ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

Date:

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ ಅಧಿಕಾರಿಗಳು ಕೂಡಲೇ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚಿಸಿದರು.

- Advertisement -

ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು, ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಔಷಧಿ, ವೈದ್ಯರು ಅಥವಾ ಫಾರ್ಮಸಿಸ್ಟ್‌ಗಳ ಕೊರತೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ, ಅಗತ್ಯ ಔಷಧಿ ಪೂರೈಕೆ ಹಾಗೂ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಕಲಿ ವೈದ್ಯರನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರವೂ ಅಗತ್ಯ ಎಂದು ಹೇಳಿದರು.

ಸ್ಥಳೀಯ ಡಿಎಚ್‌ಒ, ಟಿಎಚ್‌ಒ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಸಹಕಾರವಿಲ್ಲದೆ ಯಾವುದೇ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಲು ಸಾಧ್ಯವಿಲ್ಲ. ಆಯುರ್ವೇದ, ಯುನಾನಿ ಹಾಗೂ ಹೋಮಿಯೋಪತಿ ವೈದ್ಯರನ್ನು ನಕಲಿ ವೈದ್ಯರೆಂದು ಪರಿಗಣಿಸಬಾರದು. ಆದರೆ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರು ಜಿಲ್ಲೆಗೆ ಹೃದ್ರೋಗ ಆಸ್ಪತ್ರೆಯ ಅಗತ್ಯವಿದೆ ಎಂಬ ಮಾಧ್ಯಮದವರ ಬೇಡಿಕೆಗೆ ಸ್ಪಂದಿಸಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಪ್ರತ್ಯೇಕ ವಿಭಾಗ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲು ಶೀಘ್ರದಲ್ಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬವಾಗದಂತೆ ಅಧಿಕಾರಿ ಹಾಗೂ ಸಿಬ್ಬಂದಿಯ ಹಾಜರಾತಿ ಮೇಲೆ ನಿಗಾ ವಹಿಸಲು ಎಐ ಅಟೆಂಡೆನ್ಸ್ ಕ್ಯಾಮೆರಾಗಳನ್ನು ಅಳವಡಿಸುವ ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಸಮಯಪಾಲನೆ ಹಾಗೂ ಸೇವೆಯ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಜನರು ತಮ್ಮ ಆಹಾರ ಪದ್ಧತಿಯಲ್ಲೂ ಬದಲಾವಣೆ ಮಾಡಿಕೊಳ್ಳಬೇಕು. ಅತಿಯಾದ ಎಣ್ಣೆ, ಉಪ್ಪು ಮತ್ತು ಸಕ್ಕರೆ ಸೇವನೆ ತಪ್ಪಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಜನರ ಆರೋಗ್ಯದ ದೃಷ್ಟಿಯಿಂದ ಹೋಟೆಲ್‌ಗಳು ಹಾಗೂ ಬೀದಿಬದಿ ತಿಂಡಿ-ತಿನಿಸು ಮಾರಾಟಗಾರರು ಬ್ರಾಂಡೆಡ್ ಎಣ್ಣೆಯನ್ನೇ ಬಳಸುವಂತೆ ನಿಯಮ ಜಾರಿಗೆ ತರಲಾಗುವುದು ಎಂದರು.

ಇದಕ್ಕೂ ಮುನ್ನ ನಡೆದ ಆರೋಗ್ಯ ಇಲಾಖೆಯ ಸಭೆಯಲ್ಲಿ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲಿಸಿದ ಸಚಿವರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದೇ ಇಲಾಖೆಯ ಪ್ರಮುಖ ಗುರಿಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಡಿ-ದರ್ಜೆ ನೌಕರರಿಂದ ಹಿಡಿದು ಎಲ್ಲ ಹಂತದ ಅಧಿಕಾರಿ ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆರೋಗ್ಯ ಕಾರ್ಯಕ್ರಮಗಳು ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳು ಹಾಗೂ ಕಾರ್ಯನಿರ್ವಹಿಸುತ್ತಿರುವ ಪಿಎಚ್‌ಸಿಗಳ ಸಂಖ್ಯೆ ಕುರಿತು ಮಾಹಿತಿ ಪಡೆದ ಸಚಿವರು, ತಾಲ್ಲೂಕು ಆಸ್ಪತ್ರೆಗಳ ಸಮೀಪದಲ್ಲಿರುವ 24×7 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಗತ್ಯವಿರುವ ಕಡೆಗೆ ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸುವಂತೆ ಸೂಚಿಸಿದರು. ಇದರಿಂದ ತುರ್ತು ಸಂದರ್ಭಗಳಲ್ಲಿ ಜನರಿಗೆ ತ್ವರಿತ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗಲಿದೆ ಎಂದರು.

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಾಲ್ಲೂಕು ಆರೋಗ್ಯಾಧಿಕಾರಿಗಳು ಮಧ್ಯಾಹ್ನ 1 ಗಂಟೆಯ ನಂತರ ಕಚೇರಿಯಲ್ಲಿ ಇರುವುದಿಲ್ಲ ಎಂಬ ದೂರುಗಳು ಬರುತ್ತಿವೆ. ಇಂತಹ ದೂರುಗಳು ಬರದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು. ಸ್ಥಳೀಯ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಜನಸಮುದಾಯವನ್ನು ಒಳಗೊಂಡು ಸಭೆ ನಡೆಸಿ ಆರೋಗ್ಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಆರೋಗ್ಯ ಇಲಾಖೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಎಲ್ಲಾ ಪಿಎಚ್‌ಸಿಗಳಲ್ಲಿ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಔಷಧಿಗಳ ಕೊರತೆ ಇರುವ ಪಿಎಚ್‌ಸಿಗಳು ಸರ್ಕಾರಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ. ರಜನಿ, ಉಪನಿರ್ದೇಶಕ ಡಾ. ಧನಂಜಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಎಂ. ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ಸೇರಿದಂತೆ ವಿವಿಧ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...