ದ್ವಿತೀಯ ಪಿಯುಸಿ ಫಲಿತಾಂಶ : 16ನೇ ಸ್ಥಾನಕ್ಕೆ ಏರಿದ ತುಮಕೂರು

Date:

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ತುಮಕೂರು ಜಿಲ್ಲೆ 16ನೇ ಸ್ಥಾನಕ್ಕೆ ಏರಿದೆ. ಪ್ರಸಕ್ತ ವರ್ಷ ಶೇ 86.09ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆ ಪಿಯುಸಿ ಫಲಿತಾಂಶದಲ್ಲಿ  ಸುಧಾರಣೆ ಕಂಡಿದೆ.

- Advertisement -

2025ರಲ್ಲಿ ಶೇ 72.02ರಷ್ಟು ಮಂದಿ ಉತ್ತೀರ್ಣರಾಗುವ ಮೂಲಕ 18ನೇ ಸ್ಥಾನಕ್ಕೆ ಏರಿಕೆ ಕಂಡಿತ್ತು. 2026ರಲ್ಲಿ ಉತ್ತಮ ಫಲಿತಾಂಶ ಬಂದಿದ್ದು, 16ನೇ ಸ್ಥಾನಕ್ಕೆ ಜಿಗಿದಿದೆ. ರಾಜ್ಯಮಟ್ಟದ ರ‍್ಯಾಂಕಿಂಗ್ ಪಟ್ಟಿಯಲ್ಲಿ ಎರಡು ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಒಟ್ಟಾರೆಯಾಗಿ ಶೇ 14.88ರಷ್ಟು ಫಲಿತಾಂಶ ಸುಧಾರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ನಗರದ ವಿದ್ಯಾನಿಧಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಎಂ.ರೋಹನ್, ಪಿ.ಪೂರ್ವಿ ರಾಜ್ಯ ಮಟ್ಟದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದಾರೆ. 600ಕ್ಕೆ 597 (ಶೇ 99.50) ಅಂಕಗಳನ್ನು ಪಡೆದುಕೊಂಡಿದ್ದಾರೆ.

ನಾಗಮಂಗಲ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಮಂಜುಳ ಹಾಗೂ ಮಂಜುನಾಥ್ ದಂಪತಿ ಪುತ್ರ. ಪರಿಶ್ರಮದಿಂದ ಅಧ್ಯಯನ ಮಾಡಿದ್ದರಿಂದ ಈ ಸಾಧನೆ ಮಾಡಲು ಸಹಕಾರಿಯಾಯಿತು. ಉಪನ್ಯಾಸಕರು, ಪೋಷಕರ ಬೆಂಬಲ, ಸಹಕಾರದಿಂದ ಸಾಧನೆ ಸಾಧ್ಯವಾಯಿತು ಎಂದು ರೋಹನ್ ಸ್ಮರಿಸುತ್ತಾರೆ.

ರೋಹನ್ ಅಕ್ಕ ಮಾನವಿ ಸಹ ಕಳೆದ 2 ವರ್ಷಗಳ ಹಿಂದೆ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದರು. ಪೋಷಕರು ಡಾಬಾ ನಡೆಸುತ್ತಿದ್ದಾರೆ.

ಒಟ್ಟು 23,957 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 19,774 ಮಂದಿ ತೇರ್ಗಡೆಯಾಗಿದ್ದಾರೆ. 9,475 ಬಾಲಕರಲ್ಲಿ 7,533 ಮಂದಿ (ಶೇ 79.05) ತೇರ್ಗಡೆಯಾಗಿದ್ದಾರೆ. 14,482 ಬಾಲಕಿಯರಲ್ಲಿ 12,241 (ಶೇ 84.53) ಮಂದಿ ಪಾಸಾಗಿದ್ದಾರೆ

ಗುಬ್ಬಿ ತಾಲ್ಲೂಕು ಬಿ.ಕೆ.ಗುಡ್ಡ ಗ್ರಾಮದ ಲಕ್ಷ್ಮಿ ಹಾಗೂ ಪ್ರಕಾಶ್ ಪುತ್ರಿ ಪೂರ್ವಿ ಅವರು ಮುಂದೆ ಚಾರ್ಟೆಡ್ ಅಕೌಂಟೆಂಟ್ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಇದೇ ಕಾಲೇಜಿನ ಎಸ್.ನಂದಶ್ರೀ 596 (ಶೇ 99.33) ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನ ಆಡಿಟರ್ ಶಶಿಧರ್ ಹಾಗೂ ಶಿಕ್ಷಕಿ ಚಂದ್ರಲೇಖ ಪುತ್ರಿ.

ನಗರದ ಸರ್ವೋದಯ ಕಾಲೇಜಿನ ಶ್ರೀರಕ್ಷಾ ಪಿಸಿಎಂಸಿ ವಿಭಾಗದಲ್ಲಿ 592 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಹಾಲಕ್ಷ್ಮಿ ನಗರದ ಸುಮ ಹಾಗೂ ವಿಜಯೇಂದ್ರ ಪುತ್ರಿ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...