ತುಮಕೂರು | ಸಮುದಾಯ ಬಾನುಲಿಗಳು ಜನಹಿತದ ಧ್ವನಿಯಾಗಬೇಕು : ಪ್ರೊ. ಬಿ.ಕೆ. ರವಿ

Date:

ಸಮುದಾಯ ಬಾನುಲಿಗಳು ಜನಸಮುದಾಯದ ಹಿತವನ್ನು ಕಾಪಾಡುವ ಜವಾಬ್ದಾರಿಯುತ ಮಾಧ್ಯಮಗಳಾಗಿ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಕೃತಿ, ಭಾಷೆ, ಇತಿಹಾಸ ಮತ್ತು ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು.

- Advertisement -

ತುಮಕೂರು ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ರೇಡಿಯೋ ಸಿದ್ಧಾರ್ಥ 90.8 ಸಿಆರ್‌ಎಸ್, ತುಮಕೂರು ಹಾಗೂ ಸಮುದಾಯ ರೇಡಿಯೋ ಸಂಘ-ಕರ್ನಾಟಕ ವತಿಯಿಂದ ಜುಲೈ 10 ಮತ್ತು 11ರಂದು ಆಯೋಜಿಸಿರುವ ಎರಡು ದಿನಗಳ “ರೇಡಿಯೋ ಆಲಿಸುವಿಕೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ಕುರಿತು” ಕಾರ್ಯಾಗಾರವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಂದಿನ ತಂತ್ರಜ್ಞಾನ ಯುಗದಲ್ಲಿ ಮಾಹಿತಿಯ ಲಭ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಹೊಣೆಗಾರಿಕೆಯುಳ್ಳ ಮಾಧ್ಯಮಗಳ ಅಗತ್ಯ ಮತ್ತಷ್ಟು ಹೆಚ್ಚಿದೆ. ಸಮುದಾಯ ಬಾನುಲಿಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಸರ್ಕಾರಗಳು ಅಗತ್ಯ ಬೆಂಬಲ ನೀಡಬೇಕು. ವಾಣಿಜ್ಯೀಕರಣದ ಭರಾಟೆಗೆ ಸಿಲುಕದೆ, ಅಭಿವೃದ್ಧಿ ಆಧಾರಿತ ಮತ್ತು ಜನೋಪಯೋಗಿ ಸಂದೇಶಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಸಮುದಾಯ ಬಾನುಲಿಗಳು ಪ್ರಮುಖ ಪಾತ್ರವಹಿಸಬೇಕು ಎಂದು ಹೇಳಿದರು.

ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸಂಬಂಧಿಸಿದ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ಜನರಿಗೆ ತಲುಪಿಸಲು ಸಮುದಾಯ ಬಾನುಲಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಬೆಂಗಳೂರು ಆಕಾಶವಾಣಿಯ ನಿವೃತ್ತ ಸಹಾಯಕ ನಿರ್ದೇಶಕಿ ಹಾಗೂ ಲೇಖಕಿ ಕಾನ್ಸೆಪ್ಟಾ ಫರ್ನಾಂಡಿಸ್, ಜಾಗತಿಕ ಮಟ್ಟದಲ್ಲಿ ಹವಾಮಾನ ವೈಪರೀತ್ಯ, ರಸ್ತೆ ಸಂಚಾರ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಸಮುದಾಯ ಬಾನುಲಿಗಳ ಪಾತ್ರ ಮಹತ್ವದ್ದಾಗಿದೆ. ಸ್ಥಳೀಯ ಸಮಸ್ಯೆಗಳು ಹಾಗೂ ಸಾರ್ವಜನಿಕ ಮಾಹಿತಿಯನ್ನು ಅತ್ಯಂತ ವೇಗವಾಗಿ ಮತ್ತು ಸರಳವಾಗಿ ಜನರಿಗೆ ತಲುಪಿಸುವಲ್ಲಿ ಸಮುದಾಯ ರೇಡಿಯೋ ಪರಿಣಾಮಕಾರಿ ಮಾಧ್ಯಮವಾಗಿದೆ ಎಂದು ತಿಳಿಸಿದರು. ತಮ್ಮ ಆಕಾಶವಾಣಿ ಸೇವೆಯ ಅನುಭವಗಳನ್ನು ಹಂಚಿಕೊಂಡರು.

ಬೆಂಗಳೂರು ವರ್ಪಾಸ್ ಮೀಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಆರ್. ನರಸಿಂಹಸ್ವಾಮಿ ಅವರು ಸಮುದಾಯ ಬಾನುಲಿಗಳಲ್ಲಿ ತಾಂತ್ರಿಕ ಆಧುನೀಕರಣ, ಕ್ಲೌಡ್ ಸ್ಟೋರೇಜ್, ಆಡಿಯೋ ಸಂಗ್ರಹಣೆ ಹಾಗೂ ಪ್ರಸಾರ ತಂತ್ರಜ್ಞಾನ ಕುರಿತು ಮಾಹಿತಿ ನೀಡಿದರು. ಗುರು ರೇಣುಕಾ ಪ್ರೊಡಕ್ಷನ್ಸ್‌ನ ನಟ ಹಾಗೂ ನಿರ್ಮಾಪಕ ನವೀನ್ ಎನ್.ಜಿ. ತಾಂತ್ರಿಕ ಸಂಕಲನದ ವಿವಿಧ ಆಯಾಮಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಹಾಯಕ ಆಡಳಿತಾಧಿಕಾರಿ ಖಲಂದರ್ ಪಾಷ ಕೆ.ಎಚ್., ಅಖಂ ದಕ್ಷಿಣ ವಲಯದ ಜಂಟಿ ಕಾರ್ಯದರ್ಶಿ ಶಿವಶಂಕರ್, ಅಖಂ ಕರ್ನಾಟಕ ಅಧ್ಯಾಯದ ಅಧ್ಯಕ್ಷೆ ಡಾ. ರಶ್ಮಿ ಅಮ್ಮೆಂಬಳ, ಕಾರ್ಯದರ್ಶಿ ಭರತ್ ಬಿ. ಬಡಿಗೇರ್, ರೇಡಿಯೋ ಸಿದ್ಧಾರ್ಥ 90.8 ನಿರ್ದೇಶಕ ಡಾ. ಬಿ.ಟಿ. ಮುದ್ದೇಶ್, ಡಾ. ಜ್ಯೋತಿ ಸಿ., ಶ್ವೇತ ಎಂ.ಪಿ., ಮಂಜುಳಾ ಟಿ.ವಿ., ಶಿಲ್ಪ ಜಿ., ರವಿಕುಮಾರ್ ಸಿ.ಎಚ್., ಹರೀಶ್ ಎನ್., ಗೌತಮ್ ಎ.ವಿ. ಸೇರಿದಂತೆ ರಾಜ್ಯದ ವಿವಿಧ ಸಮುದಾಯ ಬಾನುಲಿ ಕೇಂದ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಂಜನಾ ವಿ. ಪ್ರಾರ್ಥನೆ ನೆರವೇರಿಸಿದರು. ಉಪನ್ಯಾಸಕಿ ಶ್ವೇತ ಎಂ.ಪಿ. ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...