ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್ ಹಾಗೂ ಸೌಂದರ್ಯೀಕರಣ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಎಲ್‌ಇಡಿ ದೀಪಗಳ ಅಳವಡಿಕೆ, ಬೆಳಕಿನ ವಿನ್ಯಾಸ, ವಿದ್ಯುತ್ ಸಂಪರ್ಕ ಹಾಗೂ ಕಾಮಗಾರಿಯ ಪ್ರಗತಿ ಮತ್ತು ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ವೃತ್ತದ ಸೌಂದರ್ಯ ಹೆಚ್ಚಿಸುವುದರ ಜತೆಗೆ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಬಾಕಿ ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಮುಗಿಸಿ, ಎಲ್‌ಇಡಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಗತ್ಯ ತಾಂತ್ರಿಕ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.




