ತುಮಕೂರು | ವಿಷಪೂರಿತ ಆಹಾರ ಸೇವಿಸಿ 34 ಕುರಿ-ಮೇಕೆಗಳ ಸಾವು : ₹2.55 ಲಕ್ಷ ಪರಿಹಾರ ಮಂಜೂರು

Date:

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾರನಗೆರೆಗೊಲ್ಲರಹಟ್ಟಿಯಲ್ಲಿ ವಿಷಪೂರಿತ ಆಹಾರ ಸೇವಿಸಿ 32 ಕುರಿಗಳು ಹಾಗೂ 2 ಮೇಕೆಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಾಲೀಕರಿಗೆ ₹2.55 ಲಕ್ಷ ಪರಿಹಾರ ಮಂಜೂರಾಗಿದೆ.

- Advertisement -

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ನಗರದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಂತ್ರಸ್ತ ರೈತ ಬಲರಾಮ ಬಿನ್ ಮಾರಣ್ಣ ಅವರಿಗೆ ಪರಿಹಾರ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜುಲೈ 12 ಮತ್ತು 13ರಂದು ಸಂಭವಿಸಿದ ಈ ಘಟನೆಯಲ್ಲಿ ಒಟ್ಟು 34 ಕುರಿ-ಮೇಕೆಗಳು ಮೃತಪಟ್ಟಿದ್ದವು. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅನುಗ್ರಹ ಕೊಡುಗೆ ಯೋಜನೆ ಅಡಿಯಲ್ಲಿ ಪ್ರತಿ ಕುರಿ/ಮೇಕೆಗೆ ₹7,500ರಂತೆ ಒಟ್ಟು ₹2,55,000 ಪರಿಹಾರ ಮಂಜೂರು ಮಾಡಲಾಗಿದೆ.

ಘಟನೆಗೆ ಜಿಲ್ಲಾಡಳಿತ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ತ್ವರಿತವಾಗಿ ಸ್ಪಂದಿಸಿ, ಅಗತ್ಯ ಪರಿಶೀಲನೆ ನಡೆಸಿದ ಬಳಿಕ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಂಡಿರುವುದಾಗಿ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಹೆಚ್.ಎಂ. ಶಿವಪ್ರಸಾದ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿ ಡಾ. ಮೋಹನ್ ಹಾಗೂ ಶಿರಾ ಮುಖ್ಯ ಪಶುವೈದ್ಯಾಧಿಕಾರಿ ಡಾ. ಸಂಪತ್ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...