ತುಮಕೂರು | ವೈದ್ಯಕೀಯ ಶಿಕ್ಷಣಕ್ಕೆ ಜಾಗತಿಕ ಸಹಯೋಗದ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

Date:

 ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ತಂತ್ರಜ್ಞಾನ ಅಳವಡಿಕೆ, ಶೈಕ್ಷಣಿಕ ಸಹಯೋಗ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬಂಧಿಸಿದ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಜಾಗತಿಕ ಪೈಪೋಟಿಯನ್ನು ಎದುರಿಸಲು ವೈದ್ಯಕೀಯ ವಿದ್ಯಾರ್ಥಿಗಳು ಸನ್ನದ್ಧರಾಗಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಜಿ. ಪರಮೇಶ್ವರ್ ತಿಳಿಸಿದರು.

- Advertisement -

ತುಮಕೂರು ನಗರದ ಹೊರವಲಯದ ಅಗಳಕೋಟೆಯಲ್ಲಿರುವ ಡಾ. ಎಚ್.ಎಂ. ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶುಕ್ರವಾರ (ನ.6) ಆಯೋಜಿಸಿದ್ದ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶ್ರೀ ಸಿದ್ಧಾರ್ಥ ಡೆಂಟಲ್ ಕಾಲೇಜು ಹಾಗೂ ನೆಲಮಂಗಲದ ಶ್ರೀ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್‌ನ 2026-27ನೇ ಶೈಕ್ಷಣಿಕ ಸಾಲಿನ ವೈದ್ಯಕೀಯ ವಿದ್ಯಾರ್ಥಿಗಳ ‘ವೈಟ್ ಕೋಟ್ ಧಾರಣೆ ಮತ್ತು ಪ್ರಮಾಣವಚನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ತಮ್ಮ ತಂದೆಯವರು ಬೌದ್ಧ ಧರ್ಮದಲ್ಲಿ ನಂಬಿಕೆ ಹೊಂದಿದ್ದು, ಬುದ್ಧನ ಬೋಧನೆ ಹಾಗೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು ಎಂದು ಸ್ಮರಿಸಿದ ಡಾ. ಪರಮೇಶ್ವರ್, ಶಿಕ್ಷಣವು ಮನುಷ್ಯನಿಗೆ ವಿವಿಧ ಆಯಾಮಗಳ ಜ್ಞಾನವನ್ನು ನೀಡುತ್ತದೆ. ಆ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ತಲುಪಿಸುವುದೇ ನಮ್ಮ ಶಿಕ್ಷಣ ಸಂಸ್ಥೆಗಳ ಪ್ರಮುಖ ಉದ್ದೇಶವಾಗಿದೆ. ಇದೇ ಮೂಲಭೂತ ಆಶಯದೊಂದಿಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದಷ್ಟೇ ಅಲ್ಲದೆ, ಅವರ ಯೋಗಕ್ಷೇಮದ ಬಗ್ಗೆಯೂ ಕಾಳಜಿ ವಹಿಸುವುದು ಶಿಕ್ಷಣ ಸಂಸ್ಥೆಯ ಜವಾಬ್ದಾರಿಯಾಗಿದೆ. ವೈದ್ಯಕೀಯ ಶಿಕ್ಷಣಕ್ಕೆ ಹೊಸದಾಗಿ ಪ್ರವೇಶಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ತಾವೇ ಮುಂದೆ ನಿಂತು ಸ್ವಾಗತಿಸುತ್ತಿರುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಪರಿಣತ ವೈದ್ಯರಾಗಿ ಹೊರಹೊಮ್ಮಬೇಕು ಎಂದು ಹಾರೈಸಿದರು.

