ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

Date:

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ನೂರಾರು ಯುವಜನರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ದಸ್ತಗಿರಿ ಮಾಡಿರುವುದನ್ನು ಸಿಪಿಐ(ಎಂ) ತುಮಕೂರು ಜಿಲ್ಲಾ ಸಮಿತಿ ಖಂಡಿಸಿದೆ.

- Advertisement -

ಭಾರತೀಯ ಚುನಾವಣಾ ಆಯೋಗವನ್ನು ಬಿಜೆಪಿಯ ಚುನಾವಣಾ ಕಾರ್ಯಗಳ ‘ಬೆಂಬಲ ಕಚೇರಿ’ಯನ್ನಾಗಿ ಪರಿವರ್ತಿಸುವಲ್ಲಿ ಜ್ಞಾನೇಶ್ ಕುಮಾರ್ ಅವರು ಪ್ರಮುಖ ಸಾಧನವಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು, ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಕೇಂದ್ರ ಸರ್ಕಾರದ ನೇರ ನಿಯಂತ್ರಣದಲ್ಲಿರುವ ದೆಹಲಿ ಪೊಲೀಸರು ಇಡೀ ನಗರವನ್ನು ಕೋಟೆಯಂತೆ ಮಾಡಿ, ಜಂತರ್ ಮಂತರ್‌ನತ್ತ ಬಂದವರನ್ನೆಲ್ಲಾ ವಶಕ್ಕೆ ಪಡೆದಿದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ. ಅಲ್ಲಿ ಯಾವುದೇ ಸಭೆ ಅಥವಾ ಜಮಾವಣೆಗೆ ಅನುಮತಿ ನಿರಾಕರಿಸುವ ಮೂಲಕ ಸಂವಿಧಾನ ಖಾತರಿಪಡಿಸಿದ ಪ್ರತಿಭಟನೆಯ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸಲಾಗಿದೆ ಎಂದು ಪಕ್ಷ ದೂರಿದೆ.

ಇಷ್ಟೆಲ್ಲಾ ಅಡ್ಡಿಗಳಿದ್ದರೂ, ಡಿವೈಎಫ್‌ಐ, ಎಸ್‌ಎಫ್‌ಐ ಹಾಗೂ ಇತರ ವಿದ್ಯಾರ್ಥಿ-ಯುವಜನ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ದೌರ್ಜನ್ಯ ಮತ್ತು ತಡೆಗೋಡೆಗಳನ್ನು ಲೆಕ್ಕಿಸದೆ ಸ್ಥಳದಲ್ಲಿ ಸೇರಿದರು. ಪೊಲೀಸರು ಪ್ರತಿಭಟನಾಕಾರರೊಂದಿಗೆ ಕ್ರೂರವಾಗಿ ವರ್ತಿಸಿದರು ಎಂದು ಸಿಪಿಐ(ಎಂ) ಆರೋಪಿಸಿದೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಹಿರಿಯ ನಾಯಕಿ ಬೃಂದಾ ಕಾರಟ್, ಡಿವೈಎಫ್‌ಐ ಪ್ರಧಾನ ಕಾರ್ಯದರ್ಶಿ ಹಿಮಾಘ್ನರಾಜ್ ಭಟ್ಟಾಚಾರ್ಯ, ಅಧ್ಯಕ್ಷ ಹಾಗೂ ಸಂಸದ ಎ.ಎ. ರಹೀಮ್, ಎಸ್‌ಎಫ್‌ಐ ಪ್ರಧಾನ ಕಾರ್ಯದರ್ಶಿ ಸೃಜನ್ ಭಟ್ಟಾಚಾರ್ಯ, ಅಧ್ಯಕ್ಷ ಆದರ್ಶ ಎಂ. ಸಾಜಿ ಹಾಗೂ ಜಂಟಿ ಕಾರ್ಯದರ್ಶಿ ಮತ್ತು ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಹಲವು ನಾಯಕರನ್ನು ದಸ್ತಗಿರಿ ಮಾಡಲಾಯಿತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಡಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ತೀವ್ರವಾಗಿ ಮೊಟಕುಗೊಳಿಸಲಾಗುತ್ತಿದೆ ಎಂದು ಸಿಪಿಐ(ಎಂ) ಹೇಳಿದೆ. ಪ್ರತಿಭಟನೆಗೆಂದೇ ಮೀಸಲಾದ ಜಂತರ್ ಮಂತರ್‌ನಲ್ಲೂ ಅನುಮತಿ ನಿರಾಕರಿಸಿರುವುದು ಈ ಸರ್ಕಾರ ಎಷ್ಟು ಅಸಹಿಷ್ಣುವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಪಕ್ಷ ಟೀಕಿಸಿದೆ.

ಎಲ್ಲಾ ನಿರ್ಬಂಧಗಳನ್ನು ಎದುರಿಸಿ ಪ್ರತಿಭಟನೆಗೆ ಮುಂದಾದ ಯುವಜನರು, ವಿದ್ಯಾರ್ಥಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಜನರನ್ನು ಸಿಪಿಐ(ಎಂ) ಅಭಿನಂದಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ಹಾಗೂ ಚುನಾವಣಾ ಆಯೋಗದಂತಹ ಸರ್ಕಾರಿ ಸಂಸ್ಥೆಗಳ ತಟಸ್ಥತೆಯನ್ನು ಕಾಪಾಡುವ ಹೋರಾಟ ಮುಂದುವರಿಯಲಿದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...