ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

Date:

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಅಭಾವದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೆ ತಕ್ಷಣ ಸ್ಪಂದಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೇದಿಗೆಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಕಾಳಪ್ಪನ ಪಾಳ್ಯ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಮತ್ತು ಮೂಲಸೌಕರ್ಯಗಳ ಕೊರತೆಯ ಕುರಿತು ಪರಿಶೀಲನೆ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ 6ನೇ ವಾರ್ಡ್‌ನ ಕೇದಿಗೆಹಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ಸ್ಥಳೀಯರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆಯನ್ನು ಇಂದೇ ಪರಿಹರಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನ ಪಾಳ್ಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕೊಳವೆಬಾವಿ ವಿಫಲವಾಗಿರುವುದರಿಂದ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿದರು.

ಸದ್ಯ ಪಕ್ಕದ ಗ್ರಾಮದಿಂದ ಪೈಪ್‌ಲೈನ್ ಮೂಲಕ ನೀರು ಪೂರೈಸುತ್ತಿರುವ ವ್ಯವಸ್ಥೆಯನ್ನು ವೀಕ್ಷಿಸಿ, ಪರ್ಯಾಯ ನೀರು ಸರಬರಾಜಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ವಿದ್ಯುತ್ ಸಂಪರ್ಕ ಕಲ್ಪಿಸದ ಕಾರಣ ನೀರು ಪೂರೈಕೆ ಆರಂಭವಾಗದಿರುವ ಕೊಳವೆಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಈ ಕಾರ್ಯವನ್ನು ಇಂದೇ ಪೂರ್ಣಗೊಳಿಸಿ, ನೀರು ಪೂರೈಕೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮಸ್ಥರೊಂದಿಗೆ ಚರ್ಚಿಸಿದ ಅವರು, ಕುಡಿಯುವ ನೀರಿನ ಲಭ್ಯತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಗಳಿಗೆ ನಿರಂತರವಾಗಿ ಕುಡಿಯುವ ನೀರು ಲಭ್ಯವಾಗುವಂತೆ ಪರ್ಯಾಯ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಸ್ಪಂದಿಸಿ, ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು ಜನರ ಮೂಲಭೂತ ಅಗತ್ಯವಾಗಿದ್ದು, ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು. ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಿಪಟೂರು ಉಪವಿಭಾಗದ ಉಪವಿಭಾಗಾಧಿಕಾರಿ ಸಪ್ತಶ್ರೀ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ವಾಸುದೇವ್, ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...