ತುಮಕೂರು | ವಿದ್ಯಾರ್ಥಿಗಳ ಬೆಳವಣಿಗೆಗೆ ಆಧುನಿಕ ಶೈಕ್ಷಣಿಕ ಮೂಲಸೌಕರ್ಯ ಅಗತ್ಯ : ಥಾವರ್ ಚಂದ್ ಗೆಹ್ಲೋಟ್

Date:

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ಹೊಸದಾಗಿ ನಿರ್ಮಿಸಲಾದ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಮತ್ತು ಶೈಕ್ಷಣಿಕ ಬ್ಲಾಕ್–2ರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ವಿಶ್ವವಿದ್ಯಾನಿಲಯದಲ್ಲಿ ನಿರ್ಮಾಣಗೊಂಡಿರುವ ಹೊಸ ಮೂಲಸೌಕರ್ಯಗಳು ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಂಶೋಧಕರಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ರಾಷ್ಟಿçÃಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶ್ವವಿದ್ಯಾನಿಲಯದ ಹೆಗ್ಗಳಿಕೆಯನ್ನು ಹೆಚ್ಚಿಸಲಿವೆ ಎಂದು ರಾಜ್ಯಪಾಲರು ವಿಶ್ವಾಸ ವ್ಯಕ್ತಪಡಿಸಿದರು.

ತುಮಕೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಭೇಟಿ ನೀಡಿರುವುದಾಗಿ ತಿಳಿಸಿದ ರಾಜ್ಯಪಾಲರು, ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯವಾಗಿದ್ದು, ಸರ್ಕಾರದ ಜೊತೆಗೆ ವಿವಿಧ ಲೋಕೋಪಕಾರಿ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ  ಅಡಿಯಲ್ಲಿ ದೊರೆತಿರುವ ಸಹಕಾರವು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ. ಸಿಎಸ್‌ಆರ್ ನೆರವಿನಡಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಇನ್ಕುö್ಯಬೇಷನ್ ಕೇಂದ್ರವು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸಂಶೋಧನೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸಲಿದೆ. ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ಜೀವವೈವಿಧ್ಯ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳೂ ಶ್ಲಾಘನೀಯವೆಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ-2020 ಶಿಕ್ಷಣವನ್ನು ಬಹು ಆಯಾಮದ, ಸಂಶೋಧನಾ ಆಧಾರಿತ ಹಾಗೂ ವಿದ್ಯಾರ್ಥಿ ಕೇಂದ್ರಿತವಾಗಿಸಿದ್ದು, ಜ್ಞಾನವುಳ್ಳ, ಸ್ವಾವಲಂಬಿ ಹಾಗೂ ರಾಷ್ಟ್ರ ಸಮರ್ಪಿತ ಯುವಜನತೆಯನ್ನು ರೂಪಿಸುವ ಗುರಿಯನ್ನು ಹೊಂದಿದೆ ಎಂದು ರಾಜ್ಯಪಾಲರು ತಿಳಿಸಿದರು. 

ಇಂದು ಉದ್ಘಾಟನೆಗೊಂಡ ಯೋಜನೆಗಳು ಹಾಗೂ ಶೈಕ್ಷಣಿಕ ಬ್ಲಾಕ್–2ರ ಭೂಮಿಪೂಜೆ ಇದೇ ಶಿಕ್ಷಣ ತತ್ವವನ್ನು ಸಾಕಾರಗೊಳಿಸುವ ಹೆಜ್ಜೆಯಾಗಿವೆ ಎಂದರು.

