ತುಮಕೂರು | ಒಪಿಎಸ್ ಜಾರಿಗೆ ಶೀಘ್ರ ಆದೇಶ: ಡಿಸಿಎಂ ಪರಮೇಶ್ವರ್

Date:

ಶಿಕ್ಷಕರು ಹಾಗೂ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೇ ಪಿಂಚಣಿ ಪದ್ಧತಿ (ಒಪಿಎಸ್) ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.

- Advertisement -

ನಗರದ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 139ನೇ ಜನ್ಮದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಒಪಿಎಸ್ ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಹಾಗೂ ತಾವು ಈಗಾಗಲೇ ಚರ್ಚಿಸಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಇದರಿಂದ ಶಿಕ್ಷಕರು ಹಾಗೂ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದ್ದು, ಸರ್ಕಾರದ ಮೇಲೆ ದೊಡ್ಡ ಆರ್ಥಿಕ ಹೊರೆ ಬೀಳಲಿದೆ. ಆದರೂ ನೌಕರರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಶಿಕ್ಷಕರ ಸಂಘಟನೆಗಳ ಮನವಿ ಮೇರೆಗೆ ಒಪಿಎಸ್‌ನ್ನು ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಲಾಗಿತ್ತು. ಕಾರಣಾಂತರಗಳಿಂದ ಮೂರು ವರ್ಷ ವಿಳಂಬವಾಗಿದ್ದು, ಇದೀಗ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದರು.

ಶಿಕ್ಷಕರು ದೇಶ ನಿರ್ಮಾಣದ ಪ್ರಮುಖ ಶಿಲ್ಪಿಗಳು. ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಜೀವನ ಮೌಲ್ಯ ಹಾಗೂ ಸೂಕ್ತ ಮಾರ್ಗದರ್ಶನ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಭಾರತ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿರುವುದರ ಹಿಂದೆ ಶಿಕ್ಷಕರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಯುವ ಸಮೂಹಕ್ಕೆ ದೇಶಾಭಿಮಾನ ಹಾಗೂ ಉತ್ತಮ ಭವಿಷ್ಯದ ದಾರಿ ತೋರಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳ 18 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಬಿ. ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಅಧಿಕಾರಿಗಳು, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...