ತುಮಕೂರು | ಪ್ರತಿಭಟನಾ ಸ್ಥಳಕ್ಕೆ ಡಿಸಿಎಂ ಪರಮೇಶ್ವರ್; ಭುವನಾ ಪ್ರಕರಣ ತನಿಖೆ : ಕ್ರಮದ ಭರವಸೆ

Date:

 ಎಸ್‌ಐಆರ್ ಕರ್ತವ್ಯ ನಿರ್ವಹಿಸುವ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ನೌಕರರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಭಾನುವಾರ ಭೇಟಿ ನೀಡಿ, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಿದರು.

- Advertisement -

ಈ ವೇಳೆ ಮೃತ ಭುವನಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದ ಅವರು, ಕುಟುಂಬದವರಿಗೆ ಸಾಂತ್ವನ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
1003572325

ಬಳಿಕ ಪ್ರತಿಭಟನಾ ನಿರತ ನೌಕರರನ್ನು ಉದ್ದೇಶಿಸಿ ಮಾತನಾಡಿದ ಡಾ. ಪರಮೇಶ್ವರ್, ಘಟನೆಗೆ ಕಾರಣವಾದ ಎಲ್ಲ ಅಂಶಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಾಗುವುದು. ಕರ್ತವ್ಯದ ಒತ್ತಡ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿರುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಪೂರ್ವನಿಗದಿಯಾಗಿದ್ದ ಕಾರಣ ಹಾಗೂ ಆರೋಗ್ಯ ಸಮಸ್ಯೆಯಿಂದ ತಕ್ಷಣ ಆಗಮಿಸಲು ಸಾಧ್ಯವಾಗಲಿಲ್ಲ. ಅಪಘಾತದ ಸುದ್ದಿ ತಿಳಿದ ಕೂಡಲೇ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಂದಾಯ ಸಚಿವನಾಗಿ ಇಲಾಖೆಯ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವು ಇದೆ. ಸಾರ್ವಜನಿಕ ಬದುಕಿನಲ್ಲಿ ಎಲ್ಲರನ್ನು ಸಮಾನವಾಗಿ ಕಾಣುವ ನಿಲುವು ಹೊಂದಿದ್ದು, ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವುದಿಲ್ಲ ಎಂದು ಹೇಳಿದರು.

ತಹಶೀಲ್ದಾರ್ ಗ್ರೇಡ್-2ರಿಂದ ಗ್ರೇಡ್-1ಕ್ಕೆ ಬಡ್ತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಮುಂದಿನ ಒಂದು ವಾರದೊಳಗೆ ಗ್ರಾಮ ಆಡಳಿತಾಧಿಕಾರಿಗಳಿಗೆ ಕಂದಾಯ ನಿರೀಕ್ಷಕ (ಆರ್‌ಐ) ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯೂ ಆರಂಭವಾಗಲಿದೆ. ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಪತಿ-ಪತ್ನಿ ವರ್ಗಾವಣೆ ಪ್ರಕರಣಗಳನ್ನು ಬಗೆಹರಿಸಲಾಗಿದೆ. ವೃಂದ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿರುವ ಸಮಸ್ಯೆಗಳ ತಿದ್ದುಪಡಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಗೆ ಕೇವಲ ಒಂದು ತಿಂಗಳ ಗಡುವು ನೀಡಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಹೆಚ್ಚಿನ ಸಮಯ ನೀಡಿದ್ದರೆ ಕೆಲಸವನ್ನು ಹೆಚ್ಚು ವ್ಯವಸ್ಥಿತವಾಗಿ ನಿರ್ವಹಿಸಲು ಸಾಧ್ಯವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಮೃತ ಭುವನಾ ಅವರಿಗೆ ಕರ್ತವ್ಯದ ಒತ್ತಡವಿದ್ದರೆ ಅದರ ಬಗ್ಗೆ ಪ್ರತ್ಯೇಕವಾಗಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪುನರುಚ್ಚರಿಸಿದ ಅವರು, ಸಿಬ್ಬಂದಿಯ ಸಮಸ್ಯೆಗಳಿಗೆ ಸರ್ಕಾರ ಸದಾ ಸ್ಪಂದಿಸುತ್ತದೆ ಎಂದು ಹೇಳಿದರು.

ಮೃತರ ಕುಟುಂಬಕ್ಕೆ 15 ದಿನಗಳೊಳಗೆ ವಿಮೆ ಮೊತ್ತ ಬಿಡುಗಡೆ ಮಾಡಲಾಗುವುದು. ಜೊತೆಗೆ ಚುನಾವಣಾ ಆಯೋಗದಿಂದ ₹30 ಲಕ್ಷ ಪರಿಹಾರ, ಅನುಕಂಪದ ಆಧಾರದ ಮೇಲೆ ಉದ್ಯೋಗ ಸೇರಿದಂತೆ ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ದುರ್ಘಟನೆ ಕಂದಾಯ ಸಚಿವನಾಗಿರುವ ನನಗೂ ತೀವ್ರ ಬೇಸರ ತಂದಿದೆ. ಈ ವಿಚಾರವನ್ನು ಕೆಲವರು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಸಿಬ್ಬಂದಿ ಯಾವುದೇ ಸಮಸ್ಯೆ ಇದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಬಹುದು. ಅವರ ಸಮಸ್ಯೆಗಳನ್ನು ಬಗೆಹರಿಸಿ, ಶಾಂತಿಯುತ ಹಾಗೂ ನೆಮ್ಮದಿಯ ಕೆಲಸದ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಡಾ. ಪರಮೇಶ್ವರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...