ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

Date:

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ ಮುಖಂಡರಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಚುನಾವಣಾ ಪ್ರಚಾರದ ವಿಚಾರವಾಗಿ ಭಿನ್ನಾಭಿಪ್ರಾಯ ವ್ಯಕ್ತವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

- Advertisement -

ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಸುರೇಶ್ ಪರವಾಗಿ ಮಾತನಾಡುತ್ತಿದ್ದ ಸಂದರ್ಭದಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಹಾಗೂ ವೀರಶೈವ ಮಹಾಸಭಾದ ಉಪಾಧ್ಯಕ್ಷ ಶಶಿ ಹುಲಿಕುಂಟೆ ಮಠ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಮಾಜದ ಮುಖಂಡರ ಸಭೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ಶಶಿ ಹುಲಿಕುಂಟೆ ಮಠ್ ಅವರು ವಿರೋಧ ವ್ಯಕ್ತಪಡಿಸಿದರು. ಅವರ ಆಕ್ಷೇಪಕ್ಕೆ ಸಭೆಯಲ್ಲಿದ್ದ ಕೆಲ ಸದಸ್ಯರೂ ಬೆಂಬಲ ಸೂಚಿಸಿದರು. ಇದರಿಂದ ಸಭೆಯಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭದಲ್ಲಿ ಸಚಿವ ವಿ. ಸೋಮಣ್ಣ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರೂ, ಆಕ್ಷೇಪಗಳು ಮುಂದುವರಿದವು. ಪರಿಣಾಮವಾಗಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದರು.

ವಿಷಯ ತಿಳಿಗೊಳಿಸಲು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಳ ರವಿಶಂಕರ್ ಮಧ್ಯಪ್ರವೇಶಿಸಿದರು.

ಚುನಾವಣಾ ಪ್ರಚಾರದ ವಿಚಾರವಾಗಿ ಸಭೆಯಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...