ಗ್ರಂಥಾಲಯವು ಯಾವುದೇ ವಿಶ್ವವಿದ್ಯಾನಿಲಯದ ಹೃದಯವಾಗಿದ್ದು, ಅದು ಕೇವಲ ಪುಸ್ತಕಗಳ ಸಂಗ್ರಹವಲ್ಲ; ಸಂಶೋಧನೆ, ನಾವೀನ್ಯತೆ ಹಾಗೂ ಬೌದ್ಧಿಕ ಸಂವಾದದ ಕೇಂದ್ರವಾಗಿದೆ. ಹೊಸ ಗ್ರಂಥಾಲಯವು ವಿದ್ಯಾರ್ಥಿಗಳಿಗೆ ಡಿಜಿಟಲ್ ಸಂಪನ್ಮೂಲಗಳು, ಇ-ಪುಸ್ತಕಗಳು ಹಾಗೂ ಆಧುನಿಕ ಅಧ್ಯಯನ ಸೌಲಭ್ಯಗಳ ಮೂಲಕ ವಿಶ್ವದರ್ಜೆಯ ಅಧ್ಯಯನ ಮತ್ತು ಸಂಶೋಧನೆಗೆ ವೇದಿಕೆಯಾಗಲಿದೆ. ಕೇಂದ್ರೀಕೃತ ಅಡುಗೆಮನೆಯು ವಿದ್ಯಾರ್ಥಿಗಳ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ವಿಶ್ವವಿದ್ಯಾನಿಲಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಆರೋಗ್ಯಕರ ವಿದ್ಯಾರ್ಥಿಗಳೇ ಬಲಿಷ್ಠ ರಾಷ್ಟ್ರ ನಿರ್ಮಾಣದ ಆಧಾರವಾಗಿದ್ದು, ಗುಣಮಟ್ಟದ ಆಹಾರವು ವಿದ್ಯಾರ್ಥಿಗಳ ಏಕಾಗ್ರತೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಒಳಾಂಗಣ ಕ್ರೀಡಾಂಗಣವು ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ವಿಶ್ವವಿದ್ಯಾನಿಲಯದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ ರಾಜ್ಯಪಾಲರು, ಕ್ರೀಡೆಗಳು ಶಿಸ್ತು, ನಾಯಕತ್ವ, ಆತ್ಮವಿಶ್ವಾಸ ಹಾಗೂ ತಂಡ ಮನೋಭಾವವನ್ನು ಬೆಳೆಸುತ್ತವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಫಿಟ್ ಇಂಡಿಯಾ” ಹಾಗೂ “ಖೇಲೋ ಇಂಡಿಯಾ” ಅಭಿಯಾನಗಳು ದೇಶದಲ್ಲಿ ಕ್ರೀಡಾ ಸಂಸ್ಕೃತಿಗೆ ಹೊಸ ದಿಕ್ಕು ನೀಡಿದ್ದು, ಈ ಕ್ರೀಡಾಂಗಣದಿಂದ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಶೈಕ್ಷಣಿಕ ಬ್ಲಾಕ್–2ರ ನಿರ್ಮಾಣವು ಭವಿಷ್ಯದ ಪೀಳಿಗೆಯ ಕನಸುಗಳಿಗೆ ಭದ್ರ ಅಡಿಪಾಯವಾಗಿದ್ದು, ಆಧುನಿಕ ಪ್ರಯೋಗಾಲಯಗಳು, ಸ್ಮಾರ್ಟ್ ತರಗತಿ ಕೊಠಡಿಗಳು, ಸಂಶೋಧನಾ ಸೌಲಭ್ಯಗಳು ಹಾಗೂ ನಾವೀನ್ಯತೆ ಕೇಂದ್ರಗಳ ಮೂಲಕ ವಿಶ್ವವಿದ್ಯಾನಿಲಯವು ಶ್ರೇಷ್ಠತೆಯ ಹೊಸ ಎತ್ತರವನ್ನು ತಲುಪಲಿದೆ. ಇಂದು ಜಗತ್ತು ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಜೈವಿಕ ತಂತ್ರಜ್ಞಾನ, ಹಸಿರು ಶಕ್ತಿ, ಸೈಬರ್ ಭದ್ರತೆ ಹಾಗೂ ಡಿಜಿಟಲ್ ನಾವೀನ್ಯತೆಗಳ ಯುಗವನ್ನು ಪ್ರವೇಶಿಸಿದ್ದು, ಈ ಪರಿವರ್ತನೆಗೆ ಭಾರತ ನಾಯಕತ್ವ ನೀಡುವ ಸಾಮರ್ಥ್ಯ ಹೊಂದಿದೆ. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರಾಜ್ಯಪಾಲರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಸಂಸತ್ ಹಾಗೂ ವಿಧಾನಮಂಡಲದ ಸದಸ್ಯರು, ಸಿಂಡಿಕೇಟ್ ಮತ್ತು ಶೈಕ್ಷಣಿಕ ಮಂಡಳಿಯ ಸದಸ್ಯರು, ಸಾರ್ವಜನಿಕ ಪ್ರತಿನಿಧಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | 2047ರ ಭಾರತ ನಿರ್ಮಾಣಕ್ಕೆ ಯುವಶಕ್ತಿಯೇ ಬುನಾದಿ : ಪ್ರೊ. ಪರಶುರಾಮ ಕೆ.ಜಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಗುರಿ...

ತುಮಕೂರು | ಮಾಧ್ಯಮ ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ; ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ‘ಸಿದ್ಧಾರ್ಥ ಸಂಪದ’

ಪತ್ರಿಕೋದ್ಯಮ ಮತ್ತು ಮಾಧ್ಯಮ ಕ್ಷೇತ್ರದ ಕೌಶಲ್ಯಗಳನ್ನು ತರಗತಿಯ ಪಾಠಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಂದಲೇ...

ತುಮಕೂರು | ಲಾಟರಿ ಮೂಲಕ 32 ಮಂದಿಯ ಆಯ್ಕೆ ಬೇಡ ; ಎಲ್ಲ ಅರ್ಹರಿಗೂ ನಿವೇಶನ ನೀಡಿ : ಮಂಜುನಾಥ್ ಹೆತ್ತೇನಹಳ್ಳಿ

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶ್ರಯ...

ತುಮಕೂರು | ಕನ್ನಡದ ಬೆಳವಣಿಗೆಗೆ ಜಾತಿ, ಧರ್ಮಗಳ ಗಡಿಗಳಿಲ್ಲ: ಪ್ರೊ. ಎಸ್. ಮಲ್ಲಣ್ಣ

 ಕನ್ನಡ ಭಾಷೆಯ ಬೆಳವಣಿಗೆಗೆ ಜಾತಿ ಮತ್ತು ಧರ್ಮಗಳ ಗಡಿಗಳು ಎಂದಿಗೂ ಅಡ್ಡಿಯಾಗಿಲ್ಲ....