ತುಮಕೂರಿನಲ್ಲಿ ‘ಸಾಧನೆಯ ಸೇವೆಗಳ ಸಮರ್ಪಣೆ’ ಕಾರ್ಯಕ್ರಮ

Date:

 ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. 

- Advertisement -

 ಸೋಮವಾರ ಕಾರ್ಯಕ್ರಮ ನಡೆಯಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿನ ಪೂರ್ವ ಸಿದ್ಧತೆ ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 3 ವರ್ಷಗಳ ಹಿಂದೆ ನಡೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಿತ್ತು. ಐದು ಗ್ಯಾರಂಟಿಗಳೂ ಸೇರಿದಂತೆ ಆದ್ಯತಾ ವಿಷಯಗಳನ್ನು ರಾಜ್ಯದ ಜನತೆಗೆ ಆಶ್ವಾಸನೆ ನೀಡಿ ಚುನಾವಣೆ ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದೆವು. ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಐದೂ ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಲ್ಲದೆ ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ತಿಳಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...
1003317551

ಕಳೆದ 3 ವರ್ಷಗಳು ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದೆ. ಈ ಸುಸಂದರ್ಭದಲ್ಲಿ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಈ ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ ಸೇರಿದ್ದು, ನಾಳಿನ ಕಾರ್ಯಕ್ರಮದಲ್ಲಿ ಈ ಸಾಧನೆಯ ಪ್ರಶಸ್ತಿಯನ್ನು ಪ್ರಧಾನ ಮಾಡಲು ಇಂಗ್ಲೇಂಡ್‌ನಿಂದ ಗಿನ್ನಿಸ್ ಸಂಸ್ಥೆಯವರು ಆಗಮಿಸಲಿದ್ದಾರೆ ಎಂದು ವಿವರಿಸಿದರು. 

ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳಡಿ ಇ-ಪೌತಿ ಆಂದೋಲನಾ – 1,06,000; ದರಖಾಸ್ತು ಪೋಡಿ – 24,256; ಕಂದಾಯ ಗ್ರಾಮ ಹಕ್ಕು ಪತ್ರ – 20,666 ಮತ್ತು ಪೋಡಿ ಮುಕ್ತ ಅಭಿಯಾನ – 1570 ಸೇರಿದಂತೆ ಒಟ್ಟು 1,52,492 ಫಲಾನುಭವಿಗಳಿಗೆ ಹಕ್ಕು ಪತ್ರ/ಆದೇಶ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿಯೇ ದೊಡ್ಡ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಟ್ಟು 600 ಹುದ್ದೆಗಳ ನೇಮಕಾತಿ ಆದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು. 

ಕಂದಾಯ ಇಲಾಖೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವ ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರರು, ತಹಶೀಲ್ದಾರರು ಹಾಗೂ ಭೂಮಾಪನಾ ಇಲಾಖೆಯ ಸರ್ವೆಯರ್‌ಗಳು, ಸಹಾಯಕ ಭೂ ದಾಖಲೆಗಳ ಉಪನಿರ್ದೇಶಕರುಗಳಿಗೆ ಮಾನ್ಯರುಗಳಿಂದ ಪ್ರಶಂಸಣಾ ಪತ್ರವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. 

ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗಾಗಿ ಕಂದಾಯ ಇಲಾಖೆ ಹಾಗೂ ಪಂಚಾಯತಿ ಹಂತದಲ್ಲಿ ಎಲ್ಲಾ ತಾಲ್ಲೂಕುಗಳಿಂದ ಸುಮಾರು 3,000 ಬಸ್ಸುಗಳಲ್ಲಿ ಫಲಾನುಭವಿಗಳು ಆಗಮಿಸುತ್ತಿದ್ದು, ಬಸ್ಸು ಹೊರಡುವ ಜಾಗದಲ್ಲಿಯೇ ಫಲಾನುಭವಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಫಲಾನುಭವಿಗಳ ಸುರಕ್ಷತೆ ದೃಷ್ಟಿಯಿಂದ ಕರೆತರಲು ಮತ್ತು ವಾಪಸ್ ಕರೆದುಕೊಂಡು ಹೋಗಲು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಬಸ್ಸು ಹೊರಡುವ ಜಾಗದಿಂದ ಜಿಪಿಎಸ್ ವ್ಯವಸ್ಥೆ ಮೂಲಕ ಮಾರ್ಗದ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 1,52,000ಕ್ಕೂ ಹೆಚ್ಚು ಫಲಾನುಭವಿಗಳೇ ಇದ್ದು, ಒಟ್ಟು ಸುಮಾರು 2ಲಕ್ಷಕ್ಕೂ ಹೆಚ್ಚಿನ ಜನರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಸಚಿವರು ವಿವರಿಸಿದರು. 

1003317553

ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರಿಗೆ, ಶಾಸಕರಿಗೆ ಖುದ್ದು ಆಹ್ವಾನ ನೀಡಲಾಗಿದೆ. ಅಲ್ಲದೆ, ಪ್ರತಿಪಕ್ಷ ನಾಯಕರೂ, ಸಂಸದರೂ, ನಿಗಮ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. 

ಸುರಕ್ಷತೆ ದೃಷ್ಟಿಯಿಂದ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಹಾಗೂ ಕಾರ್ಯಕ್ರಮದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 15 ಅಂಬುಲೆನ್ಸ್ಗಳನ್ನು ನುರಿತ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ನಿಯೋಜನೆ ಮಾಡಲಾಗಿರುತ್ತದೆ. ಅಗ್ನಿನಂದಕ ವಾಹನಗಳನ್ನು ನಿಯೋಜನೆ ಮಾಡಲಾಗಿರುತ್ತದೆ. ಕಾರ್ಯಕ್ರಮದ ಸ್ಥಳದಲ್ಲಿ ಆಯಾ ಗ್ಯಾಲರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಮಜ್ಜಿಗೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಅದರ ನಿರ್ವಹಣೆಗಾಗಿ ವಿವಿಧ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್, ಗ್ಯಾರಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದಿಂದ ಅನುದಾನ ಅನ್ಯಾಯ: ಹಕ್ಕಿಗಾಗಿ ಮತ್ತೆ ಸುಪ್ರೀಂ ಅಂಗಳಕ್ಕೆ ಕರ್ನಾಟಕ!

ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ...

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವದಂತಿ; ಡಾ. ಜಿ ಪರಮೇಶ್ವರ್ ಸ್ಪಷ್ಟನೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ....