ತುಮಕೂರು | ಈದ್ ಮಿಲಾದ್‌ನಲ್ಲಿ ಶಾಂತಿ, ಸೌಹಾರ್ದತೆ, ಮಾನವೀಯತೆಯ ಸಂದೇಶ

Date:

ತುಮಕೂರು ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಮಕ್ಕಾ ಮಸೀದಿಯಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಅವರ 1501ನೇ ಜನ್ಮ ಜಯಂತಿಯ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಿಸಲಾಯಿತು.

- Advertisement -

ಮಕ್ಕಾ ಮಸೀದಿ ಅಧ್ಯಕ್ಷರಾದ ಮಾಜಿ ಶಾಸಕ ಡಾ. ಎಸ್. ಷಫಿ ಅಹಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸೌಹಾರ್ದ ಪ್ರಾರ್ಥನೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಪಾಲ್ಗೊಂಡು ಈದ್ ಮಿಲಾದ್ ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಾ. ರಫೀಕ್ ಅಹಮದ್, ಪ್ರವಾದಿ ಮಹಮ್ಮದ್ ಅವರು ಅಜ್ಞಾನ, ಅನ್ಯಾಯ ಹಾಗೂ ಅಸಮಾನತೆಗಳಿಂದ ಕೂಡಿದ್ದ ಕಾಲದಲ್ಲಿ ಶಾಂತಿ, ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರಿದರು.

 ಪ್ರವಾದಿಯವರ ನಡೆ-ನುಡಿ ಹಾಗೂ ಕುರಾನ್ ಶರೀಫ್‌ನ ಸಂದೇಶಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ. ಅವರ ಸಂದೇಶದಂತೆ ರಾಜ್ಯ ಹಾಗೂ ದೇಶದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವ ನೆಲೆಸಲಿ ಎಂದು ಪ್ರಾರ್ಥಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಪ್ರವಾದಿ ಮಹಮ್ಮದ್ ಅವರ ಜನ್ಮದಿನದ ಪವಿತ್ರ ಸಂದರ್ಭದಲ್ಲಿ ಜಿಲ್ಲಾಡಳಿತದ ಪರವಾಗಿ ಜಿಲ್ಲೆಯ ಜನತೆಗೆ ಈದ್ ಮಿಲಾದ್ ಶುಭಾಶಯಗಳನ್ನು ತಿಳಿಸಿದರು.

 ಪ್ರವಾದಿಯವರು ಬೋಧಿಸಿದ ಶಾಂತಿ, ಸಹನೆ, ಕರುಣೆ ಮತ್ತು ಮಾನವೀಯತೆಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ವಿವಿಧ ಧರ್ಮ ಹಾಗೂ ಜಾತಿಗಳ ಜನರು ವಾಸಿಸುವ ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ಸೌಹಾರ್ದತೆ ಮತ್ತು ಪ್ರೀತಿಯಿಂದ ಬದುಕಬೇಕು. ತುಮಕೂರು ಜಿಲ್ಲೆಯಲ್ಲಿ ಎಲ್ಲ ಹಬ್ಬಗಳನ್ನೂ ಶಾಂತಿಯುತವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿ ಹಾಗೂ ಸಮಾಜದ ಧ್ವನಿ ಇಲ್ಲದ ಜನರಿಗೆ ಧ್ವನಿಯಾಗಿ ಕೆಲಸ ಮಾಡಲು ಅಗತ್ಯ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಕಳೆದ ಎರಡು-ಮೂರು ವರ್ಷಗಳಿಂದ ತುಮಕೂರಿನಲ್ಲಿ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಶಾಂತಿಯುತವಾಗಿ ಮತ್ತು ಶ್ರದ್ಧೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಮೆರವಣಿಗೆಯಲ್ಲಿ ಜನರು ಈದ್ಗಾ ಮೈದಾನದವರೆಗೆ ಸುಮಾರು 20–25 ಕಿ.ಮೀ. ದೂರವನ್ನು ತಾಳ್ಮೆ ಹಾಗೂ ಶಿಸ್ತಿನಿಂದ ಸಾಗುವುದನ್ನು ಸ್ವತಃ ಗಮನಿಸಿದ್ದೇನೆ ಎಂದರು. ಈ ಪವಿತ್ರ ಆಚರಣೆಯಲ್ಲಿ ಸಾರ್ವಜನಿಕರೊಂದಿಗೆ ಭಾಗಿಯಾಗಲು ಸಂತೋಷವಾಗುತ್ತಿದೆ ಎಂದು ಹೇಳಿ ಎಲ್ಲರಿಗೂ ‘ಈದ್ ಮುಬಾರಕ್’ ಶುಭಾಶಯ ಕೋರಿದರು.

ಮಕ್ಕಾ ಮಸೀದಿ ಅಧ್ಯಕ್ಷ ಡಾ. ಎಸ್. ಷಫಿ ಅಹಮದ್ ಮಾತನಾಡಿ, ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ನಡೆಯುವ ಈದ್ ಮಿಲಾದ್ ಆಚರಣೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭಾಗವಹಿಸಿರುವುದು ಸಂತಸ ತಂದಿದೆ. ಶಾಂತಿ ಮತ್ತು ಸೌಹಾರ್ದತೆಯ ಸಂಕೇತವಾಗಿರುವ ಈದ್ ಹಬ್ಬವು ನಾಡಿನ ಜನತೆಗೆ ಒಳಿತನ್ನು ತರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮಕ್ಕಾ ಮಸೀದಿಯ ಧಾರ್ಮಿಕ ಮುಖಂಡ ಮಹಮ್ಮದ್ ಯಾಸೀನ್ ಪ್ರಾರ್ಥನೆ ಸಲ್ಲಿಸಿದರು. ಮಸೀದಿ ಕಾರ್ಯದರ್ಶಿ ಅಬ್ದುಲ್ ಸುಭಾನ್, ಮುಖಂಡರಾದ ಅಫ್ತಾಬ್ ಅಹಮದ್, ಅದೀಬ್ ಅಹಮದ್, ಡಾ. ನಯಾಜ್, ಮೆಹಬೂಬ್ ಪಾಷ, ಅದೀಲ್, ತಾಜುದ್ದೀನ್ ಷರೀಫ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...