ತುಮಕೂರು | ಸೋನಂ ವಾಂಗ್‌ಚುಕ್ ಬೆಂಬಲಿಸಿ ಜು.20ರಿಂದ ದೇಶವ್ಯಾಪಿ ಪ್ರತಿಭಟನೆ: ಎಸ್‌ಎಫ್‌ಐ ಕರೆ

Date:

ಸಾಮಾಜಿಕ ಹೋರಾಟಗಾರ ಹಾಗೂ ವಿಜ್ಞಾನಿ ಸೋನಂ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಶನಿವಾರ ನಗರದ ಗಾಂಧೀನಗರದಲ್ಲಿರುವ ಜನಚಳವಳಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿದರು.

- Advertisement -

 ಇದೇ ವೇಳೆ ಜುಲೈ 20ರಿಂದ ರಾಜ್ಯ ಸೇರಿದಂತೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್‌ಎಫ್‌ಐ ಘೋಷಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಂಬ್ಲಿಗಲ್ ಎನ್. ಶಿವಪ್ಪ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಯುತ್ತಿದ್ದು, ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಖಂಡನೀಯ ಎಂದು ಹೇಳಿದರು.

ಸೋನಂ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ 19ನೇ ದಿನಕ್ಕೆ ಕಾಲಿಟ್ಟಿದ್ದರೂ ಕೇಂದ್ರ ಸರ್ಕಾರ ಯಾವುದೇ ಮಾತುಕತೆಗೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಆದರ್ಶ ಎಂ.ಜೆ. ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಐಶೆ ಘೋಷ್ ಕೂಡ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ, ಪರೀಕ್ಷಾ ಅಕ್ರಮಗಳು ಹಾಗೂ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಈ ಎಲ್ಲ ವಿಚಾರಗಳ ವಿರುದ್ಧ ಜುಲೈ 20ರಿಂದ ರಾಜ್ಯ ಮತ್ತು ದೇಶದಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಎಸ್‌ಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಈ. ಶಿವಣ್ಣ ಮಾತನಾಡಿ, ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ನಿರುದ್ಯೋಗ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಸೋನಂ ವಾಂಗ್‌ಚುಕ್ ಅವರ ಹೋರಾಟಕ್ಕೆ ವಿದ್ಯಾರ್ಥಿ, ರೈತ ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸದಿರುವುದು ದುರದೃಷ್ಟಕರ ಎಂದರು. ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಪ್ರಧಾನ ಸಂಚಾಲಕ ಪ್ರಮೋದ್ ಆರ್., ಐಶ್ವರ್ಯ ಎ., ಮಲ್ಲೇಶ್, ಮದನ್, ತೀರ್ಥಪ್ರಸಾದ್ ಕೆ.ಆರ್., ಚಂದನ ಎಚ್.ಆರ್., ಸಂಜಯ್ಯ ಎಚ್.ಎಲ್., ಲೋಹಿತ್ ಎಂ., ಸೈಯದ್ ಮುಜಾಯಿದ್, ಜೀವನ್, ಶರತ್, ಗಾಯತ್ರಿ, ಯಶೋಧ, ನಂದಿನಿ, ದಿವ್ಯಮಣಿ ಎಚ್.ಎಲ್., ಮುಸ್ಕಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...