ತುಮಕೂರು | ಸಫಾಯಿ ಕರ್ಮಚಾರಿಗಳ ಪುನರ್ವಸತಿಗೆ ಸರ್ಕಾರ ವಿಫಲ: ಎ. ನರಸಿಂಹಮೂರ್ತಿ

Date:

ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ಪುನರ್ವಸತಿ, ಸ್ವಯಂ ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಆರೋಪಿಸಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸಫಾಯಿ ಕರ್ಮಚಾರಿಗಳ ಕಾವಲು ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಜನಜಾಗೃತಿ ಜಾಥಾ ಹಾಗೂ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 2013ರ ಕಾಯ್ದೆ ಹಾಗೂ ನಿಯಮಗಳನ್ವಯ ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಬೇಕಿದ್ದರೂ, ಸರ್ಕಾರಗಳು SCSP/TSP ಅನುದಾನ ಬಳಸಿಕೊಂಡು ಅಗತ್ಯ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಳೆದ ಹತ್ತು ವರ್ಷಗಳಲ್ಲಿ SCSP/TSP ಯೋಜನೆಯಡಿ ₹3.80 ಲಕ್ಷ ಕೋಟಿ ಖರ್ಚು ಮಾಡಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ, ಉದ್ಯೋಗ ಹಾಗೂ ಜೀವನ ಭದ್ರತೆ ಕಲ್ಪಿಸುವಲ್ಲಿ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಸಫಾಯಿ ಕರ್ಮಚಾರಿಗಳನ್ನು ಮನುಷ್ಯರಂತೆ ಪರಿಗಣಿಸಿ ಸಂವಿಧಾನದ ಸಮಾನತೆ ಮತ್ತು ಘನತೆಯ ಬದುಕಿನ ಹಕ್ಕು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.

ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಸಂಚಾಲಕ ಡಾ. ಕೆ.ಬಿ. ಓಬಳೇಶ್ ಮಾತನಾಡಿ, 2013ರ ಕಾಯ್ದೆ ಹಾಗೂ ಸುಪ್ರೀಂ ಕೋರ್ಟ್ ಆದೇಶಗಳಿದ್ದರೂ ಸಫಾಯಿ ಕರ್ಮಚಾರಿಗಳಿಗೆ ಸಾಮಾಜಿಕ ಭದ್ರತೆ ಕಲ್ಪಿಸದೆ, ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಲಾಗುತ್ತಿದೆ ಎಂದು ಆರೋಪಿಸಿದರು.

ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹1,000 ಕೋಟಿ ಮೀಸಲಿಡಬೇಕು. ನಿವೇಶನ, ಬ್ಯಾಂಕ್ ಸಾಲ ಹಾಗೂ ಸರ್ಕಾರಿ ಉದ್ಯೋಗ ಸೇರಿದಂತೆ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜನ ಚಳುವಳಿಯ ಚಂದ್ರಶೇಖರ್ ಮಾತನಾಡಿ, ಬಾಹ್ಯಾಕಾಶ ಸಂಶೋಧನೆಗೆ ಅತ್ಯಾಧುನಿಕ ಯಂತ್ರಗಳನ್ನು ಅಭಿವೃದ್ಧಿಪಡಿಸಿರುವ ದೇಶದಲ್ಲಿ ಮಲದ ಗುಂಡಿಗೆ ಇಳಿಯುವ ಅಗತ್ಯವಿಲ್ಲದಂತಹ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಲಾಗುತ್ತಿಲ್ಲ. ಮಲಗುಂಡಿ ಸ್ವಚ್ಛಗೊಳಿಸುವ ವೇಳೆ ಕಾರ್ಮಿಕರು ಮೃತಪಟ್ಟಾಗ ಮಾತ್ರ ಸರ್ಕಾರ ಗಮನಹರಿಸುವುದು ಸರಿಯಲ್ಲ ಎಂದರು.

ಪ್ರತಿಭಟನೆಯಲ್ಲಿ ತಮಟೆ ಸಂಸ್ಥೆಯ ಸಿದ್ದಲಿಂಗಯ್ಯ, ಸ್ಲಂ ಜನಾಂದೋಲನ ಕರ್ನಾಟಕದ ಅರುಣ್, ಶಂಕರಯ್ಯ, ಮುಬಾರಕ್ ಸೇರಿದಂತೆ ಕಲಾವಿದರು, ಮಧುಗಿರಿ, ಶಿರಾ, ಪಾವಗಡದ ಸಂಘಟಕರು, ಪೌರಕಾರ್ಮಿಕರು ಹಾಗೂ ಮುನ್ಸಿಪಲ್ ಕಾರ್ಮಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...