ತುಮಕೂರು | ಗ್ರಾಪಂ ಚುನಾವಣೆ ಮೀಸಲು ಪಟ್ಟಿ ಪುನರ್‌ಪರಿಶೀಲನೆಗೆ ಹೆತ್ತೇನಹಳ್ಳಿ ಮಂಜುನಾಥ್ ಒತ್ತಾಯ

Date:

 ಗ್ರಾಮ ಪಂಚಾಯಿತಿ ಚುನಾವಣೆಗೆ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಯಾವುದೇ ರಾಜಕೀಯ ನಾಯಕರ ಹಸ್ತಕ್ಷೇಪವಿಲ್ಲದೆ ಪಾರದರ್ಶಕ ಹಾಗೂ ವೈಜ್ಞಾನಿಕವಾಗಿ ರೂಪಿಸಬೇಕು. ಈಗಾಗಲೇ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಪುನರ್‌ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಬುಧವಾರ ಮನವಿ ಸಲ್ಲಿಸಿತು.

- Advertisement -

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್, ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲು ಪ್ರಕ್ರಿಯೆ ಸಂವಿಧಾನದ ಆಶಯ ಹಾಗೂ ಕಾನೂನು ನಿಯಮಗಳಿಗೆ ಅನುಗುಣವಾಗಿ ನಡೆಯಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಮೀಸಲು ನಿಗಧಿ ಪ್ರಕ್ರಿಯೆಯಲ್ಲಿ ರಾಜಕೀಯ ವ್ಯಕ್ತಿಗಳ ಹಸ್ತಕ್ಷೇಪದಿಂದ ಕೆಲವರು ತಮ್ಮ ಅನುಕೂಲಕ್ಕೆ ತಕ್ಕಂತೆ ಕ್ಷೇತ್ರಗಳನ್ನು ಮೀಸಲಾತಿಗೆ ಒಳಪಡಿಸುವ ಪ್ರಯತ್ನಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಆದ್ದರಿಂದ ಈಗಾಗಲೇ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಪುನರ್‌ಪರಿಶೀಲಿಸಿ, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದಂತೆ ಸಂಪೂರ್ಣ ಪಾರದರ್ಶಕ ಹಾಗೂ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಹೊಸ ಮೀಸಲು ಪಟ್ಟಿಯನ್ನು ಪ್ರಕಟಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಯುವುದು ಅತ್ಯಂತ ಮುಖ್ಯವಾಗಿದೆ. ಅದೇ ರೀತಿ ಗ್ರಾಮ ಪಂಚಾಯಿತಿ ಕ್ಷೇತ್ರಗಳ ಮೀಸಲು ನಿಗಧಿಯೂ ಜನಸಂಖ್ಯೆ, ನಿಯಮಗಳು ಮತ್ತು ಕಾನೂನು ಮಾನದಂಡಗಳನ್ನು ಆಧರಿಸಿ ವೈಜ್ಞಾನಿಕ ರೀತಿಯಲ್ಲಿ ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಕ್ಷೇತ್ರಗಳ ಮೀಸಲು ನಿಗಧಿಯನ್ನು ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಾನುಸಾರ ಜಾರಿಗೊಳಿಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ರಂಗಸ್ವಾಮಿ,ಜಹೀರ್ ಅಬ್ಬಾಸ್, ರವೀಂದ್ರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...

ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...