ತುಮಕೂರು | ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ತೀರ್ಪು

Date:

ಜಮೀನು ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಲಾಂಗ್‌ನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

- Advertisement -

ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಕಂಚಿಹಳ್ಳಿ ಗ್ರಾಮದ ನಿವಾಸಿಗಳಾದ ಹೊನ್ನಯ್ಯ ಮತ್ತು ಕೃಷ್ಣಪ್ಪ ಅವರು ಪಿತ್ರಾರ್ಜಿತ ಆಸ್ತಿಯನ್ನು ವಿಭಾಗ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕೃಷ್ಣಪ್ಪ ತಮ್ಮ ಜಮೀನಿನಲ್ಲಿ ತೆಂಗಿನ ಸಸಿಗಳನ್ನು ನೆಟ್ಟಿದ್ದು, ಹೊನ್ನಯ್ಯ ಅವುಗಳನ್ನು ಕಿತ್ತು ಹಾಕಿದ್ದರಿಂದ ಇಬ್ಬರ ನಡುವೆ ಜಮೀನು ವಿಚಾರವಾಗಿ ದ್ವೇಷ ಉಂಟಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಹಿನ್ನೆಲೆಯಲ್ಲಿ 2021ರ ಏಪ್ರಿಲ್ 11ರಂದು ಬೆಳಗ್ಗೆ ಸುಮಾರು 10.30ಕ್ಕೆ ಹರಿಪ್ರಸಾದ್ ಮತ್ತು ಪಾರ್ವತಮ್ಮ ಅವರು ಕಂಚಿಹಳ್ಳಿ ಗ್ರಾಮದ ತಮ್ಮ ಜಮೀನಿನ ಬಳಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಆರೋಪಿ ಹರೀಶ್ ಏಕಾಏಕಿ ಪಾರ್ವತಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಕಂಭೇಗೌಡ ಅಲಿಯಾಸ್ ಶಶಿ ಅವರ ಕುತ್ತಿಗೆ ಹಾಗೂ ಎರಡೂ ಕೈಗಳಿಗೆ ಲಾಂಗ್‌ನಿಂದ 5–6 ಬಾರಿ ಬಲವಾಗಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಶಶಿ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವೃತ್ತ ನಿರೀಕ್ಷಕ ಗುರುಪ್ರಸಾದ್ ವಿ.ಎಂ. ಅವರು ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಐಪಿಸಿ ಕಲಂ 143, 147, 148, 307, 302, 149, 323 ಹಾಗೂ 114ರ ಅಡಿಯಲ್ಲಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣವು ತುಮಕೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿದ್ದು, ಅಭಿಯೋಜನೆ ಪರ ಸಾಕ್ಷ್ಯಾಧಾರಗಳು ಹಾಗೂ ಸಾಕ್ಷಿಗಳ ವಿಚಾರಣೆಯಿಂದ 1ನೇ ಆರೋಪಿ ಹರೀಶ್.ಕೆ ವಿರುದ್ಧ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ.

2026ರ ಆಗಸ್ಟ್ 28ರಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಅವರು, ಆರೋಪಿ ಹರೀಶ್‌ಗೆ ಐಪಿಸಿ ಕಲಂ 324ರ ಅಡಿಯಲ್ಲಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.

ಅದೇ ರೀತಿ ಐಪಿಸಿ ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಆರ್.ಟಿ. ಅರುಣ ಅವರು ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...