ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

Date:

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ‘ತುಮಕೂರು ದಸರಾದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ ದೊರೆತರೆ, ಸ್ಥಳೀಯ ತೆರಿಗೆ ಪಾವತಿದಾರರು ‘ಊರ ಹಬ್ಬ’ದಿಂದ ದೂರು ಉಳಿಯುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ.

- Advertisement -

‘ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ ಅವರ ನೆಂಟರು, ಪೋಷಕರಿಗೆ ಮೊದಲ ಸಾಲಿನ ಆಸನ ಮೀಸಲಿಡಲಾಗುತ್ತಿದೆ. ಅಪ್ಪಿತಪ್ಪಿ ಯಾರಾದರೂ ಆ ಆಸನಗಳಲ್ಲಿ ಕುಳಿತರೆ ಮುಲಾಜಿಲ್ಲದೇ ಎದ್ದು ಕಳುಹಿಸುತ್ತಿದ್ದಾರೆ. ಯಾರ ಹಿತಾಸಕ್ತಿ ಕಾಯಲು ದಸರಾ ಮಾಡಲಾಗುತ್ತಿದೆ. ಇದು ಸಾಮಾನ್ಯರ ದಸರಾವೇ? ಅಥವಾ ಅಧಿಕಾರಿಗಳ ಹಬ್ಬವೇ?’ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಕಾರ್ಯಕ್ರಮದ ವೇಳೆ ಮೇಲಾಧಿಕಾರಿಗಳ ಕುಟುಂಬದ ಸದಸ್ಯರಿಗೆ ಪೊಲೀಸರು ಕುರ್ಚಿಗಳನ್ನು ಹಾಕಿ ಆಸನ ವ್ಯವಸ್ಥೆ ಕಲ್ಪಿಸಿದ್ದರು ಎನ್ನಲಾಗಿದೆ. ಈ ಕುಟುಂಬದವರು ಹೊರ ರಾಜ್ಯದವರಾಗಿದ್ದು, ಅವರಿಗೆ ವಿಶೇಷ ಆತಿಥ್ಯ ನೀಡಲಾಗಿದೆ ಎಂಬ ಮಾಹಿತಿ ಚರ್ಚೆಗೆ ಕಾರಣವಾಗಿದೆ. ಮತ್ತೊಂದೆಡೆ, ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಸಾಮಾನ್ಯ ಜನರನ್ನು ಪಾಸ್ ಇದ್ದರೆ ಮಾತ್ರ ಒಳಗೆ ಬರುವಂತೆ ಸೂಚಿಸಿ ತಡೆದಿದ್ದರು ಎಂಬ ಆರೋಪ ವ್ಯಕ್ತವಾಗಿದೆ.

ಹೊರ‌ರಾಜ್ಯದಿಂದ ಬಂದ ಅತಿಥಿಗಳಿಗೆ ಆತಿಥ್ಯ ನೀಡುವುದರಲ್ಲಿ ತಪ್ಪಿಲ್ಲ. ಆದರೆ ಅದೇ ಕಾರ್ಯಕ್ರಮಕ್ಕೆ ಆಗಮಿಸಿದ ಸ್ಥಳೀಯ ಜನರಿಗೂ ಸಮರ್ಪಕ ಪ್ರವೇಶ, ಆಸನ ವ್ಯವಸ್ಥೆ ಮತ್ತು ಗೌರವ ದೊರೆಯಬೇಕಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಗಣ್ಯರಿಗೆ ವಿಶೇಷ ಸೌಲಭ್ಯ ಕಲ್ಪಿಸುವುದರ ಜೊತೆಗೆ ಜನಸಾಮಾನ್ಯರ ಅನುಕೂಲಕ್ಕೂ ಸಮಾನ ಆದ್ಯತೆ ನೀಡುವುದು ಆಯೋಜಕರ ಜವಾಬ್ದಾರಿಯಾಗಿದೆ. ಅಧಿಕಾರಿಗಳ ಕುಟುಂಬದವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸುವಾಗ ಸಾರ್ವಜನಿಕರನ್ನು ಪ್ರವೇಶದ ವಿಚಾರದಲ್ಲಿ ತಡೆದಿದ್ದೇಕೆ ಎಂಬುದಕ್ಕೆ ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕಿದೆ.

ದಸರಾ ಜಿಲ್ಲೆಯ ಜನರ ಸಾಂಸ್ಕೃತಿಕ ಸಂಭ್ರಮದ ಸಂಕೇತ. ಹೀಗಾಗಿ ಕಾರ್ಯಕ್ರಮದ ಪ್ರವೇಶ ವ್ಯವಸ್ಥೆ ಮತ್ತು ಆಸನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ನಡೆದಿದೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು ಎಂಬ ಒತ್ತಾಯ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ...

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...