ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

Date:

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ ಸತ್ಯನಿಷ್ಠೆ ಅತ್ಯಗತ್ಯ. ನಿರಂತರ ಓದು, ಅಧ್ಯಯನ ಮತ್ತು ಅಭ್ಯಾಸದ ಮೂಲಕವೇ ಉತ್ತಮ ಪತ್ರಕರ್ತರಾಗಿ ರೂಪುಗೊಳ್ಳಲು ಸಾಧ್ಯ ಎಂದು ಪತ್ರಕರ್ತೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿನಿ ಕಾವ್ಯ ಎನ್. ಅಭಿಪ್ರಾಯಪಟ್ಟರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಜರ್ನೋವ-2026’ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಪತ್ರಿಕೋದ್ಯಮದಲ್ಲಿ ವಿಷಯವನ್ನು ಸರಳವಾಗಿ, ಸ್ಪಷ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸುವ ಕೌಶಲ ಬಹಳ ಮುಖ್ಯ. ಓದುಗರ ಗಮನ ಸೆಳೆಯುವ ಬರವಣಿಗೆಗೆ ಭಾಷಾ ಪ್ರೌಢಿಮೆ ಅಗತ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ದಿನಪತ್ರಿಕೆಗಳು, ನಿಯತಕಾಲಿಕೆಗಳು ಹಾಗೂ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನಿರಂತರವಾಗಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Advertisements

ಸಮಾಜದಲ್ಲಿ ನಡೆಯುವ ಘಟನೆಗಳ ವಾಸ್ತವಾಂಶಗಳನ್ನು ಅರಿತು, ಸತ್ಯವನ್ನು ಜನರಿಗೆ ತಲುಪಿಸುವುದೇ ಪತ್ರಿಕೋದ್ಯಮದ ಮೂಲ ಉದ್ದೇಶ. ಸುದ್ದಿಯನ್ನು ಜನರಿಗೆ ತಲುಪಿಸುವಾಗ ಅದರ ಸ್ಪಷ್ಟತೆ, ನಿಖರತೆ ಮತ್ತು ವಸ್ತುನಿಷ್ಠತೆಗೆ ಆದ್ಯತೆ ನೀಡಬೇಕು. ಯಾವುದೇ ಸುದ್ದಿಯನ್ನು ಪ್ರಕಟಿಸುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುವುದು ಪತ್ರಕರ್ತರ ಜವಾಬ್ದಾರಿ ಎಂದು ಹೇಳಿದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳು ತರಗತಿಯ ಕಲಿಕೆಗೆ ಮಾತ್ರ ಸೀಮಿತರಾಗದೆ, ವರದಿಗಾರಿಕೆ, ಸುದ್ದಿ ಬರವಣಿಗೆ, ಸಂದರ್ಶನ, ಸಂಪಾದನೆ ಸೇರಿದಂತೆ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನಿರಂತರ ಕಲಿಕೆ, ಪರಿಶ್ರಮ ಮತ್ತು ವೃತ್ತಿಪರ ಕೌಶಲಗಳ ಬೆಳವಣಿಗೆಯೇ ಉತ್ತಮ ಪತ್ರಕರ್ತರಾಗಲು ಭದ್ರ ಬುನಾದಿ ಎಂದು ತಿಳಿಸಿದರು.

ವಿಭಾಗದ ಅಧ್ಯಕ್ಷ ಡಾ. ಸಿಬಂತಿ ಪದ್ಮನಾಭ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡಿದಾಗ ಗುರುಗಳಿಗೆ ದೊರೆಯುವ ಸಂತೋಷಕ್ಕೆ ಸಾಟಿಯಿಲ್ಲ. ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಯಶಸ್ಸನ್ನು ಬಯಸುವವರೇ ನಿಜವಾದ ಗುರುಗಳು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು, ಸ್ಪಷ್ಟ ಗುರಿಯೊಂದಿಗೆ ಮುನ್ನಡೆಯಬೇಕು ಎಂದರು.

ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿಸಿಕೊಂಡು, ಬೇಜವಾಬ್ದಾರಿಯನ್ನು ಬದಿಗಿಟ್ಟು ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸಂಕಲ್ಪ ಹೊಂದಿರುವವರು ದಾರಿಯಲ್ಲಿ ಎದುರಾಗುವ ಸಣ್ಣಪುಟ್ಟ ಆಕರ್ಷಣೆಗಳಿಗೆ ಮಾರುಹೋಗದೆ, ತಮ್ಮ ಗುರಿಯತ್ತ ಏಕಾಗ್ರತೆಯಿಂದ ಸಾಗಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವಿಭಾಗದ ಉಪನ್ಯಾಸಕರಾದ ಡಾ. ಪೃಥ್ವಿರಾಜ ಟಿ., ಡಾ. ಸುಲೋಚನ ಜಿ.ಎಸ್. ಮತ್ತು ವಿಷ್ಣುಧರನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...