ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಜಂಟಿ ಆಶ್ರಯದಲ್ಲಿ ಮೇ 18 ಮತ್ತು 19ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ.
ವಿಶ್ವವಿದ್ಯಾನಿಲಯದ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಯಲಿರುವ ಈ ವಿಶಿಷ್ಟ ಮಾಧ್ಯಮ ಮೇಳವು ಕಲೆ, ವಿಜ್ಞಾನ ಹಾಗೂ ಮಾನವಿಕ ಸೇರಿದಂತೆ ಎಲ್ಲಾ ವಿಷಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ.
ಇಂದು ಮೇ 18ರ ಸೋಮವಾರ ಬೆಳಗ್ಗೆ 10:30 ಗಂಟೆಗೆ ಮಾಧ್ಯಮ ಹಬ್ಬದ ಉದ್ಘಾಟನಾ ಸಮಾರಂಭ ನಡೆಯಲಿದೆ. ತುಮಕೂರು ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಹಿರಿಯ ಪತ್ರಕರ್ತರಾದ ರವಿಶಂಕರ್ ಕೆ. ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹಿರಿಯ ಪತ್ರಕರ್ತರಾದ ಶೋಭಾ ಮಳವಳ್ಳಿ, ತುಮಕೂರು ವಿವಿಯ ಕುಲಸಚಿವರಾದ ನಾಹಿದಾ ಜಮ್ ಜಮ್, ಕೆಎಎಸ್ ಅವರು ಭಾಗವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಯೋಗೀಶ್ ಎಲ್., ಪರೀಕ್ಷಾಂಗ ವಿವಿಯ ಕುಲಸಚಿವರಾದ ಡಾ. ಹೆಚ್. ಎಸ್. ಮೋಹನ್, ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ದಾಕ್ಷಾಯಣಿ ಹಾಗೂ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರಲಿದ್ದಾರೆ.
ಮಾಧ್ಯಮ ಹಬ್ಬದ ಅಂಗವಾಗಿ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಮಾಧ್ಯಮ ಕೌಶಲ್ಯಗಳನ್ನು ಒರೆಗೆ ಹಚ್ಚಲು ವಿವಿಧ ಏಕವ್ಯಕ್ತಿ ಹಾಗೂ ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುವುದು.
ಏಕವ್ಯಕ್ತಿ ಸ್ಪರ್ಧೆಗಳು ವರದಿಗಾರಿಕೆ, ಟಿವಿ ಸುದ್ದಿ ಪ್ರಸ್ತುತಿ, ರೇಡಿಯೋ ಜಾಕಿ, ಛಾಯಾಗ್ರಹಣ, ಪೋಸ್ಟರ್ ವಿನ್ಯಾಸ, ಪುಟ್ಟಕಥೆ, ರೀಲ್ಸ್ ಮೇಕಿಂಗ್, ಪೀಸ್ ಟು ಕ್ಯಾಮೆರಾ, ಗುಂಪು ಸ್ಪರ್ಧೆಗಳಾದ ಚರ್ಚಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಜಾಹೀರಾತು ನಿರ್ಮಾಣ, ಗ್ರೂಪ್ ಡ್ಯಾನ್ಸ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮೇ 19ರ ಮಂಗಳವಾರ ಅಪರಾಹ್ನ 3:00 ಗಂಟೆಗೆ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ಜರುಗಲಿದೆ. ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸ್ಪಿçಂಗ್‌ಬೋರ್ಡ್ ಇಂಡಿಯಾ ಮತ್ತು ಗೌರ್ನಮೆಂಟ್ ಪಾರ್ಟ್ನರ್‌ಶಿಪ್ಸ್ನ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ಹಾಗೂ ಹೆಡ್ ಶ್ರೀ ಸಂತೋಷ್ ಅನಂತಪುರ ಮತ್ತು ರಾಜ್ಯಮಟ್ಟದ ಪ್ರಜಾಪ್ರಗತಿ ದಿನಪತ್ರಿಕೆ ಹಾಗೂ ಪ್ರಗತಿ ಟಿವಿಯ ಸಂಪಾದಕರಾದ ಎಸ್. ನಾಗಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ ಎಂದು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಸಿಬಂತಿ ಪದ್ಮನಾಭ ಕೆ. ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





