ತುಮಕೂರು | ಹೆಚ್‌ಎಎಲ್ ವಿಸ್ತರಣೆಗೆ ರೈತರ ಜಮೀನು ಬೇಡ: ಸಾಮಾಜಿಕ ಅರಣ್ಯ ಭೂಮಿ ಬಳಸಲು ಒತ್ತಾಯ

Date:

ತುಮಕೂರು  ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿರುವ ಹೆಚ್‌ಎಎಲ್ (HAL) ವಿಸ್ತರಣಾ ಘಟಕಕ್ಕೆ ಹೆಚ್ಚುವರಿ ಭೂಮಿ ಅಗತ್ಯವಿದ್ದರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದೆ, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ ಹಾಗೂ ಗೋಮಾಳ ಭೂಮಿಯನ್ನು ಬಳಸುವಂತೆ ಒತ್ತಾಯಿಸಿ ಹಾಲಪ್ಪ ಪ್ರತಿಷ್ಠಾನದ ನೇತೃತ್ವದಲ್ಲಿ ನೂರಾರು ರೈತರು ಸೋಮವಾರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಹಾಗೂ ತುಮುಲ್ ನಿರ್ದೇಶಕಿ ಭಾರತೀ ಶ್ರೀನಿವಾಸ್ ನೇತೃತ್ವದಲ್ಲಿ ರೈತರು ಕೆಐಎಡಿಬಿ ಅಧಿಕಾರಿಗಳನ್ನು ಭೇಟಿ ಮಾಡಿ, ರೈತರ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಹೊರಗಿಡುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸುಮಾರು ಹತ್ತು ವರ್ಷಗಳ ಹಿಂದೆ ಬಿದರೆಹಳ್ಳ ಕಾವಲ್‌ನಲ್ಲಿ ಸುಮಾರು 660 ಎಕರೆ ಪ್ರದೇಶದಲ್ಲಿ ಹೆಚ್‌ಎಎಲ್‌ನ ಬಹುಉದ್ದೇಶ ಹೆಲಿಕಾಪ್ಟರ್ ನಿರ್ಮಾಣ ಘಟಕ ಸ್ಥಾಪನೆಯಾಗಿತ್ತು. ಇದೀಗ ವಿಸ್ತರಣೆಗೆ 400 ಎಕರೆಗೂ ಹೆಚ್ಚು ಭೂಮಿ ಅಗತ್ಯವಿದೆ ಎಂದು ಹೆಚ್‌ಎಎಲ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಅದರಂತೆ ಕೆಐಎಡಿಬಿ 457 ಎಕರೆ ಪ್ರದೇಶವನ್ನು ಗುರುತಿಸಿ ವರದಿ ನೀಡಿದೆ. ಈ ಪೈಕಿ ಸುಮಾರು 146 ಎಕರೆ ಫಲವತ್ತಾದ ರೈತರ ಜಮೀನು ಸೇರಿರುವುದರಿಂದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮನವಿ ಸಲ್ಲಿಸಿ ಮಾತನಾಡಿದ ಮುರುಳೀಧರ ಹಾಲಪ್ಪ, ಮೊದಲ ಹಂತದಲ್ಲೇ ರೈತರು ತಮ್ಮ ಭೂಮಿಯನ್ನು ಹೆಚ್‌ಎಎಲ್‌ಗೆ ನೀಡಿದ್ದಾರೆ. ಆದರೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವ ಭರವಸೆ ಈಡೇರಿಲ್ಲ. ಗುತ್ತಿಗೆ ಆಧಾರದ ಉದ್ಯೋಗ ನೀಡಿ ಕೈತೊಳೆದುಕೊಳ್ಳಲಾಗಿದೆ. ಹೀಗಾಗಿ ರೈತರು ಮತ್ತಷ್ಟು ಭೂಮಿ ನೀಡಲು ಸಿದ್ಧರಿಲ್ಲ ಎಂದು ಹೇಳಿದರು.

ಹೆಚ್‌ಎಎಲ್ ಘಟಕಕ್ಕೆ ಹೊಂದಿಕೊಂಡಂತೆ ಸುಮಾರು 2,000 ಎಕರೆ ಸಾಮಾಜಿಕ ಅರಣ್ಯ ಭೂಮಿ ಲಭ್ಯವಿದ್ದು, ವಿಸ್ತರಣೆಗೆ ಅದನ್ನೇ ಬಳಸಬಹುದು. ರೈತರ ಫಲವತ್ತಾದ ಜಮೀನಿಗೆ ಯಾವುದೇ ಧಕ್ಕೆಯಾಗಬಾರದು ಎಂದು ಅವರು ಒತ್ತಾಯಿಸಿದರು.

ತುಮುಲ್ ನಿರ್ದೇಶಕಿ ಭಾರತೀ ಶ್ರೀನಿವಾಸ್ ಮಾತನಾಡಿ, ಸ್ಥಳೀಯ ಶಾಸಕರ ಪ್ರಯತ್ನದಿಂದ ರೈತರ ಫಲವತ್ತಾದ ಜಮೀನು ಉಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಅರಣ್ಯ ಭೂಮಿಯನ್ನು ಕೈಗಾರಿಕಾ ವಿಸ್ತರಣೆಗೆ ಬಳಸಿದರೆ ನಮ್ಮ ಅಭ್ಯಂತರವಿಲ್ಲ. ರೈತರ ಹಿತಾಸಕ್ತಿ ಕಾಪಾಡುವಲ್ಲಿ ನಾವು ಸದಾ ಅವರೊಂದಿಗೆ ಇರುತ್ತೇವೆ ಎಂದು ಹೇಳಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ರೈತ ಮುಖಂಡರಾದ ಗೋವಿಂದೇಗೌಡ, ರೈತ ಸಂಘದ ರಾಚಪ್ಪ ಸೇರಿದಂತೆ ಹಲವು ಮುಖಂಡರು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...