ತುಮಕೂರು | ನಜೀರ್‌ಅಹ್ಮದ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಿಸಲು ಮನವಿ

Date:

 ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಾಗಲಕೋಟೆ ಜಿಲ್ಲೆಯ ಮುಖಂಡ ಹಾಗೂ ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೇನೆಯ ರಾಜ್ಯ ಗೌರವಾಧ್ಯಕ್ಷ ನಜೀರ್‌ಅಹ್ಮದ್ ಅಬ್ಬಾಸ್‌ಅಲಿ ಕಂಗನೊಳ್ಳಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

- Advertisement -

ಬುಧವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೇನೆ ಅಧ್ಯಕ್ಷ ನಗುತಾ ರಂಗನಾಥ್ ಮಾತನಾಡಿ, ನಜೀರ್‌ಅಹ್ಮದ್ ಅವರು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕೆಪಿಸಿಸಿ ಸದಸ್ಯರಾಗಿ ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ, ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜವಳಿ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯಾದ್ಯಂತ ಉತ್ತಮ ಕೊಡುಗೆ ನೀಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆ ಬಲಪಡಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿರುವ ನಜೀರ್‌ಅಹ್ಮದ್ ಅವರು ಯುವ ಕಾಂಗ್ರೆಸ್ ಸಮಾವೇಶಗಳು ಹಾಗೂ ವಿವಿಧ ಶಿಬಿರಗಳನ್ನು ನಡೆಸಿದ್ದಾರೆ. ತುಂಗಭದ್ರಾ ಕಾಡಾ ಯೋಜನೆಯ ಸದಸ್ಯರಾಗಿ ಒಳನಾಡು ಮೀನುಗಾರರ ಅಭಿವೃದ್ಧಿಗೂ ಶ್ರಮಿಸಿದ್ದು, ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದರು.

“ಬಾಗಲಕೋಟೆ ಜಿಲ್ಲೆಯಲ್ಲಿ ಇದುವರೆಗೆ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ. ನಜೀರ್‌ಅಹ್ಮದ್ ಅವರಿಗೆ ಅವಕಾಶ ನೀಡುವ ಮೂಲಕ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಬೇಕು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ವಿಚಾರದಲ್ಲಿ ಬೆಂಬಲ ನೀಡಿ, ಅವರ ನೇಮಕಕ್ಕೆ ಸಹಕರಿಸಬೇಕು” ಎಂದು ನಗುತಾ ರಂಗನಾಥ್ ಮನವಿ ಮಾಡಿದರು.

ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೇನೆಯ ಜಿಲ್ಲಾಧ್ಯಕ್ಷ ಬಾಬು ಪ್ರಕೃದ್ಧೀನ್, ಉಪಾಧ್ಯಕ್ಷ ಜಬ್ಬರ್ ಹಾಗೂ ಮುಖಂಡ ಸಾಗರ್ ಮಾತನಾಡಿ, ನಜೀರ್‌ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿಷ್ಠೆಯಿಂದ ದುಡಿದಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದರೆ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಬರಲಿದೆ ಎಂದರು.

ಖಾಲಿ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ನಜೀರ್‌ಅಹ್ಮದ್ ಅವರನ್ನು ನಾಮನಿರ್ದೇಶನ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...