ತುಮಕೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

Date:

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ  ಎಸ್ಸೆಸ್ಸೆಲ್ಸಿ ಪರೀಕ್ಷೆಯು ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು.

- Advertisement -

ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ. 2ರ ವರೆಗೆ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ ತುಮಕೂರು ಶೈಕ್ಷಣಿಕ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 37,130 ವಿದ್ಯಾರ್ಥಿಗಳು ಪರೀಕ್ಷೆಯನ್ನು ಸುಸೂತ್ರವಾಗಿ ಬರೆದಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ತುಮಕೂರು (ದ) ಶೈಕ್ಷಣಿಕ ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ 23,693 ವಿದ್ಯಾರ್ಥಿಗಳು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ 49 ಪರೀಕ್ಷಾ ಕೇಂದ್ರಗಳಲ್ಲಿ 13,437 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. 

ಜಿಲ್ಲೆಯಲ್ಲಿ ತುಮಕೂರು (ದ) 82 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 49 ಸೇರಿ ಒಟ್ಟು 131 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 

ಇಂದು ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳ ಮುಂದೆ ಜಮಾಯಿಸಿ ನೋಂದಣಿ ಸಂಖ್ಯೆ ಮತ್ತು ಕೊಠಡಿಗಳನ್ನು ಹುಡುಕಿಕೊಂಡು ಪರೀಕ್ಷೆ ಬರೆಯಲು ಉತ್ಸಾಹದಿಂದ ತೆರಳಿದ ದೃಶ್ಯಗಳು ಜಿಲ್ಲೆಯಾದ್ಯಂತ ಸಾಮಾನ್ಯವಾಗಿದ್ದವು. 

ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿಗಳು ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗಳಿಗೆ ಹೋಗಲು ಅನುಮತಿ ನೀಡುತ್ತಿದ್ದ ದೃಶ್ಯಗಳು ಕಂಡು ಬಂತು.

1002998980

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ವೀಕ್ಷಣೆ ಮಾಡಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಸಹ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 

ಪರೀಕ್ಷಾ ಕೇಂದ್ರಗಳಿಗೆ ಡಿಸಿ ಭೇಟಿ

ನಗರದ ಎಂಪ್ರೆಸ್ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ, ಕಾಳಿದಾಸ ಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆಯಲ್ಲಿ 37130 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮೂರು ಬಾರಿ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕ, ಭಯಕ್ಕೆ ಒಳಗಾಗದೆ ನಿರಾಳವಾಗಿ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.

ಯಾವುದೇ ರೀತಿಯ ಅಕ್ರಮಗಳಾಗದಂತೆ ಸುಲಲಿತವಾಗಿ ಪರೀಕ್ಷೆ ನಡೆಯಬೇಕು ಹಾಗೂ ಯಾವುದೇ ಲೋಪದೋಷಗಳು ಉಂಟಾಗದಂತೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

1002998982

ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಸೆಂಟರ್, ಸೈಬರ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಅವರು ಹೇಳಿದರು.

ಎಲ್ಲಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಕೊನೆ ಪರೀಕ್ಷೆ ಅಲ್ಲ, ಶಾಲೆಯಲ್ಲಿ ಕೇಳಿದ ಪಾಠ ಮತ್ತು ಓದಿರುವುದನ್ನು ನೆನಪಿನಲ್ಲಿಟ್ಟುಕೊಂಡು ಪರೀಕ್ಷೆಯನ್ನು ಉತ್ತಮವಾಗಿ ಬರೆಯಬೇಕು ಎಂದ ಅವರು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳಿಗೂ ಶುಭವಾಗಲಿ ಎಂದು ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್...