ತುಮಕೂರು | ಕನ್ನಡ ಕೇವಲ ಮಾತನಾಡುವ ಭಾಷೆಯಲ್ಲ, ಆಸ್ವಾದಿಸುವ ಸಂಸ್ಕೃತಿ: ಪ್ರೊ. ಕೃಷ್ಣೇಗೌಡ

Date:

ಕನ್ನಡ ಭಾಷೆಯನ್ನು ಕೇವಲ ಮಾತನಾಡುವುದಷ್ಟೇ ಅಲ್ಲ, ಅದರ ಸೊಗಡು, ಸಾಹಿತ್ಯ ಮತ್ತು ಶ್ರೀಮಂತಿಕೆಯನ್ನು ಆಸ್ವಾದಿಸಬೇಕು. ನಮ್ಮ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಮೈಸೂರಿನ ಖ್ಯಾತ ವಾಗ್ಮಿ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಕೃಷ್ಣೇಗೌಡ ಹೇಳಿದರು.

- Advertisement -

ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ಅಂಗಸಂಸ್ಥೆಯಾದ ಶ್ರೀ ಸಿದ್ಧಾರ್ಥ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಎಸ್‌ಎಸ್‌ಐಟಿ ಆವರಣದಲ್ಲಿ ಆಯೋಜಿಸಿದ್ದ ‘ಸಿರಿಪರ್ವ’ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಬರೆದಂತೆ ಓದಲು, ಓದಿದಂತೆ ಬರೆಯಲು ಸಾಧ್ಯವಿರುವ ಭಾಷೆಯಾಗಿದೆ. ಆದರೆ ಕನ್ನಡದ ಶ್ರೀಮಂತಿಕೆಯನ್ನು ಅರಿತುಕೊಳ್ಳುವ ಪ್ರಯತ್ನ ಮಾಡದೆ, ಅನ್ಯಭಾಷೆಗಳತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ವಿಷಾದನೀಯ. ಯುವಕರು ಕನ್ನಡ ಭಾಷೆ ಮತ್ತು ನಾಡಿನ ಸಂಸ್ಕೃತಿಯನ್ನು ಗೌರವಿಸುವುದರ ಜೊತೆಗೆ ಅವುಗಳ ಉಳಿವಿಗೆ ಶ್ರಮಿಸಬೇಕು ಎಂದರು.

ಶಿಕ್ಷಣ ಭೀಷ್ಮ ದಿವಂಗತ ಡಾ. ಎಚ್.ಎಂ. ಗಂಗಾಧರಯ್ಯ ಅವರು ದೂರದೃಷ್ಟಿಯಿಂದ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿರುವುದು ಶ್ಲಾಘನೀಯ. ನಾವು ಹೇಗೆ ಬದುಕಬೇಕೆಂದು ಬಯಸುತ್ತೇವೆಯೋ ಅದಕ್ಕೆ ತಕ್ಕಂತೆ ಬದುಕಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಯುವಕರು ಹೊಸ ಚಿಂತನೆ ಮತ್ತು ಯೋಜನೆಗಳ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಲಿಂಗೇಗೌಡ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಕಲೆಗಳಲ್ಲಿ ತೋರುತ್ತಿರುವ ಆಸಕ್ತಿ ಮತ್ತು ಉತ್ಸಾಹ ಸಂತಸ ತಂದಿದೆ. ಓದು ಹಾಗೂ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಂಗವಾಗಿ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಿತು. ಸಾಮೂಹಿಕ ನೃತ್ಯ, ಏಕವ್ಯಕ್ತಿ ಗಾಯನ, ಏಕಪಾತ್ರಾಭಿನಯ, ರಂಗೋಲಿ, ಬೀದಿ ನಾಟಕ, ಕವನ ವಾಚನ, ಮುಖಚಿತ್ರಕಲೆ, ಗುಂಪು ಗಾಯನ, ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಶೋಕ್ ಮೆಹ್ತಾ, ಪರೀಕ್ಷಾಂಗ ನಿಯಂತ್ರಕ ಡಾ. ಕೆ. ಸುನಿಲ್, ಶೈಕ್ಷಣಿಕ ಡೀನ್ ಡಾ. ರೇಣುಕಾಲತಾ ಎಸ್., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್ ಡಾ. ದಿವ್ಯಪ್ರಭಾ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ.ಎಂ. ನಡಕಟ್ಟಿ, ನಿವೃತ್ತ ಪ್ರಾಂಶುಪಾಲ ಡಾ. ವೀರಯ್ಯ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಸಹನಾ ಟಿ.ಎಸ್., ಸಹ ಸಂಚಾಲಕ ಹಾಗೂ ಸಹ ಪ್ರಾಧ್ಯಾಪಕ ಡಾ. ಶಿವರಾಜು ಜಿ.ಡಿ., ಎಸ್‌ಎಸ್‌ಐಟಿ ಲೆಕ್ಕಾಧಿಕಾರಿ ಸತೀಶ್ ಚಂದ್ರಬಾಬು ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ತುಮಕೂರು | ದಾಖಲೆ ರಹಿತ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ: ದಾಖಲಾತಿ ಸಂಗ್ರಹಣೆಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ...