ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಅನಕ್ಷರಸ್ಥ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆಪ್ಟೆಂಬರ್‌ 28ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದರು.

- Advertisement -

ತುಮಕೂರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಸಂವಿಧಾನಬದ್ಧ, ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಯಬೇಕು. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಎಸ್‌ಐಆರ್‌ ಪ್ರಕ್ರಿಯೆ ಕುರಿತು ದೇಶದ ವಿವಿಧ ಭಾಗಗಳಲ್ಲಿ ಹಲವು ಪ್ರಶ್ನೆಗಳು ಹಾಗೂ ಆರೋಪಗಳು ಕೇಳಿಬಂದಿವೆ. ಬಬಲೇಶ್ವರ, ಬೆಳಗಾವಿ ದಕ್ಷಿಣ ಹಾಗೂ ಧಾರವಾಡ ದಕ್ಷಿಣ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ದಾಖಲೆಗಳು ಬಹಿರಂಗವಾಗಿವೆ ಎಂದು ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಮಾತನಾಡಿ, ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 2,500ಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಫಾರಂ ನಂ.7 ಮೂಲಕ ಅರ್ಜಿಗಳು ಸಲ್ಲಿಕೆಯಾಗಿರುವ ವಿಚಾರ ಗಂಭೀರವಾಗಿದೆ ಎಂದರು.

ಬಿಎಲ್‌ಒ ಅಥವಾ ಬಿಎಲ್‌ಎ-2ಗೆ ಸಂಬಂಧಿಸದ ವ್ಯಕ್ತಿಗಳು ಇಷ್ಟೊಂದು ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ಅರ್ಜಿ ಸಲ್ಲಿಸಿರುವುದು ಹೇಗೆ ಎಂಬುದರ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಅರ್ಜಿಗಳ ಸತ್ಯಾಸತ್ಯತೆ ಪರಿಶೀಲಿಸಿ, ತಪ್ಪು ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 74 ಸಾವಿರ ಮತದಾರರನ್ನು ತೆಗೆದುಹಾಕಲಾಗಿದೆ ಹಾಗೂ ಸುಮಾರು 39 ಸಾವಿರ ಮತದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಆರೋಪಿಸಿದರು. ಈ ಕುರಿತು ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದ್ದು, ಸಮಗ್ರ ತನಿಖೆ ಅಗತ್ಯವಿದೆ ಎಂದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಖಾಸಗಿ ಸಂಸ್ಥೆಯೊಂದರ ಪಾತ್ರವಿದೆ ಎಂಬ ಅನುಮಾನಗಳಿದ್ದು, ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಇಕ್ಬಾಲ್ ಅಹಮದ್ ಒತ್ತಾಯಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ವಾಸುದೇವಮೂರ್ತಿ ಮಾತನಾಡಿ, ಎಸ್‌ಐಆರ್‌ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದಾಖಲೆಗಳೊಂದಿಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಆರೋಪಗಳ ಕುರಿತು ಸಂಬಂಧಪಟ್ಟ ಚುನಾವಣಾ ಸಂಸ್ಥೆಗಳು ವಾಸ್ತವಾಂಶ ಪರಿಶೀಲಿಸಬೇಕು ಎಂದರು.

ಬಬಲೇಶ್ವರ, ಬೆಳಗಾವಿ ದಕ್ಷಿಣ ಹಾಗೂ ಧಾರವಾಡ ದಕ್ಷಿಣ ಕ್ಷೇತ್ರಗಳಲ್ಲಿನ ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದ ಆರೋಪಗಳ ಕುರಿತು ಪಾರದರ್ಶಕ ತನಿಖೆ ನಡೆಯಬೇಕು. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳು ಯಾವುದೇ ಕಾರಣಕ್ಕೂ ಕೈಬೀಳದಂತೆ ಚುನಾವಣಾ ಆಯೋಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸೆ.28ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ರಾಮಕೃಷ್ಣಪ್ಪ, ವಿವಿಧ ಮುಂಚೂಣಿ ಘಟಕಗಳ ಮುಖಂಡರಾದ ಸೈಯದ್ ದಾದಾಪೀರ್, ಗುರುಪ್ರಸಾದ್, ಅನಿಲ್‌ಕುಮಾರ್, ಭೈಲಸ್ವಾಮಿ, ಸುರೇಶ್‌ರಾಜ್, ಇರ್ಫಾನ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು...