ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

Date:

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಮಾನವ ಕಲ್ಯಾಣಕ್ಕೆ ಬಳಸಬೇಕು ಎಂದು ಜಪಾನ್‌ನ ಟೋಕಿಯೋ ಮೂಲದ ಡಾಮಸ್.ಕಸ್ ಸಂಸ್ಥೆಯ ಸಂಸ್ಥಾಪಕ ಡಾ. ಅಕಿಹಿಕೊ ಕೆನ್ ಸುಗಿಯಾಮಾ ಹೇಳಿದರು.

- Advertisement -

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 17ರಂದು ಐಇಇಇ ವಿದ್ಯಾರ್ಥಿ ಘಟಕ (IEEE SSIT SB) ಹಾಗೂ ಮಹಿಳಾ ಇಂಜಿನಿಯರ್‌ಗಳ ವಿಭಾಗದ ವತಿಯಿಂದ ಆಯೋಜಿಸಿದ್ದ ಐಇಇಇ ದಿನಾಚರಣೆ–2026 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆಯಂತಹ ನವೀನ ತಂತ್ರಜ್ಞಾನಗಳು ವೇಗವಾಗಿ ಬೆಳೆಯುತ್ತಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕೌಶಲ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಹೊಸ ಆಲೋಚನೆಗಳನ್ನು ಗುರುತಿಸುವುದು, ಸಮಸ್ಯೆಗಳಿಗೆ ವಿಭಿನ್ನ ಪರಿಹಾರಗಳನ್ನು ರೂಪಿಸುವುದು ಹಾಗೂ ತಾಂತ್ರಿಕ ಜ್ಞಾನವನ್ನು ಪ್ರಾಯೋಗಿಕವಾಗಿ ಅನ್ವಯಿಸುವುದಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ನವೀನ ಆಲೋಚನೆಗಳಿಗೆ ಕಾರ್ಯರೂಪ ನೀಡಿ, ತಂತ್ರಜ್ಞಾನ ಆಧಾರಿತ ಉದ್ಯಮಗಳನ್ನು ಆರಂಭಿಸುವ ನಿಟ್ಟಿನಲ್ಲಿ ಚಿಂತಿಸಬೇಕು. ಸಂಶೋಧನೆ ಮತ್ತು ನಾವೀನ್ಯತೆಯ ಮೂಲಕ ಸಮಾಜಕ್ಕೆ ಉಪಯುಕ್ತವಾದ ಕೊಡುಗೆ ನೀಡಲು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ. ನಾಡಕಟ್ಟಿ ಅವರು ಉಪಸ್ಥಿತರಿದ್ದರು.

ಬೆಂಗಳೂರು ವಿಭಾಗದ ಮಹಿಳಾ ಇಂಜಿನಿಯರ್‌ಗಳ ವಿಭಾಗದ ಅಧ್ಯಕ್ಷೆ ಡಾ. ಪುಷ್ಪಾ ಸಿ.ಎನ್., ಐಇಇಇ ಬೆಂಗಳೂರು ವಿಭಾಗದ ಖಜಾಂಚಿ ಡಾ. ಅಶ್ವಿನಿ ಅಪ್ಪಾಜಿ, ಐಇಇಇ ಸಂಕೇತ ಸಂಸ್ಕರಣಾ ವಿಭಾಗದ ಬೆಂಗಳೂರು ವಿಭಾಗದ ಅಧ್ಯಕ್ಷ ಡಾ. ಸನೀಶ್ ಕ್ಲೀಟಸ್, ಐಇಇಇ ಎಸ್‌ಎಸ್‌ಐಟಿ ಎಸ್‌ಬಿ ಘಟಕದ ಸಲಹೆಗಾರ ಡಾ. ಎಂ.ಸಿ. ಚಂದ್ರಶೇಖರ ಹಾಗೂ ಕಾರ್ಯಕ್ರಮದ ಸಂಚಾಲಕಿ ಡಾ. ಶಾರದಾ ಗುಪ್ತಾ ಸೇರಿದಂತೆ ವಿವಿಧ ಐಇಇಇ ವಿಭಾಗಗಳ ಅಧ್ಯಾಪಕ ಸಲಹೆಗಾರರು ಮತ್ತು ವಿದ್ಯಾರ್ಥಿ ಅಧ್ಯಕ್ಷರು ಭಾಗವಹಿಸಿದ್ದರು.

ತಾಂತ್ರಿಕ ಶಿಕ್ಷಣ, ವೃತ್ತಿಪರ ಕೌಶಲ್ಯಾಭಿವೃದ್ಧಿ, ಸಂಶೋಧನೆ ಹಾಗೂ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಐಇಇಇ ಸಂಸ್ಥೆಯ ಪಾತ್ರವನ್ನು ಕಾರ್ಯಕ್ರಮವು ಎತ್ತಿಹಿಡಿಯಿತು. ಜಾಗತಿಕ ತಂತ್ರಜ್ಞಾನ ಬೆಳವಣಿಗೆಗಳ ಕುರಿತು ಅರಿವು ಮೂಡಿಸಿದ ಕಾರ್ಯಕ್ರಮವು ನಾವೀನ್ಯತೆ, ಸಂಶೋಧನೆ ಮತ್ತು ನವೋದ್ಯಮಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿಯಲ್ಲಿ ಅರ್ಧಕ್ಕೆ ನಿಂತ ವೈಟ್ ಟಾಪಿಂಗ್ ರಸ್ತೆ: ಧೂಳು, ಗುಂಡಿಗಳ ನಡುವೆ ಜನರ ಪರದಾಟ

ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್...

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...