ತುಮಕೂರು | ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಕೃಷ್ಣಬೈರೇಗೌಡ

Date:

ಕನ್ನಡ ರಾಜ್ಯೋತ್ಸವದ ಸಂಭ್ರಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯಪಟ್ಟರು.

- Advertisement -

ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡು ತನ್ನದೇ ಆದ ಭೌಗೋಳಿಕ, ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಹಿನ್ನೆಲೆಯನ್ನು ಹೊಂದಿದೆ. ಅಮೋಘವರ್ಷನ ಕವಿರಾಜಮಾರ್ಗ ಕೃತಿಯ ಮೂಲಕ ಸ್ಪಷ್ಟ ರೂಪ ಪಡೆದ ಕನ್ನಡ ಭಾಷೆ ಸಮೃದ್ಧ ಸಾಹಿತ್ಯದೊಂದಿಗೆ ಬೆಳೆದು ಜಗತ್ತಿನ ಪ್ರಮುಖ ಸಾಂಸ್ಕೃತಿಕ ಘಟಕಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದರು.

1004317786

ಬೇರೆ ಬೇರೆ ಸಂಸ್ಥಾನಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸಬೇಕೆಂಬ ಕನ್ನಡಿಗರ ಕನಸು 1956ರ ನವೆಂಬರ್ 1ರಂದು ವಿಶಾಲ ಮೈಸೂರು ರಾಜ್ಯದ ನಿರ್ಮಾಣದೊಂದಿಗೆ ನನಸಾಯಿತು. ಭಾಷಾವಾರು ಪ್ರಾಂತ್ಯಗಳ ರಚನೆಗೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಒಲವು ತೋರಿದ ಪರಿಣಾಮ ಕನ್ನಡಿಗರ ಏಕೀಕರಣ ಸಾಧ್ಯವಾಯಿತು. 1973ರ ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಈ ಐತಿಹಾಸಿಕ ಸಾಧನೆಗೆ ಶ್ರಮಿಸಿದ ಎಲ್ಲರನ್ನು ಸ್ಮರಿಸಬೇಕು ಎಂದು ಹೇಳಿದರು.

ಕರ್ನಾಟಕ ಏಕೀಕರಣ, ಸ್ವಾತಂತ್ರ್ಯ ಹೋರಾಟ ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲಿ ತುಮಕೂರು ಜಿಲ್ಲೆ ಮಹತ್ವದ ಕೊಡುಗೆ ನೀಡಿದೆ. ಕಲ್ಪತರು ನಾಡು ಎಂದೇ ಪ್ರಸಿದ್ಧವಾಗಿರುವ ಈ ಜಿಲ್ಲೆ ಕೃಷಿಯಷ್ಟೇ ಅಲ್ಲದೆ ಸಾಹಿತ್ಯ, ರಂಗಭೂಮಿ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿದೆ. ದೇಶ-ವಿದೇಶಗಳಿಗೆ ಅಕ್ಷರ, ಅನ್ನ, ಆಶ್ರಯದ ದಾಸೋಹ ನೀಡಿದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆದರ್ಶಗಳು ಹಾಗೂ ಸಾಲುಮರದ ತಿಮ್ಮಕ್ಕ ಅವರ ಪರಿಸರ ಪ್ರೇಮ ಎಲ್ಲರಿಗೂ ಸ್ಫೂರ್ತಿಯಾಗಿವೆ ಎಂದರು.

1004317788

ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯೊಂದಿಗೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೂ ಪೂರಕವಾದ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಸಂವಿಧಾನವು ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ಭಾಷೆಯಲ್ಲಿ ಮಾತನಾಡುವ ಸ್ವಾತಂತ್ರ್ಯ ನೀಡಿದೆ. ಅಧಿಕಾರ ಬಳಸಿಕೊಂಡು ಒಂದು ಭಾಷೆಯನ್ನು ತುಳಿದು ಮತ್ತೊಂದು ಭಾಷೆಯನ್ನು ಹೇರುವ ಪ್ರಯತ್ನವನ್ನು ಪ್ರತಿರೋಧಿಸಬೇಕು. ಭಾರತ ಬಹುಭಾಷಾ ಮತ್ತು ಬಹುಸಂಸ್ಕೃತಿಗಳ ಒಕ್ಕೂಟವಾಗಿದ್ದು, ಎಲ್ಲ ಭಾಷೆ ಹಾಗೂ ಸಂಸ್ಕೃತಿಗಳಿಗೆ ಸಮಾನ ಗೌರವ ದೊರೆಯಬೇಕು. ಯಾವುದೇ ಭಾಷೆ ಅಥವಾ ಸಂಸ್ಕೃತಿಯನ್ನು ತುಳಿಯುವುದು ದೇಶದ ಐಕ್ಯತೆಗೆ ಧಕ್ಕೆ ಉಂಟುಮಾಡುತ್ತದೆ ಎಂದು ಹೇಳಿದರು.

ಕನ್ನಡ ನಾಡಿನ ನಾಡಗೀತೆಯಂತೆ ಹಳದಿ-ಕೆಂಪು ಬಣ್ಣದ ಕನ್ನಡ ಧ್ವಜಕ್ಕೂ ಅಧಿಕೃತ ಸ್ಥಾನಮಾನ ದೊರೆಯಬೇಕು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದರು.

