ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120 ಬೆಳೆ ಕಟಾವು ಪ್ರಯೋಗಗಳನ್ನು ಶೇ.100ರಷ್ಟು ಪೂರ್ಣಗೊಳಿಸಿ, ಇಳುವರಿ ಮಾಹಿತಿಯನ್ನು ನಿಖರವಾಗಿ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಗೂಗಲ್ ಮೀಟ್ ಮೂಲಕ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಜಿಲ್ಲೆಗೆ 5,120 ಬೆಳೆ ಕಟಾವು ಪ್ರಯೋಗಗಳನ್ನು ಹಂಚಿಕೆ ಮಾಡಲಾಗಿದೆ. ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ನಿಯಮಾನುಸಾರ ರೈತರು, ವಿಮಾ ಪ್ರತಿನಿಧಿಗಳು ಹಾಗೂ ಮೇಲ್ವಿಚಾರಕರ ಸಮ್ಮುಖದಲ್ಲಿ ಪ್ರಯೋಗಗಳನ್ನು ನಡೆಸಿ, ಯಾವುದೇ ಲೋಪಗಳಿಗೆ ಅವಕಾಶವಿಲ್ಲದಂತೆ ನಿಖರ ಇಳುವರಿ ಮಾಹಿತಿಯನ್ನು ದಾಖಲಿಸಬೇಕು ಎಂದರು.

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಕಟಾವು ಪ್ರಯೋಗಗಳನ್ನು ಸಮರ್ಪಕವಾಗಿ ನಡೆಸಬೇಕು. ಸಂಬಂಧಪಟ್ಟ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದೇ ವೇಳೆ, ಜಿಲ್ಲೆಯಲ್ಲಿ ಸಂಭವಿಸುವ ಎಲ್ಲ ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳೊಳಗೆ ನೋಂದಾಯಿಸಿ ಪ್ರಮಾಣಪತ್ರ ವಿತರಿಸುವಂತೆ ಸೂಚಿಸಿದ ಅವರು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನಗಳಿಗೆ ತಾಯಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆಯೇ ಜನನ ಪ್ರಮಾಣಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ. ರಂಗಸ್ವಾಮಿ, ಜಂಟಿ ಕೃಷಿ ನಿರ್ದೇಶಕರು, ಜಂಟಿ ತೋಟಗಾರಿಕೆ ನಿರ್ದೇಶಕರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...