ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

Date:

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ ಸತ್ಯವನ್ನು ಪ್ರಾಮಾಣಿಕವಾಗಿ ಪ್ರತಿಪಾದಿಸಬೇಕು. ಸಾಹಿತ್ಯವು ಕೇವಲ ಹೊಗಳಿಕೆಗೆ ಸೀಮಿತವಾಗದೆ, ಸಮಾಜವನ್ನು ಸರಿದಾರಿಗೆ ತರುವ ಶಕ್ತಿಯಾಗಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಹೇಳಿದರು.

- Advertisement -

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿರುವ ಅಮರಶಿಲ್ಪಿ ಜಕಣಾಚಾರಿ ಸಾಂಸ್ಕೃತಿಕ ವೈಭವ ಮಹಾವೇದಿಕೆಯಲ್ಲಿ ಶನಿವಾರ ತುಮಕೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಹಿರಿಯರ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಕವಿತೆ ರಚನೆಗೆ ಕಲ್ಪನೆ, ನಿರಂತರ ಅಭ್ಯಾಸ ಹಾಗೂ ಭಾಷೆಯ ಮೇಲಿನ ಹಿಡಿತ ಅಗತ್ಯ. ಕವಿತೆಗಳು ಕೇಳುಗರ ಮನಸ್ಸಿನಲ್ಲಿ ಉಳಿಯುವಂತಿರಬೇಕು. ದೇವಾಲಯಗಳಂತೆ ಗ್ರಂಥಾಲಯಗಳಿಗೂ ಜನರು ಭೇಟಿ ನೀಡುವ ವಾತಾವರಣ ನಿರ್ಮಾಣವಾಗಬೇಕು. ಕವಿಗಳು ಜಾತಿವಾದ ಮತ್ತು ಕೋಮುವಾದಗಳಿಂದ ದೂರವಿದ್ದು, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸತ್ಯವನ್ನು ಪ್ರತಿಪಾದಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ ಬಿ.ವಿ. ಮಾತನಾಡಿ, ಸಾಹಿತ್ಯವು ಸಮಾಜದ ಪ್ರತಿಬಿಂಬವಾಗಿದ್ದು, ಸಾಮಾಜಿಕ ಪರಿವರ್ತನೆಗೆ ಪ್ರೇರಣೆ ನೀಡುತ್ತದೆ. ತುಮಕೂರು ಜಿಲ್ಲೆ ಸಾಹಿತ್ಯ, ಕಲೆ ಮತ್ತು ನಾಟಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದೆ. ದಸರಾ ಮಹೋತ್ಸವದಲ್ಲಿ ಹಿರಿಯರು ಹಾಗೂ ಕಿರಿಯ ಕವಿಗಳಿಗೆ ವೇದಿಕೆ ಕಲ್ಪಿಸುವ ಮೂಲಕ ಸಾಹಿತ್ಯಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಾಧ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಕಥಾಕೀರ್ತನಕಾರ ಡಾ. ಲಕ್ಷ್ಮಣ್‌ದಾಸ್ ಸೇರಿದಂತೆ ಕವಿಗಳು, ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...