ನಮ್ಮ ಮನೆ-ಮನ ಕನ್ನಡವಾಗಬೇಕು. ನಮ್ಮ ಆಲೋಚನೆಗಳೂ ಕನ್ನಡದಲ್ಲಿರಬೇಕು. ಬರೆದಂತೆ ಓದುವ, ಓದಿದಂತೆ ಬರೆಯುವ ಅದ್ಭುತ ಭಾಷೆ ಕನ್ನಡ. ಹಿರಿಯ ತತ್ವಜ್ಞಾನಿ ವಿನೋಬಾ ಭಾವೆ ಅವರು ಕನ್ನಡ ಲಿಪಿಯನ್ನು ವಿಶ್ವ ಲಿಪಿಗಳ ರಾಣಿ ಎಂದು ಹೊಗಳಿರುವುದು ನಮ್ಮೆಲ್ಲರ ಹೆಮ್ಮೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಒಗ್ಗೂಡಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

1004317787

ಕಾರ್ಯಕ್ರಮದಲ್ಲಿ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ವಿವಿಧ ಕ್ಷೇತ್ರಗಳ ಜಿಲ್ಲಾ ಮಟ್ಟದ 71 ಹಾಗೂ ತಾಲೂಕು ಮಟ್ಟದ 24 ಸಾಧಕರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇದಕ್ಕೂ ಮುನ್ನ ಬೆಳಿಗ್ಗೆ 7.45ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರವನ್ನು ಅಲಂಕೃತ ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಯಿತು. ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ಜನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಅಶ್ವಿಜ, ಪಾಲಿಕೆ ಆಯುಕ್ತೆ ಶುಭ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ ಕು.ಮಿರ್ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

1004317789

ನಗರದ ಬಟವಾಡಿಯ ಸೆಂಟ್ ಮೇರೀಸ್ ಶಾಲೆಯ ವಿದ್ಯಾರ್ಥಿಗಳು ‘ಕನ್ನಡ ನಾಡಿನ ರನ್ನದ ರತುನ ಕೇಳೋ ಕತೆಯನ್ನ’, ಕ್ಯಾತ್ಸಂದ್ರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ‘ದೇಶಕ್ಕೆ ಯೋಧ ನಾಡಿಗೆ ರೈತ’, ಬಿ.ಎಚ್.ರಸ್ತೆಯ ಶ್ರೀ ಸಿದ್ಧಗಂಗಾ ಪ್ರೌಢಶಾಲೆಯ ವಿದ್ಯಾರ್ಥಿಗಳು ‘ಜನುಮ ನೀಡುತ್ತಾಳೆ ನಮ್ಮ ತಾಯಿ’ ಹಾಗೂ ವಿಜಯ ಪಿಯು ಕಾಲೇಜಿನ ವಿದ್ಯಾರ್ಥಿಗಳು ‘ಹಚ್ಚೇವು ಕನ್ನಡ ದೀಪ’ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ಕನ್ನಡ ನಾಡಿನ ಹಿರಿಮೆ-ಗರಿಮೆಯನ್ನು ಸಾರಿದ ನೃತ್ಯ ರೂಪಕದಲ್ಲಿ ಕನ್ನಡದ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸ್ಮರಿಸಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು.

ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ಪೊಲೀಸ್ ವಿಭಾಗದಲ್ಲಿ 12ನೇ ಪಡೆ ಕೆಎಸ್‌ಆರ್‌ಪಿ ರಾಜ್ಯ ಮೀಸಲು ಪೊಲೀಸ್ ತಂಡ ಪ್ರಥಮ ಹಾಗೂ ಡಿಎಆರ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ತಂಡ ದ್ವಿತೀಯ ಬಹುಮಾನ ಪಡೆದವು.

ಎನ್‌ಸಿಸಿ ವಿಭಾಗದಲ್ಲಿ ಸರ್ವೋದಯ ಕಾಲೇಜಿನ ಬಾಲಕರ ತಂಡ ಪ್ರಥಮ ಹಾಗೂ ಸಿದ್ಧಗಂಗಾ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದವು. ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದಲ್ಲಿ ಆರ್ಯನ್ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡಗಳು ಬಹುಮಾನ ಪಡೆದವು.

ಸೇವಾದಳ ವಿಭಾಗದಲ್ಲಿ ಕನ್ನಿಕಾ ಆಂಗ್ಲಶಾಲೆ ಪ್ರಥಮ ಹಾಗೂ ಬಾಪೂಜಿ ಸಂಯುಕ್ತ ಪದವಿಪೂರ್ವ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡವು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಾರ್ಯಕಲಾಪ ಬಹಿಷ್ಕಾರ

 ಗೌರಿಬಿದನೂರು ಪಟ್ಟಣದಲ್ಲಿ ಹಿರಿಯ ವಕೀಲ ಸಣ್ಣಕ್ಕಿ ಅವರ ಮೇಲೆ ನಡೆದ ಚೂರಿ...

ಮಧುಗಿರಿ | ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು; ಕೃಷಿ ಹೊಂಡದಲ್ಲಿ ದುರಂತ

ಜಮೀನಿನ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ...

ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ...

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...