ತುಮಕೂರು | ಜೈಲು ಭರೋ ಚಳುವಳಿ ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ : ರೈತ-ಕಾರ್ಮಿಕರ ಬಂಧನ

Date:

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿದ್ದ ಜೈಲು ಭರೋ ಚಳುವಳಿ ಸೋಮವಾರ ತುಮಕೂರು ನಗರದಲ್ಲಿ ನಡೆಯಿತು. ‘ಭಾರತ ಬಿಟ್ಟು ತೊಲಗಿ’ ಚಳುವಳಿಯ ನೆನಪಿನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸರ್ಕಾರದ ಜನವಿರೋಧಿ, ರೈತ-ಕಾರ್ಮಿಕ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಖಂಡಿಸಲಾಯಿತು.

- Advertisement -

ನಗರದ ಸ್ವಾತಂತ್ರ್ಯ ಚೌಕದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ, ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ವಶಕ್ಕೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಜಿಲ್ಲಾಧಿಕಾರಿ ಕಚೇರಿ ಎದುರು ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು, ಜಿಲ್ಲೆಯಲ್ಲಿ ರೈತರಿಂದ ಜಮೀನು ಕಸಿದುಕೊಳ್ಳುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಪ್ರತಿಯೊಬ್ಬ ಕಾರ್ಮಿಕನಿಗೂ ಕನಿಷ್ಠ ₹42 ಸಾವಿರ ಮಾಸಿಕ ವೇತನ ನಿಗದಿಪಡಿಸಬೇಕು ಹಾಗೂ ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

“ಕಾಂಗ್ರೆಸ್‌ನಲ್ಲಿ ಎರಡು ಪಕ್ಷಗಳಿವೆಯೇ?” ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಿಗದಿಪಡಿಸಲಾಗಿದ್ದ ಕನಿಷ್ಠ ವೇತನವನ್ನು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ಏಕೆ ಜಾರಿಗೆ ತರುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ದೊಡ್ಡನಂಜಪ್ಪ ಮಾತನಾಡಿ, ಬೇಗರ್ ಹುಕುಂ ಸಾಗುವಳಿದಾರರ ಸಮಸ್ಯೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಲಂಚ ನೀಡಿದವರಿಗೆ ಪಡಿ ಆಗುತ್ತದೆ, ಲಂಚ ನೀಡದವರಿಗೆ ವಿವಿಧ ನೆಪಗಳನ್ನು ಸೃಷ್ಟಿಸಲಾಗುತ್ತಿದೆ. ರೈತರಿಗೆ ಭೂಮಿ ನೀಡಬೇಕಾದ ಸರ್ಕಾರವೇ ರೈತರ ಭೂಮಿಯನ್ನು ಕಸಿಯುತ್ತಿದೆ ಎಂದು ದೂರಿದರು.

ಎಐಟಿಯುಸಿ ಮುಖಂಡ ಗಿರೀಶ್ ಮಾತನಾಡಿ, ಕಾರ್ಮಿಕ ಸಂಹಿತೆಗಳು ಕಾರ್ಮಿಕ ಸಂಘಟನೆಗಳ ಅಸ್ತಿತ್ವವನ್ನೇ ದುರ್ಬಲಗೊಳಿಸಿ, ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲ ಮಾಡಿಕೊಡಲಿವೆ ಎಂದು ಆರೋಪಿಸಿದರು.

ಎಐಯುಟಿಯುಸಿ ಮುಖಂಡೆ ಮಂಜುಳಾ ಗೋನಾವರ ಮಾತನಾಡಿ, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದ್ದು, ಅಸಂಘಟಿತ ಕಾರ್ಮಿಕರಿಗೆ ಅಗತ್ಯ ಸಾಮಾಜಿಕ ಭದ್ರತೆಯನ್ನು ಒದಗಿಸುತ್ತಿಲ್ಲ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಶಂಕರಪ್ಪ, ಪ್ರಾಂತ ರೈತ ಸಂಘದ ಬಿ. ಉಮೇಶ್, ಸಿಐಟಿಯು ಮುಖಂಡ ಎನ್.ಕೆ. ಸುಬ್ರಮಣ್ಯ, ಅಂಗನವಾಡಿ ನೌಕರರ ಸಂಘದ ಜ. ಕಮಲ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಎ. ಲೋಕೇಶ್, ಷಣ್ಮುಖಪ್ಪ, ಅಕ್ಷರ ದಾಸೋಹ ನೌಕರರ ಸಂಘದ ನಾಗರತ್ನ, ಅಂಗನವಾಡಿ ಕಾರ್ಯಕರ್ತೆಯರಾದ ಅನಸೂಯ, ಸರೋಜಾ, ಕಸದ ವಾಹನ ಚಾಲಕರು, ಲಾರಿ ಮತ್ತು ಕ್ಲೀನರ್ ಸಂಘದ ಮಾರತಿ, ಮಂಜುನಾಥ, ಶ್ರೀನಿವಾಸ್, ಕಸದ ಲಿಪ್ಪರ್ ಲಾರಿ ಚಾಲಕರ ಸಂಘದ ಪ್ರಕಾಶ್, ಪೌರ ಕಾರ್ಮಿಕರ ಸಂಘದ ಮಂಜುನಾಥ, ಅಂದಾನಿ, ಕುಮಾರ್, ಎಐಟಿಯುಸಿ ಚಂದ್ರಶೇಖರ್, ಐಎನ್‌ಟಿಯುಸಿ ನವಾಜ್, ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಆಸ್ಪತ್ರೆ ಕಾರ್ಮಿಕರ ಸಂಘದ ರಂಗಮ್ಮ, ನೇತ್ರಾವತಿ, ವಿ.ವಿ. ಕಾರ್ಮಿಕ ಸಂಘದ ಗಂಗಮ್ಮ, ಲಕ್ಷ್ಮಿ, ನಿಖಿತ ಕಾರ್ಮಿಕರ ಸಂಘದ ಮಧುಸೂಧನ್, ಸಿಂಧೂರ್ ಪೋಜ್ ಕಾರ್ಮಿಕ ಸಂಘದ ಉಮೇಶ್, ಕಟ್ಟಡ ಕಾರ್ಮಿಕ ಸಂಘದ ಕಲೀಲ್, ಶಂಕರಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...