ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

Date:

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 8ರ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ತಿಳಿಸಿದ್ದಾರೆ.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಜೆನ್ ಜೀ ಹೋರಾಟವನ್ನು ಬೆಂಬಲಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮೈತ್ರಿಕೂಟದ ಪಕ್ಷಗಳ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯ ಬಗ್ಗೆ ಸುಪ್ರೀಂಕೋರ್ಟ್ ಸಹ ಅಸಮಾಧಾನ ವ್ಯಕ್ತಪಡಿಸಿದೆ ಎಂದರು. ಎಸ್‌ಐಆರ್ ಹಿಂದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ “ಹಿಡನ್ ಅಜೆಂಡಾ” ಇರುವುದು ಜನರಿಗೆ ಬಹಿರಂಗವಾಗಿದೆ ಎಂದು ಆರೋಪಿಸಿ, ಇದರ ವಿರುದ್ಧದ ಹೋರಾಟದಲ್ಲಿ ಎಲ್ಲಾ ನಾಗರಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಮಾತನಾಡಿ, ಎಸ್‌ಐಆರ್ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದರು. “ಮುಖ್ಯ ಚುನಾವಣಾ ಆಯುಕ್ತರು ಮಾಡಿರುವುದು ದೇಶದ್ರೋಹದ ಕೆಲಸ; ಅವರನ್ನು ಕೂಡಲೇ ವಜಾ ಮಾಡಬೇಕು” ಎಂದ ಅವರು, ಇಂಡಿಯಾ ಒಕ್ಕೂಟದ ಸಾಂಪ್ರದಾಯಿಕ ಮತಗಳಾದ ಅಹಿಂದ ಮತಗಳನ್ನು ಕಿತ್ತುಹಾಕಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳುಗೆಡವಲಾಗಿದೆ ಎಂದು ದೂರಿದರು. ಪ್ರಜಾಪ್ರಭುತ್ವ ಪಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

ಸಿಪಿಐ(ಎಂ) ಮುಖಂಡ ಸೈಯದ್ ಮುಜೀಬ್, ಮತದಾರರ ಹಕ್ಕುಗಳನ್ನು ರಕ್ಷಿಸುವ ಬದಲು ಚುನಾವಣಾ ಆಯೋಗವೇ ಹರಣ ಮಾಡಲು ಹೊರಟಿದೆ ಎಂದು ಆರೋಪಿಸಿದರು. ಆಯೋಗದ ಗುಪ್ತ ಮಾರ್ಗಸೂಚಿ ಜನರ ಮುಂದೆ ಅನಾವರಣಗೊಂಡಿದೆ; ಎಸ್‌ಐಆರ್ ಮೂಲಕ 15 ಕೋಟಿ ಮತದಾರರನ್ನು ಅಳಿಸಿಹಾಕಲಾಗಿದೆ ಎಂದು ಹೇಳಿದರು. “ಕಳೆದ 12 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಇಷ್ಟು ದೊಡ್ಡ ಪ್ರಮಾಣದ ವಲಸೆಗೆ ಅವಕಾಶ ಮಾಡಿಕೊಟ್ಟಿದ್ದು ಹೇಗೆ?” ಎಂದು ಪ್ರಶ್ನಿಸಿದರು.

ಅನಗತ್ಯವಾಗಿ ಇತರರ ಹಕ್ಕು ಕಸಿಯಲು ಫಾರಂ ನಂ. 7 ಸಲ್ಲಿಸಿದವರ ಮೇಲೆ ಎಫ್‌ಐಆರ್ ದಾಖಲಿಸಿದರೆ, ಕಾನೂನು ಕ್ರಮ ಕೈಗೊಳ್ಳದಂತೆ ರಾಜ್ಯದ ವಿರೋಧ ಪಕ್ಷ ಬಿಜೆಪಿ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದ ಅವರು, ಇದರ ಹಿಂದೆ ಬಿಜೆಪಿಯ ಗುಪ್ತ ಅಜೆಂಡಾ ಇದೆ ಎಂದರು. ಸಂವಿಧಾನ ಪ್ರೇಮಿಗಳು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಸಿಪಿಐನ ಗಿರೀಶ್ ಮಾತನಾಡಿ, ರಾಷ್ಟ್ರಪತಿಗಳಿಗೂ ಇಲ್ಲದ ವಿಶೇಷ ಅಧಿಕಾರವನ್ನು ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿ, ಅವರ ಮೂಲಕ “ವೋಟ್ ಚೋರಿ” ನಡೆಸಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಹೊರಟಿವೆ ಎಂದು ಆರೋಪಿಸಿದರು. ಸಾಂವಿಧಾನಿಕ ಅಂಗಗಳನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದರು.

ಆಮ್ ಆದ್ಮಿ ಪಕ್ಷದ ಜಯರಾಮಯ್ಯ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತರಿಗಿಂತ ಮುಂಚೆ ಪ್ರಧಾನಿ ಮತ್ತು ಗೃಹ ಸಚಿವರ ರಾಜೀನಾಮೆ ಕೇಳಬೇಕಿದೆ ಎಂದರು. ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿಗೆ ಅನುಕೂಲವಾಗುವಂತೆ ನಿಯಮ ರೂಪಿಸಿದ ಜ್ಞಾನೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಆರ್. ರಾಮಕೃಷ್ಣ, ಇರ್ಫಾನ್ ಅಹಮದ್, ಭೈಲಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಮತದಾರರ ಪಟ್ಟಿಯಿಂದ ನಾಗರಿಕರನ್ನು ಕೈಬಿಡುವುದಾದರೆ, ‘SIR’ ಉದ್ದೇಶವೇನು? ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಎಲ್ಲ ನಾಗರಿಕರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿ....

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...

SIR | ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಮತ ಕಾವಲು ಸಮಿತಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ...