ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

Date:

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ ಮಕ್ಕಳಿಗೆ ಕಯಾಕಿಂಗ್, ಕನೋಯಿಂಗ್ ಹಾಗೂ ಶೂಟಿಂಗ್ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಹಾಗೂ ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಳೆದ ಮಾರ್ಚ್ 15ರಿಂದ ನಗರದ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕನೋಯಿಂಗ್ ತರಬೇತಿ ಆರಂಭವಾಗಿದೆ. ಇಲ್ಲಿ ತರಬೇತಿ ಪಡೆದ ವಿವಿಧ ರಾಜ್ಯ/ಜಿಲ್ಲೆಗಳ ವಿದ್ಯಾರ್ಥಿಗಳು ವೈಜಾಗ್‌ನಲ್ಲಿ ನಡೆದ ಸೌತ್ ಅಸ್ಮಿತಾ ಕ್ರೀಡೆ ಹಾಗೂ ಭೋಪಾಲ್‌ನಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ, 4 ಚಿನ್ನ, 3 ಬೆಳ್ಳಿ ಹಾಗೂ 5 ಕಂಚಿನ ಪದಕ ಗೆದ್ದು ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಅವರು ತಿಳಿಸಿದರು.

ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ತರಬೇತಿಗಳಲ್ಲಿ ಭಾಗವಹಿಸಲು ಅನುವಾಗುವಂತೆ, ಸ್ಥಳೀಯ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಕಯಾಕಿಂಗ್, ಕನೋಯಿಂಗ್ ಮತ್ತು ಶೂಟಿಂಗ್ ತರಬೇತಿ ನೀಡಲು ಅಗತ್ಯ ಮೂಲಸೌಕರ್ಯ ಹಾಗೂ ಉತ್ತಮ ತರಬೇತುದಾರರನ್ನು ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರುವ ಕ್ರೀಡಾಪಟುಗಳನ್ನು ರೂಪಿಸುವುದು ಗುರಿ ಎಂದರು.

Advertisements

ಮೊಬೈಲ್ ಬಳಕೆಯಿಂದ ಮಕ್ಕಳು ಕ್ರೀಡೆಯಿಂದ ದೂರವಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕೆಂದು ಮನವಿ ಮಾಡಿದರು. ಕ್ರೀಡೆಯಿಂದ ಏಕಾಗ್ರತೆ, ಮಾನಸಿಕ ಸದೃಢತೆ ಹಾಗೂ ದೈಹಿಕ ಕ್ಷಮತೆ ಹೆಚ್ಚುತ್ತದೆ ಎಂಬುದನ್ನು ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಉತ್ತಮ ತರಬೇತುದಾರರು ಲಭ್ಯರಿದ್ದು, ಮಕ್ಕಳನ್ನು ಸ್ಪರ್ಧೆಗಳಿಗೆ ಅಣಿಗೊಳಿಸಲು ಮೊದಲಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗುವುದು. ಇದಕ್ಕೆ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗದಿಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ ಅವರಿಗೆ ಸೂಚಿಸಿದರು. ತುಮಕೂರಿನಿಂದ ಉತ್ತಮ ತಂಡ ರೂಪಿಸುವ ಗುರಿಯಿದ್ದು, ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹೆಚ್ಚಿನ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದರು.

ಭಾರತೀಯ ಶೂಟರ್ ಒಲಂಪಿಯನ್ ಪ್ರಕಾಶ್ ನಂಜಪ್ಪ ಮಾತನಾಡಿ, ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಅವಕಾಶ ತುಮಕೂರು ಜಿಲ್ಲೆಗೆ ದೊರೆತಿರುವುದು ಅದೃಷ್ಟದ ಸಂಗತಿ ಎಂದರು. ಶೂಟಿಂಗ್ ತರಬೇತಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ. 10 ವರ್ಷ ಮೇಲ್ಪಟ್ಟ ಮಕ್ಕಳು ಭಾಗವಹಿಸಬಹುದಾಗಿದ್ದು, ತರಬೇತಿಯ ನಂತರ ಅಂತರ್ ಶಾಲಾ/ಕಾಲೇಜು ಮಟ್ಟದಲ್ಲಿ ಸ್ಪರ್ಧೆ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಕರ್ನಾಟಕ ಕಯಾಕಿಂಗ್-ಕನೋಯಿಂಗ್ ಅಕಾಡೆಮಿ ಕಾರ್ಯದರ್ಶಿ ಕ್ಯಾಪ್ಟನ್ ದಿಲೀಪ್, ಜಿಲ್ಲೆಯ ಕ್ರೀಡಾಪಟುಗಳು ಜಲಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕರೆ ನೀಡಿ, ದಸರಾ ರಜೆಯನ್ನು ತರಬೇತಿಗೆ ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ (ಟುಡಾ) ಆಯುಕ್ತ ಉಮೇಶ್‌ಚಂದ್ರ ಎನ್.ಆರ್., ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು/ಮುಖ್ಯಸ್ಥರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ...