ತುಮಕೂರು | ಹೊಸ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

Date:

ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ (ಪಿಎಫ್) ನೀತಿಯಲ್ಲಿನ ಕಾರ್ಮಿಕ ವಿರೋಧಿ ಅಂಶಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಗಾರ್ಮೆಂಟ್ಸ್ ಕಾರ್ಮಿಕರ ಜಂಟಿ ಹೋರಾಟ ಸಮಿತಿ ಹಾಗೂ ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಮಂಗಳವಾರ (ಸೆ.22) ಕೆಲಸ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ನಗರದ ಗುಬ್ಬಿ ಗೇಟ್ ರಿಂಗ್ ರಸ್ತೆಯಿಂದ ಮೆರವಣಿಗೆ ಆರಂಭಿಸಿದ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು, ಹೊಸ ಪಿಎಫ್ ನಿಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ದುಡಿಮೆಯಿಂದ ಉಳಿತಾಯ ಮಾಡಿದ ಪಿಎಫ್ ಹಣವನ್ನು ತಮ್ಮ ಅಗತ್ಯದ ಸಂದರ್ಭದಲ್ಲಿ ಪಡೆಯಲು ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಗಾರ್ಮೆಂಟ್ಸ್ ಕಾರ್ಮಿಕರಾದ ರಾಧಿಕಾ, ಆಶಾ, ಎಸ್. ನೇತ್ರಾವತಿ ಹಾಗೂ ಶರ್ಮಿನ್ ಉನ್ನಿಸಾ, “ನಮ್ಮ ದುಡಿಮೆಯಿಂದ ಉಳಿಸಿದ ಹಣವನ್ನು ನಮ್ಮ ಕಷ್ಟದ ಸಂದರ್ಭದಲ್ಲಿ ಪಡೆಯಲು ಕಾಯಬೇಕಾದ ಪರಿಸ್ಥಿತಿ ಏಕೆ?” ಎಂದು ಪ್ರಶ್ನಿಸಿದರು.

ಸಂರಕ್ಷಣಾ ವೇದಿಕೆಯ ಯೋಗೀಶ್ ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದರು.

1004053419

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಮಾತನಾಡಿ, ಗಾರ್ಮೆಂಟ್ಸ್ ಕಾರ್ಮಿಕರು ನಿರಂತರ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾರೆ. ಕನಿಷ್ಠ ಕೂಲಿ ನಿಗದಿಯಲ್ಲಿಯೂ ಗಾರ್ಮೆಂಟ್ಸ್ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಕಾರ್ಮಿಕರು ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಭವಿಷ್ಯ ನಿಧಿ ಕಾಯ್ದೆ–1952ರ ಬದಲಿಗೆ ಸಾಮಾಜಿಕ ಭದ್ರತಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಇದರಿಂದ ದುಡಿಯುವ ಜನರಿಗೆ ಸಾಮಾಜಿಕ ಭದ್ರತೆ ಒದಗಿಸುವ ಬದಲು ಈಗಾಗಲೇ ಲಭ್ಯವಿರುವ ಅಲ್ಪ ಪ್ರಮಾಣದ ಭದ್ರತೆಯೂ ದುರ್ಬಲವಾಗುತ್ತಿದೆ ಎಂದು ಆರೋಪಿಸಿದರು.

2026ರಲ್ಲಿ ಭವಿಷ್ಯ ನಿಧಿ ನಿಯಮಗಳಲ್ಲಿ ತರಲಾಗಿರುವ ಬದಲಾವಣೆಗಳು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದ ಅವರು, ಈ ಬದಲಾವಣೆಗಳನ್ನು ಸಂಪೂರ್ಣವಾಗಿ ಹಿಂಪಡೆಯುವ ಹೋರಾಟಕ್ಕೆ ಗಾರ್ಮೆಂಟ್ಸ್ ಕಾರ್ಮಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು. ಗಾರ್ಮೆಂಟ್ಸ್ ಕಾರ್ಮಿಕರ ಹೋರಾಟಕ್ಕೆ ಸಿಐಟಿಯು ಬೆಂಬಲ ನೀಡಲಿದೆ ಎಂದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರು, ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ನೀತಿ ವಿಚಾರವಾಗಿರುವುದರಿಂದ ಕಾರ್ಮಿಕರ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು. ಪಿಎಫ್ ಇಲಾಖೆಯ ಅಧಿಕಾರಿಗಳೂ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

ಹಕ್ಕೊತ್ತಾಯಗಳು:

– ಹೊಸ ಪಿಎಫ್ ನೀತಿಯಲ್ಲಿನ ಕಾರ್ಮಿಕ ವಿರೋಧಿ ಅಂಶಗಳನ್ನು ತಕ್ಷಣ ಹಿಂಪಡೆಯಬೇಕು.

– ಕಾರ್ಮಿಕರು ತಮ್ಮ ಪಿಎಫ್ ಹಣವನ್ನು ಅಗತ್ಯ ಸಂದರ್ಭದಲ್ಲಿ ಬಳಸಿಕೊಳ್ಳಲು ಸೂಕ್ತ ಅವಕಾಶ ಕಲ್ಪಿಸಬೇಕು.

– ಗಾರ್ಮೆಂಟ್ಸ್ ಕಾರ್ಮಿಕರಿಗೆ ಅನುಕೂಲವಾಗುವ ಹಿಂದಿನ ವ್ಯವಸ್ಥೆಯನ್ನು ಮರು ಜಾರಿಗೆ ತರಬೇಕು.

ಪ್ರತಿಭಟನೆಯ ನೇತೃತ್ವವನ್ನು ಗಾರ್ಮೆಂಟ್ಸ್ ಹೋರಾಟ ಸಮಿತಿಯ ಜಬಿನಾ, ಉಮಾ, ಕಾವ್ಯಾ, ಸಿಐಟಿಯು ತಾಲ್ಲೂಕು ಸಂಚಾಲಕ ರಂಗಧಾಮಯ್ಯ, ದಿನಮಣಿ, ಇಂತಿಯಾಜ್ ಸೇರಿದಂತೆ ಹಲವರು ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ಬೋಧಕ ವರ್ಗದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್

 ಕಾಲೇಜಿನ ಗ್ರಂಥಾಲಯದಲ್ಲಿರುವ ಸುಮಾರು 50 ಸಾವಿರ ಪುಸ್ತಕಗಳ ಜ್ಞಾನ ಸಂಪನ್ಮೂಲ ಹಾಗೂ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...