ತುಮಕೂರು | ನೀಟ್ ಅಕ್ರಮದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಡಿಸಿಎಂ ಪರಮೇಶ್ವರ್ ಆಗ್ರಹ

Date:

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮೈಸೂರು ವಿಭಾಗವನ್ನು ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

- Advertisement -

ತುಮಕೂರಿನಲ್ಲಿ ತಮ್ಮ ಸಹೋದರ ಶಿವಪ್ರಸಾದ್ ಅವರ ಪುಣ್ಯಸ್ಮರಣೆಯಲ್ಲಿ ಭಾಗವಹಿಸಿ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರೊಂದಿಗೆ ಬೆಂಗಳೂರು ವಿಭಾಗದ ಬರ ಪರಿಸ್ಥಿತಿಯನ್ನು ಚಿತ್ರದುರ್ಗದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ರೈತರ ಜಮೀನುಗಳಿಗೆ ತೆರಳಿ ಬೆಳೆ ಹಾನಿಯನ್ನು ಕಣ್ಣಾರೆ ವೀಕ್ಷಿಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ರಾಜ್ಯದ ಎಲ್ಲಾ ಜಿಲ್ಲೆಗಳು ಮತ್ತು ತಾಲ್ಲೂಕುಗಳಿಂದ ಬೆಳೆ ಹಾನಿಯ ಅಂತಿಮ ವರದಿ ಸಂಗ್ರಹಿಸಿದ ಬಳಿಕ ಮುಂದಿನ ತಿಂಗಳು ಕೇಂದ್ರ ಸರ್ಕಾರಕ್ಕೆ ಬರ ಹಾನಿ ಕುರಿತ ಸಮಗ್ರ ಮೆಮೊರಾಂಡಂ ಸಲ್ಲಿಸಲಾಗುವುದು. ರಾಜ್ಯಕ್ಕೆ ಅಗತ್ಯವಿರುವ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ತರಲು ದೆಹಲಿಯಲ್ಲಿ ನಡೆಯಲಿರುವ ರಾಜ್ಯದ ಸಂಸದರ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಡಾ. ಪರಮೇಶ್ವರ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಹಕ್ಕು ಯಾರಿಗೂ ಇಲ್ಲ ಎಂದು ಕಿಡಿಕಾರಿದರು.

ನೀಟ್ ದೇಶದ ಅತ್ಯಂತ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದು, ಅದರ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಸರ್ಕಾರ ಮತ್ತು ಪರೀಕ್ಷೆ ನಡೆಸುವ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಯಾವುದೇ ರೀತಿಯ ಅಕ್ರಮ ಅಥವಾ ಲೋಪ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತಪ್ಪಿತಸ್ಥರನ್ನು ಗುರುತಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಜವಾಬ್ದಾರಿಯಲ್ಲಿದ್ದ ಅಧಿಕಾರಿಗಳ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದನ್ನು ಉಲ್ಲೇಖಿಸಿದ ಅವರು, ದೇಶದ ಭವಿಷ್ಯ ಯುವಕರ ಕೈಯಲ್ಲಿದ್ದು, ಅವರ ಕನಸುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆ ಭರವಸೆ ಯಾವ ರೀತಿಯಲ್ಲಿ ಜಾರಿಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...