ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

Date:

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದರು.

- Advertisement -

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ನಡೆಸಿದವರು ಯಾರು ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಈ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿರುವುದರಿಂದ, ಸೂಕ್ತ ತನಿಖೆ ನಡೆಸುವ ಮೂಲಕ ಪ್ರಕರಣದ ಸತ್ಯಾಂಶವನ್ನು ಹೊರತರಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಆಡಿಯೋ ಅಥವಾ ವಿಡಿಯೋ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಾಗಿದೆ ಎಂಬ ವಿಷಯ ತಮಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ ರಾಜಣ್ಣ, ರಾಹುಲ್ ಗಾಂಧಿ ರಾಜೀನಾಮೆ ಕೇಳಿದರೆ ತಕ್ಷಣವೇ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಈ ಹಿಂದೆ ಪದೇಪದೇ ಹೇಳುತ್ತಿದ್ದರು. ರಾಹುಲ್ ಗಾಂಧಿ ರಾಜೀನಾಮೆ ಕೇಳಿದ್ದರಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು.

ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸುವ ಪ್ರಯತ್ನ ನಡೆದಿತ್ತು ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣ ಹಾಗೂ ತಮ್ಮ ವಿರುದ್ಧ ನಡೆದಿತ್ತು ಎನ್ನಲಾದ ಪ್ರಯತ್ನದ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಸ್ಟಿಂಗ್ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜಣ್ಣ, ‘ಮಹಾನಾಯಕ’ ಎಂಬ ಸಿನಿಮಾ ಬಂದಿರುವುದು ತಮಗೆ ಗೊತ್ತು. ಆದರೆ, ಅದರ ಹೊರತಾಗಿ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಪ್ರಕರಣದ ಕುರಿತು ಊಹಾಪೋಹಗಳಿಗೆ ಆಸ್ಪದ ನೀಡದೆ, ತನಿಖೆಯ ಮೂಲಕ ವಾಸ್ತವಾಂಶಗಳನ್ನು ಪತ್ತೆಹಚ್ಚಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಬೇಕು ಎಂಬುದು ತಮ್ಮ ಒತ್ತಾಯ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...