1004350884

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಮಾತನಾಡಿ, ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರ ಹಾಗೂ ಜವಾಬ್ದಾರಿಯುತವಾದುದು. ಜೀವನದಲ್ಲಿ ಯಶಸ್ಸು ಸಾಧಿಸಲು ಯಾವುದೇ ಅಡ್ಡದಾರಿ ಇಲ್ಲ. ವಿದ್ಯಾರ್ಥಿಗಳು ಲಿಫ್ಟ್ ಬಳಸುವ ಬದಲು ಮೆಟ್ಟಿಲುಗಳನ್ನು ಏರುವಂತೆ ಕಠಿಣ ಪರಿಶ್ರಮದ ಮೂಲಕ ಹಂತ ಹಂತವಾಗಿ ಸಾಧನೆಯ ಶಿಖರ ತಲುಪಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ, ಧ್ಯಾನ ಮತ್ತು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಯುವಜನರು ಮಾದಕ ವಸ್ತುಗಳ ವ್ಯಸನದಿಂದ ಸಂಪೂರ್ಣವಾಗಿ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಆಧುನಿಕ ತಂತ್ರಜ್ಞಾನಗಳು ಮಹತ್ವದ ಬದಲಾವಣೆ ತರುತ್ತಿದ್ದರೂ, ವೈದ್ಯರ ಮಾನವೀಯ ಸ್ಪರ್ಶ, ವೈದ್ಯಕೀಯ ಕೌಶಲ್ಯ ಹಾಗೂ ಚಿಕಿತ್ಸಾ ಪರಿಣತಿಗೆ ಎಂದಿಗೂ ಪರ್ಯಾಯವಿಲ್ಲ ಎಂದು ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಅಂಗಾಂಗ ದಾನ ಅಭಿಯಾನ, ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ನಿರ್ಮಾಣ, ಮೆಂಟರ್‌-ಮೆಂಟಿ ಕಾರ್ಯಕ್ರಮ ಹಾಗೂ ಕಾಲಕಾಲಕ್ಕೆ ನಡೆಯುವ ಸಮಾಲೋಚನಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಡಾ. ಜಿ.ಎಸ್. ಆನಂದ, ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಬಿ. ಲಿಂಗೇಗೌಡ, ಕುಲಸಚಿವ ಡಾ. ಅಶೋಕ ಮೆಹ್ತಾ, ಪರೀಕ್ಷಾಂಗ ನಿಯಂತ್ರಕ ಡಾ. ಸುನಿಲ್, ಪ್ರಾಂಶುಪಾಲರಾದ ಡಾ. ಸಾಣಿಕೊಪ್ಪ, ಡಾ. ದಿವಾಕರ್, ಡಾ. ಪ್ರವೀಣ್ ಕುಡುವಾ, ಉಪಪ್ರಾಂಶುಪಾಲ ಡಾ. ಪ್ರಭಾಕರ್ ಸೇರಿದಂತೆ ವಿವಿಧ ಸಮೂಹ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಜಿ. ಪರಮೇಶ್ವರ್ ಅವರು ವೈದ್ಯಕೀಯ ಸಮವಸ್ತ್ರವಾದ ‘ವೈಟ್ ಕೋಟ್’ ವಿತರಿಸಿದರು. ಬಳಿಕ ಕಾಲೇಜಿನ ಪ್ರಾಂಶುಪಾಲರು ನೂತನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರಿನಲ್ಲಿ ದಟ್ಟ ಮಂಜು: ವಾಹನ ಸವಾರರ ಪರದಾಟ

ಮಳೆಯಿಲ್ಲದೆ ಕಂಗೆಟ್ಟಿರುವ ಜನತೆಗೆ ಕಳೆದ 2-3 ದಿನಗಳಿಂದ ಮೈ ಕೊರೆಯುವ ಚಳಿ...

ತುಮಕೂರು | ನಕಲಿ ಔಷಧ, ಕಲಬೆರಕೆ ಆಹಾರದ ಜಾಲದ ಬಗ್ಗೆ ಎಚ್ಚರಿಕೆ ಇರಲಿ : ಮುರುಳೀಧರ ಹಾಲಪ್ಪ

ಆಹಾರ ಮತ್ತು ಔಷಧ ಎರಡಕ್ಕೂ ನೇರ ಸಂಬಂಧವಿದೆ. ಕಲಬೆರಕೆ ಆಹಾರ ಸೇವಿಸಿ...

ತುಮಕೂರು | ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಕೃಷ್ಣೇಗೌಡ

 ಭಾಷೆ ಎನ್ನುವುದು ಕೇವಲ ಸಂವಹನದ ಸಾಧನವಲ್ಲ. ಸಂಗೀತ, ಭಾವನೆ, ಕೋಪ, ಕಾಮ,...