ತುಮಕೂರು | ಭೂಮಿ, ನೀರು ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು : ರೈತರ ಬೃಹತ್ ಪಾದಯಾತ್ರೆ

Date:

ಧಾರ್ಮಿಕ ಮುಖಂಡರು ಕೇವಲ ಪೂಜೆ, ಪುನಸ್ಕಾರಗಳಿಗೆ ಸೀಮಿತವಾಗದೆ ರೈತರ ಹೋರಾಟಗಳಲ್ಲಿ ಭಾಗವಹಿಸಿ, ಯುವಜನರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಡಾ.  ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

- Advertisement -

ನಗರದ ಟೌನ್‌ಹಾಲ್ ಮುಂಭಾಗದಲ್ಲಿ ದೊಡ್ಡಹೊಸೂರಿನ ರೈತರ ಸತ್ಯಾಗ್ರಹದ ಎರಡನೇ ದಿನದ ಅಂಗವಾಗಿ ಆಯೋಜಿಸಿದ್ದ ರೈತರ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಪೂಜೆಗಳು ಮನಸ್ಸಿಗೆ ಶಾಂತಿ ನೀಡಿದರೆ, ರೈತರ ಹೋರಾಟಗಳು ದೇಶಕ್ಕೆ ಸಮೃದ್ಧಿಯನ್ನು ತರುವ ಕೆಲಸ ಮಾಡುತ್ತವೆ. ಹೀಗಾಗಿ ಸ್ವಾಮೀಜಿಗಳು ಕೃಷಿಕರನ್ನು ಪ್ರೋತ್ಸಾಹಿಸುವುದನ್ನು ತಮ್ಮ ದೈನಂದಿನ ಚಟುವಟಿಕೆಯ ಭಾಗವನ್ನಾಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ದೊಡ್ಡಹೊಸೂರಿನ ಗಾಂಧಿ ಸಹಜ ಬೇಸಾಯ ಆಶ್ರಮದಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ರೈತರು ಅಳವಡಿಸಿಕೊಂಡರೆ ವಿಷಮುಕ್ತ ಆಹಾರ ಉತ್ಪಾದನೆಯ ಜೊತೆಗೆ ಉತ್ತಮ ಆದಾಯ ಗಳಿಸಲು ಸಾಧ್ಯವಾಗುತ್ತದೆ. ಯುವಜನರು ಇಂತಹ ತೋಟಗಳಿಗೆ ಭೇಟಿ ನೀಡಿ ಅಲ್ಲಿನ ಕೃಷಿ ವಿಧಾನಗಳನ್ನು ಕಲಿತು ತಮ್ಮ ಹೊಲಗಳಲ್ಲಿ ಅಳವಡಿಸಿಕೊಳ್ಳಬೇಕು. ಮಣ್ಣು ಮತ್ತು ನೀರು ಕಲುಷಿತವಾಗದಂತೆ ನೋಡಿಕೊಂಡರೆ ಮಾತ್ರ ಮನುಷ್ಯನ ಆರೋಗ್ಯವನ್ನು ಕಾಪಾಡಲು ಸಾಧ್ಯ ಎಂದು ಹೇಳಿದರು.

ಮುಂದಿನ ರಾಜ್ಯ ಬಜೆಟ್‌ನಲ್ಲಿ ಮಣ್ಣು, ನೀರು, ವಿದ್ಯುತ್ ಸೇರಿದಂತೆ ಬೀಜ, ಗೊಬ್ಬರ ಹಾಗೂ ಕೃಷಿಗೆ ಅಗತ್ಯವಿರುವ ಇತರ ಸಂಪನ್ಮೂಲಗಳಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಗತಿಪರ ಆಲೋಚನೆ ಹೊಂದಿರುವುದರಿಂದ ರೈತರು ನಿಯೋಗದ ಮೂಲಕ ಮನವಿ ಸಲ್ಲಿಸಬೇಕು ಎಂದು ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು

ಚಿಕ್ಕನಾಯಕನಹಳ್ಳಿಯ ಇಮ್ಮಡಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಅತಿಯಾದ ಆಸೆಯಿಂದ ರೈತರು ಕೃಷಿಗೆ ಅಗತ್ಯವಾದ ಮಣ್ಣು ಮತ್ತು ನೀರನ್ನು ಕಲುಷಿತಗೊಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಕೈಗಾರಿಕೆ, ರಸ್ತೆ, ಕಾರಿಡಾರ್ ಹಾಗೂ ರಿಂಗ್‌ರಸ್ತೆ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿ ಬಂಡವಾಳಶಾಹಿಗಳ ಪಾಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.

