ್ಥಳೀಯರು ವಾಹನವನ್ನು ತಡೆದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳ ಪರಿಶೀಲನೆಯಲ್ಲಿ ವಾಹನದಲ್ಲಿ ಒಟ್ಟು 60 ಚೀಲಗಳಲ್ಲಿ 30.75 ಕ್ವಿಂಟಲ್ ಸಾರವರ್ಧಿತ ಅಕ್ಕಿ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹71,340 ಎಂದು ಅಂದಾಜಿಸಲಾಗಿದೆ. ಭಾರತ ಆಹಾರ ನಿಗಮ (ಎಫ್‌ಸಿಐ)ದ ಅಧಿಕೃತ ಲೇಬಲ್ ಹೊಂದಿರುವ ಗೋಣಿಚೀಲಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇದು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಡಿತರ) ಅಕ್ಕಿಯಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಅಕ್ಕಿಯನ್ನು ಸುರಕ್ಷತಾ ದೃಷ್ಟಿಯಿಂದ ಕೆಎಫ್‌ಸಿಎಸ್‌ಸಿ ಪಾವಗಡ ಸಗಟು ಗೋದಾಮಿನಲ್ಲಿ ಸಂಗ್ರಹಿಸಲಾಗಿದೆ. ಈ ಸಂಬಂಧ ಎಸ್‌ಕೆಆರ್ ಜನರಲ್ ಸ್ಟೋರ್ಸ್ ಮಾಲೀಕ ಆರ್. ಸುರೇಶ್ ಹಾಗೂ ಲಾರಿ ಚಾಲಕ ಸೈಯ್ಯದ್ ಮೊಹಮ್ಮದ್ ತನ್ವೀರ್ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ (Essential Commodities Act) ಕಲಂ 3 ಮತ್ತು 7ರಡಿ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...