ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

Date:

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ದಸರಾ ಉತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಸರಾ ಅಂಗವಾಗಿ ನಡೆಯಲಿರುವ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸ್ಥಳ, ಸಮಯ, ವೇದಿಕೆ ನಿರ್ಮಾಣ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಉತ್ಸವದ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ರಸ್ತೆ ಸಂಚಾರ, ವಾಹನ ನಿಲುಗಡೆ, ಸಾರ್ವಜನಿಕ ಶೌಚಾಲಯ ಹಾಗೂ ತುರ್ತು ವೈದ್ಯಕೀಯ ಸೇವೆಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ, ಜನಸಂದಣಿ ನಿಯಂತ್ರಣ ಹಾಗೂ ಸಂಚಾರ ನಿರ್ವಹಣೆಗೆ ವಿಶೇಷ ಗಮನ ನೀಡಬೇಕು. ಉತ್ಸವ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ತುಮಕೂರು ದಸರಾ ಉತ್ಸವವು ಜಿಲ್ಲೆಯ ಸಾಂಸ್ಕೃತಿಕ ಪರಂಪರೆ, ಕಲೆ ಹಾಗೂ ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ವೇದಿಕೆಯಾಗುವಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪುಸ್ತಕ ಪ್ರದರ್ಶನ, ಸ್ಥಳೀಯ ಕಲಾವಿದರು, ಸಾಂಸ್ಕೃತಿಕ ತಂಡಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವಕ್ಕೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ, ಅನಗತ್ಯ ಅದ್ದೂರಿ ಹಾಗೂ ದುಂದು ವೆಚ್ಚಗಳಿಗೆ ಅವಕಾಶ ನೀಡದೆ ‘ಬರ ನಿರ್ವಹಣೆಗೆ ಆದ್ಯತೆ–ಸಂಪ್ರದಾಯಕ್ಕೆ ಗೌರವ’ ಎಂಬ ಆಶಯದೊಂದಿಗೆ ದಸರಾ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ದಸರಾ ಉತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ವಿವಿಧ ಉಪಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಸಮನ್ವಯ, ಕಾರ್ಯಕ್ರಮಗಳ ರೂಪುರೇಷೆ ಹಾಗೂ ಉತ್ಸವದ ಯಶಸ್ವಿ ಆಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ., ತುಮಕೂರು ಉಪವಿಭಾಗಾಧಿಕಾರಿ ನಾಹೀದ ಜûಂ ಜûಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಾರ್ಯಕಲಾಪ ಬಹಿಷ್ಕಾರ

 ಗೌರಿಬಿದನೂರು ಪಟ್ಟಣದಲ್ಲಿ ಹಿರಿಯ ವಕೀಲ ಸಣ್ಣಕ್ಕಿ ಅವರ ಮೇಲೆ ನಡೆದ ಚೂರಿ...

ಮಧುಗಿರಿ | ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು; ಕೃಷಿ ಹೊಂಡದಲ್ಲಿ ದುರಂತ

ಜಮೀನಿನ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ...

ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ...

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...