ಬಹುರಾಷ್ಟ್ರೀಯ ಕಂಪನಿಗಳು ನಮ್ಮ ಭೂಮಿ ಮತ್ತು ನೀರಿನ ಮೇಲೆ ಹಿಡಿತ ಸಾಧಿಸಲು ಮುಂದಾಗುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು. ಮನುಷ್ಯನಷ್ಟೇ ಅಲ್ಲದೆ ಗಿಡ, ಮರ, ಪ್ರಾಣಿ, ಪಕ್ಷಿಗಳಿಗೂ ಈ ಮಣ್ಣಿನ ಮೇಲೆ ಹಕ್ಕಿದೆ. ಮುಂದಿನ ಪೀಳಿಗೆಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದು ಎಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ನಡೆಯುತ್ತಿರುವ ರೈತ ಹೋರಾಟಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ದೊಡ್ಡಹೊಸೂರಿನ ಗಾಂಧಿ ಸಹಜ ಬೇಸಾಯ ಆಶ್ರಮದ ನೇತೃತ್ವದಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಸತ್ಯಾಗ್ರಹ ಆರಂಭಿಸಲಾಗಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಭೂಮಿ, ನೀರು ಹಾಗೂ ಮುಂದಿನ ಪೀಳಿಗೆಯ ಉದ್ಯೋಗಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ತಜ್ಞರಿಂದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ನೀರನ್ನು ರಾಮನಗರಕ್ಕೆ ಕೊಂಡೊಯ್ಯುವ ಯೋಜನೆಗೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ನಂದಿಹಳ್ಳಿಯಿಂದ ಮಲ್ಲಸಂದ್ರ ಮಾರ್ಗವಾಗಿ ವಸಂತನರಸಾಪುರಕ್ಕೆ ನಿರ್ಮಿಸಲು ಉದ್ದೇಶಿಸಿರುವ ಔಟರ್ ರಿಂಗ್ ರಸ್ತೆಯಿಂದ ಸುಮಾರು 750 ರೈತರ 900 ಎಕರೆಗೂ ಹೆಚ್ಚು ಭೂಮಿ ಸ್ವಾಧೀನವಾಗಲಿದೆ. ಇದರಲ್ಲಿ ಶೇ.70ರಷ್ಟು ತೋಟ ಹಾಗೂ ಫಲವತ್ತಾದ ಕೃಷಿ ಭೂಮಿಯಾಗಿದೆ ಎಂದು ಅವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತೆ ರೈತ ಸಂಘ, ಸಂಯುಕ್ತ ಹೋರಾಟ ಕರ್ನಾಟಕ, ಗಾಂಧಿ ಸಹಜ ಬೇಸಾಯ ಆಶ್ರಮ ಸೇರಿದಂತೆ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಸ್ಥಳ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇದುವರೆಗೆ ಭೇಟಿ ನೀಡಿಲ್ಲ. ಆದರೆ ಪೊಲೀಸ್ ಬಂದೋಬಸ್ತ್‌ನಲ್ಲಿ ಸರ್ವೆ ನಡೆಸಿ ಕಲ್ಲು ಹಾಕಲು ಮುಂದಾಗಿರುವುದು ಖಂಡನೀಯ ಎಂದರು.

ಅಧಿಕಾರಿಗಳು ಕಾನೂನನ್ನು ಗೌರವಿಸಬೇಕು. ಅವೈಜ್ಞಾನಿಕ ಹಾಗೂ ತಪ್ಪು ಮಾಹಿತಿಯ ಆಧಾರದ ಡಿಪಿಆರ್ ಕೈಬಿಡಬೇಕು. ಯೋಜನೆಗೆ ಸಾಮಾಜಿಕ ಪರಿಶೀಲನೆ (Social Audit) ನಡೆಸಬೇಕು ಹಾಗೂ ತಪ್ಪು ವರದಿ ನೀಡಿರುವ ಎಸ್‌ಎಲ್‌ಒ ಅವರನ್ನು ಅಮಾನತುಗೊಳಿಸಬೇಕು ಎಂದು ಎ. ಗೋವಿಂದರಾಜು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಚಿಕ್ಕನಾಯಕನಹಳ್ಳಿಯ ಶ್ರೀ ಮೃತ್ಯುಂಜನ ದೇಶಿಕೇಂದ್ರ ಸ್ವಾಮೀಜಿ, ಸಂಯುಕ್ತ ಹೋರಾಟ ಕರ್ನಾಟಕದ ಸಿ. ಯತಿರಾಜು, ಪಂಡಿತ್ ಜವಹರ್, ಗಾಂಧಿ ಸಹಜ ಬೇಸಾಯ ಆಶ್ರಮದ ಕೃಷಿ ವಿಜ್ಞಾನಿ ಡಾ. ಮಂಜುನಾಥ್, ರವೀಶ್, ರೈತ ಸಂಘದ ಚಿಕ್ಕಬೋರೇಗೌಡ, ಗುಬ್ಬಿ ಲೋಕೇಶ್, ನಂದಿಹಳ್ಳಿ ಉದಯಕುಮಾರ್, ರಮೇಶ್, ನಿಂಗರಾಜು, ರಾಜಶೇಖರ್, ಸುರೇಶ್ ಸೇರಿದಂತೆ ಕೃಷಿ ವಿಜ್ಞಾನಿಗಳು, ಯುವ ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ...

ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ...

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...