ತುಮಕೂರು | ಅಂಬೇಡ್ಕರ್, ಜಗಜೀವನರಾಂ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಲು ಒತ್ತಾಯ

Date:

ತುಮಕೂರು  ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿಯೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ಭವನ ನಿರ್ಮಿಸಲು ತಲಾ 10 ಗುಂಟೆ ಜಾಗ ಮಂಜೂರು ಮಾಡಬೇಕು ಎಂದು ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಒಕ್ಕೊರಲಿನಿಂದ ಒತ್ತಾಯಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಮನವಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಆಷಾಢ ಮಾಸದ ಪ್ರಯುಕ್ತ ಜಿಲ್ಲೆಯಲ್ಲಿ ನಡೆಯುವ ವಿಶೇಷ ಜಾತ್ರೆಗಳ ಸಂದರ್ಭದಲ್ಲಿ ಕೋಣಗಳ ಬಲಿ ನೀಡುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ದೇವಾಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಉಪವಿಭಾಗ ಮಟ್ಟದಲ್ಲಿ ಕಡ್ಡಾಯವಾಗಿ ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ನಡೆಸಬೇಕು. ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕುಂದುಕೊರತೆಗಳ ಸಭೆ ನಡೆಸಿ, ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಶೀಲಿಸಿ ಪರಿಹರಿಸಬೇಕು ಎಂದು ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಸಮಿತಿಯ ಮುಂದಿರುವ ದೌರ್ಜನ್ಯ ಪ್ರಕರಣಗಳಲ್ಲಿ ಸಾಕ್ಷಿದಾರರು ಯಾವುದೇ ಭಯ ಅಥವಾ ಆಮಿಷಕ್ಕೆ ಒಳಗಾಗದೆ ಧೈರ್ಯದಿಂದ ಸಾಕ್ಷ್ಯ ನುಡಿಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಜಿಲ್ಲೆಯ ಎಲ್ಲಾ ಉಪಾಧೀಕ್ಷಕರಿಗೂ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತೆ ಬಿ. ಶುಭ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಎಂ. ಚಂದ್ರಶೇಖರ್, ಉಪವಿಭಾಗಾಧಿಕಾರಿ ನಾಹಿದಾ ಜಂ ಜಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ತಹಶೀಲ್ದಾರ್ ರಾಜೇಶ್ವರಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...