ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

Date:

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೇಕ್ ಇನ್ ಇಂಡಿಯಾ ಅಭಿಯಾನದಡಿ ಉತ್ಪಾದನೆ ಆಧಾರಿತ ಪ್ರೋತ್ಸಾಹಕ (ಪಿಎಲ್‌ಐ) ಯೋಜನೆಗೆ ₹11,500 ಕೋಟಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

- Advertisement -

ವಸಂತನರಸಾಪುರ ಕೈಗಾರಿಕಾ ಪ್ರದೇಶದ ಜಪಾನ್ ಟೌನ್‌ಶಿಪ್ ವಲಯದಲ್ಲಿ ಆದರ್ಶ ಕೆಮಿಕಲ್ಸ್‌ನ ನೂತನ ಉತ್ಪಾದನಾ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವನಾಗಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಹಿತದೃಷ್ಟಿಯಿಂದ ಅಗತ್ಯ ಯೋಜನೆಗಳನ್ನು ರೂಪಿಸುವುದು ತಮ್ಮ ಜವಾಬ್ದಾರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಕೈಗಾರಿಕೆಗಳಿಗೆ ಅಗತ್ಯ ಅನುಮತಿಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಚೀನಾದ ಮೇಲಿನ ಅವಲಂಬನೆ ಕಡಿಮೆ ಮಾಡಿ ಪರ್ಯಾಯವಾಗಿ ಮ್ಯಾಗ್ನೆಟ್ ಉತ್ಪಾದನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಐದು ಕಂಪನಿಗಳಿಗೆ ₹7,200 ಕೋಟಿ ನೆರವು ಒದಗಿಸಲಾಗಿದೆ ಎಂದು ಹೇಳಿದರು.

ಆದರ್ಶ ಕೆಮಿಕಲ್ಸ್‌ನ ನೂತನ ಉತ್ಪಾದನಾ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಪೂರಕವಾಗಿದೆ. ಈ ಘಟಕದಲ್ಲಿ ಸೋಲಾರ್ ಪ್ಯಾನಲ್, ಆಟೋಮೊಬೈಲ್, ಡಿಆರ್‌ಡಿಒ ಹಾಗೂ ರಕ್ಷಣಾ ಇಲಾಖೆಗೆ ಅಗತ್ಯವಿರುವ ವಿಶೇಷ ರಾಸಾಯನಿಕಗಳನ್ನು ಉತ್ಪಾದಿಸಲಾಗುತ್ತದೆ. ಈ ಉತ್ಪಾದನಾ ಘಟಕಕ್ಕೆ ಪಿಎಲ್‌ಐ ಯೋಜನೆಯಡಿ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಆದರ್ಶ ಕೆಮಿಕಲ್ಸ್ ಮಾಲೀಕ ಓಂಕಾರಮೂರ್ತಿ ಮಾತನಾಡಿ, ಕಳೆದ 15 ವರ್ಷಗಳಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಮ್ಮ ಆದರ್ಶ ಸೂಪರ್ ಸ್ಪೆಷಾಲಿಟಿ ಕೆಮಿಕಲ್ಸ್ ಘಟಕ ಕಾರ್ಯನಿರ್ವಹಿಸುತ್ತಿದೆ. ಪರಿಸರ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿರುವ ಘಟಕದಲ್ಲಿ ಶೇ.90ರಷ್ಟು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದರು.

ಸಮುದಾಯ ಸೇವಾ ನಿಧಿಯ ಮೂಲಕ ಸುತ್ತಮುತ್ತಲಿನ ಗ್ರಾಮಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಉಚಿತ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ನೂತನ ಉತ್ಪಾದನಾ ಘಟಕ ಆರಂಭವಾದ ಬಳಿಕ ಈ ಸಾಮಾಜಿಕ ಸೇವಾ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ವಸಂತನರಸಾಪುರ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಸಿ.ವಿ. ಹರೀಶ್ ಮಾತನಾಡಿ, ಕೈಗಾರಿಕಾ ಪ್ರದೇಶದ ವಿವಿಧ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಅಸೋಸಿಯೇಷನ್ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಆರಂಭಿಸಲು ಆರ್ಥಿಕ ಸಹಕಾರ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆದರ್ಶ ಕೆಮಿಕಲ್ಸ್‌ನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಅಕ್ಷಯ್, ಅನೂಫ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಾ | ಆತ್ಮವಿಶ್ವಾಸ, ಪರಿಶ್ರಮವೇ ಸಾಧನೆಯ ಯಶಸ್ಸಿನ ಸೂತ್ರ: ದೀಪಿಕಾ ಟಿಸಿ

ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮ ಅತ್ಯಂತ...

ತುರುವೇಕೆರೆಯಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಸುಗಮ ಸಂಚಾರಕ್ಕೆ ಅನುವು

ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಪಟ್ಟಣ...

ತುಮಕೂರು | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ನಾಗರಿಕರಾಗಿ: ಪಿಎಸ್‌ಐ ತಾರ ಕೆ.ಸಿ.

ಯುವಜನರು ಜಾಗೃತರಾಗಿರಬೇಕು. ಉನ್ನತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ಸಮಾಜದ ಆಸ್ತಿಯಾಗಬೇಕು....

ತುಮಕೂರು | ಸುಫಿಯಾ ಕಾನೂನು ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ತುಮಕೂರು ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ...