ತುಮಕೂರು | ದಲಿತ ಯುವಕನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ : ಪರಮೇಶ್ವರ್, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

Date:

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ  ಯುವಕ ಸಿಂಹಾದ್ರಿ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

- Advertisement -

ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯ ಪ್ರಕರಣದಲ್ಲಿ ಪ್ರಭಾವಿಗಳ ಜೊತೆಗೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಚಳವಳಿ ನಿಗ್ರಹಕ್ಕೆ ತೋರುವ ಶೌರ್ಯ ರಕ್ಷಣೆಯಲ್ಲೇಕಿಲ್ಲ? ಅಮಿತ್ ಶಾ...

ಯಾವುದೇ ಒಂದು ಆಡಳಿತದ ನಿಜವಾದ ಮಾನದಂಡ ಇರುವುದು ರಾಜಕೀಯ ಭಾಷಣಗಳಲ್ಲಲ್ಲ, ಬದಲಿಗೆ ಆ ಆಡಳಿತದಲ್ಲಿ ಸಾಮಾನ್ಯ ನಾಗರಿಕರು, ವಿಶೇಷವಾಗಿ ಮಹಿಳೆಯರು, ಪಡೆಯುವ ಭದ್ರತೆಯಲ್ಲಿ. ರಾಜಧಾನಿಯಲ್ಲಿ ಸಾಲು ಸಾಲಾಗಿ ಹರಿದ ರಕ್ತ ಮತ್ತು ಈ...

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ಕಸಾಪುರದಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಸಂಚು ರೂಪಿಸಿ ಪರಿಶಿಷ್ಟ ಜಾತಿಯ ಯುವಕ ಸಿಂಹಾದ್ರಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದರು.

ಮಾರುತೇಶ್ ಎಂಬಾತ ಸಿಂಹಾದ್ರಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿದ ಅವರು, ಪ್ರಕರಣದ ಹಿಂದೆ ಯಾವುದೇ ಪಿತೂರಿ ಇದ್ದರೆ ಅದರ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದೊಂದು ಅತ್ಯಂತ ಹೇಯ ಮತ್ತು ಅಮಾನವೀಯ ಕೃತ್ಯವಾಗಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಎಂದು ಹುಚ್ಚಯ್ಯ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ದಲಿತ ಯುವಕನ ಹತ್ಯೆಯಾದರೂ ಮೃತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ಕೊಡಿಸುವ ಕಾಳಜಿ ತೋರಿಲ್ಲ ಎಂದು ಹುಚ್ಚಯ್ಯ ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಜವಾಬ್ದಾರಿ ಮರೆತು ಆರ್‌ಎಸ್‌ಎಸ್‌ ವಿರುದ್ಧದ ರಾಜಕೀಯ ವಿಚಾರಗಳಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದ ಅವರು, ಸಚಿವರು ತಮ್ಮ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ರಾಜೀನಾಮೆಗೆ ಆಗ್ರಹಿಸಿದರು.

ಹಿಂದಿನ ಅವಧಿಯಲ್ಲಿ ಡಾ. ಜಿ. ಪರಮೇಶ್ವರ್ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ 327 ದಲಿತರ ಹತ್ಯೆ ಹಾಗೂ 620 ಅತ್ಯಾಚಾರ ಪ್ರಕರಣಗಳು ನಡೆದಿದ್ದವು ಎಂದು ಹುಚ್ಚಯ್ಯ ಆರೋಪಿಸಿದರು. ಈ ಅಂಕಿಅಂಶಗಳ ಮೂಲವನ್ನು ಬಹಿರಂಗಪಡಿಸುವಂತೆ ಅವರು ಸರ್ಕಾರವನ್ನು ಆಗ್ರಹಿಸಿದರು.

ತಮ್ಮದೇ ಜಿಲ್ಲೆಯಲ್ಲಿ ದಲಿತ ಯುವಕನ ಹತ್ಯೆಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದ ಹುಚ್ಚಯ್ಯ, ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು. ಸಚಿವರ ವಿರುದ್ಧ ಬಿಜೆಪಿ ವತಿಯಿಂದ ಮತ್ತಷ್ಟು ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ವೈ.ಹೆಚ್. ರವಿಚಂದ್ರ ಮಾತನಾಡಿ, ಕಸಾಪುರದ ಸಿಂಹಾದ್ರಿ ಹತ್ಯೆ ಖಂಡನೀಯ. ಒಬ್ಬನೇ ಮಗನನ್ನು ಕಳೆದುಕೊಂಡಿರುವ ಆತನ ತಾಯಿ ಅನ್ನಪೂರ್ಣಮ್ಮ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ ಎಂದರು.

ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಮೃತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಪರಿಹಾರ ಒದಗಿಸುವ ಪ್ರಯತ್ನ ಮಾಡಬೇಕಿತ್ತು. ಕೂಡಲೇ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯ. ಜಾತಿಯ ಕಾರಣಕ್ಕೆ ಯಾರೊಬ್ಬರೂ ಬಲಿಯಾಗಬಾರದು ಎಂದು ಹೇಳಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ವೈ.ಹೆಚ್. ರವಿಚಂದ್ರ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಭೈರಣ್ಣ, ಹೆಚ್.ಎಂ. ರವೀಶಯ್ಯ, ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ಕಾರ್ಯದರ್ಶಿ ಕೆ. ವೇದಮೂರ್ತಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತ್ಯಮಂಗಲ ಜಗದೀಶ್, ನಗರ ಅಧ್ಯಕ್ಷ ಧನುಷ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ವಸಂತಮ್ಮ, ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಂಜನಮೂರ್ತಿ, ಶಿವರಾಜ್, ಜಗದೀಶ್, ಕಾರ್ಯದರ್ಶಿ ಸಿದ್ಧಗಂಗಯ್ಯ, ನಗರ ಅಧ್ಯಕ್ಷ ನಾಗರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ...

ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ...

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...