ತುಮಕೂರು | ಬಾಕಿ ಪ್ರಕರಣಗಳ ವಿಲೇವಾರಿಗೆ ನ್ಯಾಯಾಂಗ ಸುಧಾರಣೆ ಅಗತ್ಯ : ಡಾ. ಜಿ. ಪರಮೇಶ್ವರ್

Date:

ದೇಶದಲ್ಲಿ 1,500ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿಂದ ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ, ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

- Advertisement -

ತುಮಕೂರು ನಗರದ  ಶೆಟ್ಟಿಹಳ್ಳಿಯ ಸೂಫಿಯಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಕ್ಷೇತ್ರದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದ್ದು, ಭಾರತೀಯ ಕಾನೂನು ತಜ್ಞರು ಜಾಗತಿಕ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದೇಶದಲ್ಲಿ ಸೈಬರ್ ಅಪರಾಧಗಳು ದೊಡ್ಡ ಸವಾಲಾಗಿ ಬೆಳೆಯುತ್ತಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕಾನೂನುಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂವಿಧಾನದ ಪೂರ್ವಪೀಠಿಕೆಯಲ್ಲಿ ಸಮಾನತೆಗೆ ಮಹತ್ವ ನೀಡಲಾಗಿದ್ದರೂ, ಅದು ಸಮಾಜದಲ್ಲಿ ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ ಎಂಬುದರ ಬಗ್ಗೆ ಗಂಭೀರ ಚಿಂತನೆ ಅಗತ್ಯವಾಗಿದೆ ಎಂದ ಅವರು, ಸ್ವಾತಂತ್ರ್ಯದ ವೇಳೆಗೆ ದೇಶದ ಸಾಕ್ಷರತೆ ಪ್ರಮಾಣ ಕೇವಲ ಶೇ.12 ಇದ್ದರೆ, ಇಂದು ಅದು ಸುಮಾರು ಶೇ.80ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಕಾನೂನು ಪದವೀಧರರು ವೃತ್ತಿಯನ್ನು ಕೇವಲ ಉದ್ಯೋಗವಾಗಿ ನೋಡದೆ, ನ್ಯಾಯ ಮತ್ತು ಕಾನೂನಿನ ರಕ್ಷಣೆಯ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿ ಕೆಲವೇ ನ್ಯಾಯವಾದಿಗಳು ಹೆಚ್ಚಿನ ವಿಶ್ವಾಸ ಗಳಿಸಿರುವುದಕ್ಕೆ ಅವರ ಕಾನೂನಿನ ಆಳವಾದ ಜ್ಞಾನ ಮತ್ತು ಸಮರ್ಥ ವಾದ ಮಂಡನೆಯೇ ಕಾರಣವಾಗಿದೆ. ಹೊಸ ತಲೆಮಾರಿನ ವಕೀಲರೂ ಅದೇ ಮಟ್ಟದ ಪರಿಣತಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿರುವ ಸಂವಿಧಾನವೇ ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಸಂವಿಧಾನ ದುರ್ಬಲಗೊಂಡರೆ ಪ್ರಜಾಪ್ರಭುತ್ವವೂ ದುರ್ಬಲವಾಗುತ್ತದೆ. ಆದ್ದರಿಂದ ಸಂವಿಧಾನದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ರಾಜಕೀಯಕ್ಕೆ ಬರುವ ಮೊದಲು 1984ರಿಂದ 1994ರವರೆಗೆ ಕ್ರಿಮಿನಲ್ ವಕೀಲರಾಗಿ ಕಾರ್ಯನಿರ್ವಹಿಸಿದ್ದೇನೆ. ಕಾನೂನು ಎಂದರೆ ಸಾಮಾಜಿಕ ಜ್ಞಾನ. ಕಾನೂನು ಪದವೀಧರರು ಅಸಹಾಯಕರು ಮತ್ತು ದ್ವನಿಯಿಲ್ಲದವರ ಪರವಾಗಿ ಕೆಲಸ ಮಾಡಿದಾಗ ಮಾತ್ರ ಅವರ ಪದವಿಗೆ ಗೌರವ ಸಿಗುತ್ತದೆ ಎಂದರು.

ಹಿರಿಯ ನ್ಯಾಯವಾದಿಗಳ ವಾದ ಮಂಡನೆಗಳನ್ನು ಗಮನವಿಟ್ಟು ಆಲಿಸುವ ಮೂಲಕ ಉತ್ತಮ ಅನುಭವ ಪಡೆಯಬಹುದು. ಪ್ರಾಮಾಣಿಕತೆ ಮತ್ತು ನಿರಂತರ ಪರಿಶ್ರಮದಿಂದ ಮಾತ್ರ ವಕೀಲರಾಗಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಗ್ಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಜನರ ವಿಶ್ವಾಸ ಉಳಿಸಿಕೊಳ್ಳಲು ವಕೀಲರು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ವಿಜ್ಞಾನಿ ಡಾ. ಪ್ರಶಾಂತ ಕಾಳಪ್ಪ ಪ್ರಧಾನ ಭಾಷಣ ಮಾಡಿ, ವಿಜ್ಞಾನ ಮತ್ತು ಕಾನೂನು ಎರಡೂ ಸತ್ಯವನ್ನು ಹುಡುಕುವ ಕ್ಷೇತ್ರಗಳಾಗಿವೆ. ಪದವಿ ಜೀವನದ ಅಂತ್ಯವಲ್ಲ, ಹೊಸ ಆರಂಭವಾಗಿದೆ. ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ನ್ಯಾಯಾಲಯಗಳಿಗಿಂತ ಜನರ ನಡುವೆ ಇದ್ದೇ ಪ್ರಭಾವ ಬೀರಿದರು. ಕಾನೂನು ಪದವೀಧರರು ನ್ಯಾಯಾಂಗವನ್ನು ಮತ್ತಷ್ಟು ಬಲಪಡಿಸುವ ದಿಕ್ಕಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಸೋಲು ಯಶಸ್ಸಿನ ಮೆಟ್ಟಿಲು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಹಾಗೂ ತಂತ್ರಜ್ಞಾನವನ್ನು ತಮ್ಮ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಚ್.ಎಂ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಸ್. ಷಫಿ ಅಹಮದ್ ಮಾತನಾಡಿ, ಕಳೆದ 12 ವರ್ಷಗಳಿಂದ ಸೂಫಿಯಾ ಕಾನೂನು ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ಕಾಲೇಜನ್ನು ಅನುದಾನಕ್ಕೆ ಒಳಪಡಿಸುವುದರ ಜೊತೆಗೆ ಉಪನ್ಯಾಸಕರ ನೇಮಕಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಅಲ್ಲದೆ, ತುಮಕೂರಿನಲ್ಲಿ ನಿರ್ಮಾಣವಾಗಲಿರುವ ನ್ಯಾಯಾಲಯ ಸಮುಚ್ಚಯದಲ್ಲಿ ಜುಡಿಷಿಯಲ್ ಹೆರಿಟೇಜ್ ಮ್ಯೂಸಿಯಂ ಸ್ಥಾಪಿಸುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಹೆಚ್.ಎಂ.ಎಸ್. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಅಫ್ತಾಬ್ ಅಹಮದ್, ಸಿಇಒ ಮಹಮ್ಮದ್ ಜುನೈದ್, ಸೂಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಎಸ್., ಕಾನೂನು ವಿವಿಯ ಸಿಂಡಿಕೇಟ್ ಸದಸ್ಯ ರಾಜಣ್ಣ, ವ್ಯವಸ್ಥಾಪಕ ನಿರ್ದೇಶಕ ಅದೀಬ್ ಅಹಮದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...