ತುಮಕೂರು | ಕಾರ್ಮಿಕ ಸಂಹಿತೆ ವಿರೋಧಿಸಿ ಸೆ.8ರಂದು ಬೃಹತ್ ವಿಧಾನಸೌಧ ಚಲೋ : ಸಿಐಟಿಯು

Date:

ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಸೇರಿದಂತೆ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಕರ್ನಾಟಕ ರಾಜ್ಯ ಅಧ್ಯಕ್ಷೆ ಹಾಗೂ ಕನಿಷ್ಠ ವೇತನ ಸಲಹಾ ಸಮಿತಿ ಸದಸ್ಯೆ ಕಾಂ. ಮೀನಾಕ್ಷಿ ಸುಂದರಂ ತಿಳಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಶನಿವಾರ ಸಿಐಟಿಯು ಜಿಲ್ಲಾ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 29 ಕಾರ್ಮಿಕ ಕಾಯ್ದೆಗಳನ್ನು ನಾಲ್ಕು ಸಂಹಿತೆಗಳಾಗಿ ವಿಲೀನಗೊಳಿಸುವ ಮೂಲಕ ಕಾರ್ಮಿಕರಿಗೆ ಈ ಹಿಂದೆ ಇದ್ದ ಅಲ್ಪ ಪ್ರಮಾಣದ ಕಾನೂನು ರಕ್ಷಣೆಯನ್ನೂ ದುರ್ಬಲಗೊಳಿಸಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾಜ್ಯ ಸರ್ಕಾರ ಕಾರ್ಮಿಕ ಸಂಘಟನೆಗಳ ಪರ್ಯಾಯ ಸಲಹೆಗಳನ್ನು ಪರಿಗಣಿಸದೆ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮೇ 22ರಂದು ಹೊರಡಿಸಲಾದ ಕನಿಷ್ಠ ವೇತನ ಅಧಿಸೂಚನೆಯು 8–9 ವರ್ಷಗಳ ಬಳಿಕ ಬಂದಿದ್ದು, ಬೀಡಿ, ಪ್ಲಾಂಟೇಷನ್, ಕೈಮಗ್ಗ, ಗಾರ್ಮೆಂಟ್ಸ್ ಸೇರಿದಂತೆ 19 ಕೈಗಾರಿಕೆಗಳಿಗೆ ಅನ್ವಯಿಸದಿರುವುದರಿಂದ 15–20 ಲಕ್ಷ ಕಾರ್ಮಿಕರು ಕನಿಷ್ಠ ವೇತನದ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.

ರಾಜ್ಯದ 1.77 ಕೋಟಿ ಕಾರ್ಮಿಕರಿಗೆ ನಾಲ್ಕು ವರ್ಷಗಳಿಂದ ವೇತನ ಪರಿಷ್ಕರಣೆ ಸಿಗದೆ ಅನ್ಯಾಯವಾಗಿದೆ. ಸಿಐಟಿಯು ಮಾಸಿಕ ಕನಿಷ್ಠ ವೇತನವನ್ನು ₹42,000ಕ್ಕೆ ನಿಗದಿಪಡಿಸಬೇಕು ಎಂದು ಒತ್ತಾಯಿಸುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಕಲ್ಪಿಸುವುದರ ಜೊತೆಗೆ ಅಂಗನವಾಡಿ, ಅಕ್ಷರದಾಸೋಹ ಹಾಗೂ ಆಶಾ ಕಾರ್ಯಕರ್ತೆಯರನ್ನು ಕನಿಷ್ಠ ವೇತನದ ವ್ಯಾಪ್ತಿಗೆ ತರಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತಾನೇ ಹೊರಡಿಸಿದ ಕನಿಷ್ಠ ವೇತನ ಅಧಿಸೂಚನೆಯನ್ನು ತಾನೇ ತಡೆಹಿಡಿದಿರುವುದು ಖಂಡನೀಯ. ಈ ವಿಚಾರದಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿಯ ಕ್ರಮ ಸಂವಿಧಾನ ವಿರೋಧಿಯಾಗಿದೆ ಎಂದು ಅವರು ಟೀಕಿಸಿದರು.

ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ

ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕು. 1970ರ ಕಾಯ್ದೆಯ ಉಲ್ಲಂಘನೆಯಿಂದ ಲಕ್ಷಾಂತರ ನೌಕರರು ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ‘ಸಮಾನ ಕೆಲಸಕ್ಕೆ ಸಮಾನ ವೇತನ’ ತೀರ್ಪನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರೈತರ ಫಲವತ್ತಾದ ಭೂಮಿಯ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು, ವಸತಿ ರಹಿತ ಕಾರ್ಮಿಕರಿಗೆ ವಸತಿ ಕಲ್ಪಿಸಬೇಕು ಹಾಗೂ ಬಿಪಿಎಲ್ ಕಾರ್ಡ್‌ಗೆ ಇರುವ ₹1.20 ಲಕ್ಷ ಆದಾಯ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಸೆ.8ರ ವಿಧಾನಸೌಧ ಚಲೋಗೆ ಬೆಂಬಲವಾಗಿ ಜಿಲ್ಲೆಯ ಕೈಗಾರಿಕಾ ಪ್ರದೇಶಗಳು ಹಾಗೂ ಕಾರ್ಮಿಕರ ವಾಸಸ್ಥಳಗಳಲ್ಲಿ ಪ್ರಚಾರ ನಡೆಸಲಾಗುತ್ತಿದೆ. ಜಿಲ್ಲೆಯಿಂದ ಸುಮಾರು 5,000 ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬೀದಿ ಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುವ ಬದಲು ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಸೂಕ್ತ ವೆಂಡಿಂಗ್ ಜೋನ್‌ಗಳನ್ನು ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಎ. ಲೋಕೇಶ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ, ಸುಜೀತ್ ನಾಯಕ್, ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘದ ವಸೀಂ ಅಕ್ರಂ, ಅಂಗನವಾಡಿ ನೌಕರರ ಸಂಘದ ಗಂಗಾ, ಕಟ್ಟಡ ಕಾರ್ಮಿಕರ ಸಂಘದ ಬಿ. ಉಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...